ಸಚಿವರ ಆಗಮನದ ವೇಳೆಯಲ್ಲೇ ಭಾರೀ ಸ್ಫೋಟ, ಅಪಾಯದಿಂದ ಪಾರಾದ ನಾರಾಯಣಗೌಡ

By Suvarna NewsFirst Published Jun 7, 2020, 8:39 PM IST
Highlights

ತೋಟಗಾರಿಕೆ ಸಚಿವ ನಾರಾಯಣಗೌಡ  ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಅಪಾಯದಿಂದ ಪಾರಾಗಿದ್ದಾರೆ.

ಮಂಡ್ಯ, (ಜೂನ್.07): ತೋಟಗಾರಿಕೆ ಸಚಿವ ನಾರಾಯಣಗೌಡ ಅಪಾಯದಿಂದ ಸ್ವಲ್ಪದರಲ್ಲೇ ಪಾರಾದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಬಂಕಾಪುರ ಸಮೀಪ ನಡೆದಿದೆ.

ನಾರಾಯಣಗೌಡ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಬಂಕಾಪುರದ ಸಮೀಪ ರಸ್ತೆ ಬದಿಯಲ್ಲೇ ಕಲ್ಲು ಬಂಡೆಯನ್ನು ಬ್ಲಾಸ್ಟ್ ಮಾಡಲಾಗಿದೆ. ಅದೃಷ್ಟವಶಾತ್ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಯಾವುದೇ ಅಪಾಯವಾಗಿಲ್ಲ. 

ಬೆಂಗಳೂರು -ಜಲಸೂರು ರಸ್ತೆ ನಿರ್ಮಾಣ ಕಾಮಗಾರಿ ನಡೆದಿದ್ದು, ಕಲ್ಲುಬಂಡೆ ಸಿಡಿಸಲು ಬ್ಲಾಸ್ಟಿಂಗ್ ಮಾಡಲಾಗಿದೆ. ಇದೇ ಮಾರ್ಗವಾಗಿ ಸಚಿವರು ಕೆಆರ್ ಪೇಟೆಗೆ ಆಗಮಿಸುತ್ತಿದ್ದ ವೇಳೆ ಕಲ್ಲಬುಂಡೆಯನ್ನು ಸ್ಪೋಟಿಸಲಾಗಿದೆ.

ಯವ ನಟ ಚಿರಂಜೀವಿ ಸರ್ಜಾ ನಿಧನ, ಕೋರ್ಟ್ ವಿಚಾರಣೆ ವೇಳೆ ವೃದ್ಧನ ಮರಣ; ಜೂ.7ರ ಟಾಪ್ 10 ಸುದ್ದಿ!

ಸ್ಪೋಟಕ ಸಿಡಿಸುವ ವೇಳೆಯಲ್ಲಿ ರಸ್ತೆ ಸಂಚಾರ ಬಂದ್ ಮಾಡಿಲ್ಲ, ಯಾವುದೇ ಮುನ್ನೆಚ್ಚರಿಕೆ, ಮುಂಜಾಗ್ರತೆ ಕ್ರಮ ತೆಗೆದುಕೊಳ್ಳದೆ ಕಲ್ಲುಬಂಡೆಗಳನ್ನು ಬ್ಲಾಸ್ಟ್ ಮಾಡಲಾಗಿದ್ದು, ಬೇಜವಾಬ್ದಾರಿ ತೋರಿದ ಗುತ್ತಿಗೆದಾರನ ವಿರುದ್ಧ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಆತನನ್ನು ಕೂಡಲೇ ಬಂಧಿಸುವಂತೆ ನಾರಾಯಣಗೌಡ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಕೂಡಲೇ ಪೊಲೀಸರು ಕೆಶಿಪ್ ರಸ್ತೆ ಕಾಮಗಾರಿ ಕೈಗೊಂಡಿದ್ದ ಮೈಸೂರಿನ ಗುತ್ತಿಗೆದಾರ ಶ್ರೀನಿವಾಸ ರಾಜ್ ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

click me!