ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪಕ್ಷ ರಾಜಕೀಯವಾಗಿ ಹೀನಾಯ ಸ್ಥಿತಿಗೆ ತಲುಪಿರುವುದರಿಂದ ಅವರು ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಸೇರಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದರು.
ಮದ್ದೂರು (ಜ.29): ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪಕ್ಷ ರಾಜಕೀಯವಾಗಿ ಹೀನಾಯ ಸ್ಥಿತಿಗೆ ತಲುಪಿರುವುದರಿಂದ ಅವರು ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಸೇರಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಳಿದುಳಿದ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿದಲ್ಲಿ ಅಚ್ಚರಿ ಪಡಬೇಕಾಗಿಲ್ಲ ಎಂದು ಲೇವಡಿ ಮಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ.
ಇದರ ಅರ್ಥ ಇನ್ನು ರಾಜ್ಯಕ್ಕೆ ಜೆಡಿಎಸ್ ಪಕ್ಷದ ಅವಶ್ಯಕತೆ ಇಲ್ಲ ಎಂಬುದಾಗಿದೆ. ಜನ ಸಾಮಾನ್ಯರ ಜೊತೆ ನಿಲ್ಲದಿರುವುದು ಮತ್ತು ಕಾರ್ಯಕರ್ತರಿಗೆ ಅವಕಾಶ ನೀಡಿದೆ ಪಕ್ಷವನ್ನು ಕುಟುಂಬಕ್ಕೆ ಸೀಮಿತಗೊಳಿಸಿದ್ದರಿಂದಲೇ ಇವತ್ತು ಜೆಡಿಎಸ್ ಹೀನಾಯ ಸ್ಥಿತಿಗೆ ಬರಲು ಕಾರಣವಾಗಿದೆ ಎಂದು ಟೀಕಿಸಿದರು. ಚುನಾವಣೆ ಉದ್ದೇಶದಿಂದ ಜೆಡಿಎಸ್ ಬಿಜೆಪಿ ಜೊತೆ ಕೈ ಜೋಡಿಸಿದರೆ ಅದು ಬಿಜೆಪಿಗೆ ಕೆಡುಕೆ ಹೊರತು ಪ್ಲಸ್ ಆಗುವುದಿಲ್ಲ. ಈಗಾಗಲೇ ಜೆಡಿಎಸ್ ಜೊತೆ ಕೈಜೋಡಿಸಿದ್ದ ಕಾಂಗ್ರೆಸ್ ಒಮ್ಮೆ ಅದರ ಫಲ ಅನುಭವಿಸಿದೆ. ಮುಂದೆ ಸಹ ಬಿಜೆಪಿಗೂ ಇದೇ ಪರಿಸ್ಥಿತಿಗೆ ಬಂದು ನಿಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
undefined
ಕಾಂಗ್ರೆಸ್ ಸೇರುವಂತೆ ಸುಮಲತಾರನ್ನು ಯಾರೂ ಸಂಪರ್ಕಿಸಿಲ್ಲ: ಸಂಸದೆ ಸುಮಲತಾ ಬಿಜೆಪಿಯಿಂದಲೇ ಸಂಸದರಾಗಲು ಇಚ್ಛಿಸಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಸೇರುವಂತೆ ಪಕ್ಷದ ಯಾವುದೇ ನಾಯಕರಾಗಲಿ, ಶಾಸಕರಾಗಲಿ ಅವರನ್ನು ಸಂಪರ್ಕಿಸಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕಾಂಗ್ರೆಸ್‌ಗೆ ಹೋಗಲ್ಲ. ಬಿಜೆಪಿಯಿಂದಲೇ ಟಿಕೆಟ್ ಬಯಸುತ್ತೇನೆಂದು ತಿಳಿಸಿದ್ದಾರೆ. ಹೀಗಾಗಿ ನಮ್ಮನ್ನು ಏಕೆ ಸಂಪರ್ಕಿಸುತ್ತಾರೆ ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿಯನ್ನು ಕಂಡರೆ ರಾಜ್ಯದ ಸಂಸದರಿಗೆ ಹೆದರಿಕೆ: ಸಚಿವ ಶಿವರಾಜ ತಂಗಡಗಿ
ಅವರಿಗೂ ನಮಗೂ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಂಬರೀಶ್ ಮತ್ತು ನಾನು ಒಳ್ಳೆಯ ಸ್ನೇಹಿತರು, ಅವರ ಕಾಲಾನಂತರ ಸುಮಲತಾ ರಾಜಕಾರಣಕ್ಕೆ ಬಂದಿದ್ದಾರೆ. ಅವರನ್ನು ನಾನಾಗಲಿ, ನಮ್ಮ ಶಾಸಕರು ಮತ್ತು ನಮ್ಮ ನಾಯಕರಾಗಲಿ ಯಾರೂ ಸಂಪರ್ಕ ಮಾಡಿಲ್ಲ. ಒಂದು ವೇಳೆ ಸಂಪರ್ಕ ಮಾಡಿದ್ದರೆ ಯಾರು ಎಂಬುದನ್ನು ಸಂಸದರೇ ಬಹಿರಂಗಪಡಿಸಲಿ ಎಂದರು. ಲೋಕಸಭಾ ಚುನಾವಣೆ ಅಭ್ಯರ್ಥಿ ಆಯ್ಕೆಯಲ್ಲಿ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಶೀಘ್ರ ಕಾಂಗ್ರೆಸ್ ಅಭ್ಯರ್ಥಿಯನ್ನು ರಾಷ್ಟ್ರ ಮತ್ತು ರಾಜ್ಯ ನಾಯಕರು ಘೋಷಣೆ ಮಾಡುತ್ತಾರೆ. ಬಹುಶಃ ಫೆಬ್ರವರಿ ಎರಡನೇ ವಾರದೊಳಗೆ ಅಭ್ಯರ್ಥಿ ಘೋಷಣೆ ಆಗಲಿದೆ ಎಂದರು.