RSS ಬೆಂಬಲಿತ ವ್ಯಕ್ತಿಯ ಬೆದರಿಕೆ ಕರೆ ರೆಕಾರ್ಡ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Published : Oct 15, 2025, 10:32 AM IST
Priyank Kharge on RSS

ಸಾರಾಂಶ

RSS Vs Priyank Kharge: ಸಚಿವ ಪ್ರಿಯಾಂಕ್ ಖರ್ಗೆಯವರು, RSS ಯುವಕರ ಮನಸ್ಸಿನಲ್ಲಿ ಕಲ್ಮಶ ತುಂಬುತ್ತಿದೆ ಎಂದು ಆರೋಪಿಸಿದ್ದಾರೆ. ತಮಗೆ ಬಂದ ನಿಂದನಾತ್ಮಕ ಕರೆಯೊಂದನ್ನು ಉದಾಹರಣೆಯಾಗಿ ಹಂಚಿಕೊಂಡಿದ್ದಾರೆ.

ಬೆಂಗಳೂರು: RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿವೈ ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ, ಸುನಿಲ್ ಕುಮಾರ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ ಎಂದು ಪ್ರಿಯಾಂಕ್ ಖರ್ಗೆ ಕೇಳಿದ್ದಾರೆ.

ಬಡವರ ಮಕ್ಕಳ ಬಳಕೆ!

ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ. ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಬಗ್ಗೆ ಮಾಹಿತಿ ಇಲ್ಲ: ಸಿಎಂ ಸಿದ್ದರಾಮಯ್ಯ

ನನ್ನದು ಸೈದ್ದಾಂತಿಕ ರಾಜಕಾರಣ

RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ ಎಂದಿದ್ದಾರೆ.

ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ ಚಟುವಟಿಕೆ ಪ್ರಶ್ನಿಸಿದ್ದಕ್ಕೆ ನನಗೆ ನಿತ್ಯ ಬೆದರಿಕೆ ಕರೆ: ಸಚಿವ ಪ್ರಿಯಾಂಕ್‌ ಖರ್ಗೆ

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ