ಅಮಿತ್ ಶಾ ಅಸಮರ್ಥ ಹೋಂ ಮಿನಿಸ್ಟರ್: ಸಚಿವ ಪ್ರಿಯಾಂಕ್ ಖರ್ಗೆ

Published : Dec 20, 2023, 08:03 AM IST
ಅಮಿತ್ ಶಾ ಅಸಮರ್ಥ ಹೋಂ ಮಿನಿಸ್ಟರ್: ಸಚಿವ ಪ್ರಿಯಾಂಕ್ ಖರ್ಗೆ

ಸಾರಾಂಶ

ಇಡೀ ಜಗತ್ತಿನ ಗಮನ ಸೆಳೆದಿರುವ ಸಂಸತ್ ಮೇಲಿನ ದಾಳಿ ಪ್ರಕರಣದ ಕುರಿತು ಇಂದಿಗೂ ಸದನದಲ್ಲಿ ಒಂದು ಹೇಳಿಕೆ ನೀಡಲಾಗದ ಅಮಿತ್ ಶಾ ಈ ದೇಶ ಕಂಡ ಅಸಮರ್ಥ ಗೃಹ ಸಚಿವ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಐಟಿ-ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು. 

ಕಲಬುರಗಿ (ಡಿ.20): ಇಡೀ ಜಗತ್ತಿನ ಗಮನ ಸೆಳೆದಿರುವ ಸಂಸತ್ ಮೇಲಿನ ದಾಳಿ ಪ್ರಕರಣದ ಕುರಿತು ಇಂದಿಗೂ ಸದನದಲ್ಲಿ ಒಂದು ಹೇಳಿಕೆ ನೀಡಲಾಗದ ಅಮಿತ್ ಶಾ ಈ ದೇಶ ಕಂಡ ಅಸಮರ್ಥ ಗೃಹ ಸಚಿವ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಐಟಿ-ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಸಂಸತ್ ಮೇಲಿನ ದಾಳಿ ಯತ್ನ ಒಂದು ಗಂಭೀರ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ. 

ಇಷ್ಟಾದರೂ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಈ ಕುರಿತು ಅಧಿಕೃತವಾದ ಹೇಳಿಕೆ ನೀಡಲು ಹಿಂದೇಟು ಹಾಕುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಸಂಸತ್ ಸದಸ್ಯರ ಅಮಾನತು ಕುರಿತಂತೆ ಪ್ರತಿಕ್ರಿಯಿಸಿದ ಅವರು, ದೇಶದ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಎಂದೂ ಚುನಾಯಿತ ಸದಸ್ಯರ ಅಮಾನತು ಆಗಿರಲಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹ ಸಚಿವರು ಪಾರ್ಲಿಮೆಂಟ್‍ನಲ್ಲಿ ಹೇಳಿಕೆ ನೀಡಬೇಕೆ ಹೊರತು, ಪ್ರತಿಪಕ್ಷಗಳ ಸದಸ್ಯರನ್ನು ಹೀಗೆ ಅಮಾನತುಗೊಳಿಸಲು ಮುಂದಾಗಬಾರದು. ಇದವರ ಅಸಮರ್ಥ ಕಾರ್ಯಶೈಲಿಯನ್ನು ಎತ್ತಿ ತೋರಿಸುತ್ತಿದೆ ಎಂದರು.

ಕಾಶಿ, ಮಥುರಾಗಳ ವಿಮೋಚನೆಯಾಗಲೇಬೇಕು: ಪೇಜಾವರ ಶ್ರೀ

ಕೇಂದ್ರದಿಂದ ನರೇಗಾ ಯೊಜನೆಯ ₹೬೦೦ ಕೊಟಿ ಬಾಕಿ: ಗ್ರಾಮೀಣ ಭಾಗದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡುವ ನರೇಗಾ ಯೊಜನೆ ಕಾಮಗಾರಿಯಿಂದ ೧೦೦ ದಿನಗಳ ಕೆಲಸ ನೀಡುತ್ತಿದ್ದು, ರಾಜ್ಯದಲ್ಲಿ ಭೀಕರ ಬರಗಾಲದಲ್ಲಿ ಇದನ್ನು ೧೫೦ ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ನಮ್ಮ ಸರ್ಕಾರವು ಒತ್ತಾಯಿಸುತ್ತಿದ್ದರೂ ಕೇಂದ್ರ ಸರ್ಕಾರವು ನಮ್ಮ ಬೇಡಿಕೆಗೆ ಸ್ಪಂಧಿಸದೆ ಕೆಲಸ ಮಾಡಿರುವ ೧೦೦ ದಿನಗಳ ವೇತನದಲ್ಲಿಯೇ ಸುಮಾರು ೬೦೦ ಕೊಟಿ ಅನುದಾನವನ್ನು ನೀಡದೇ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ತಾಲೂಕಿನ ಕದ್ದರಗಿ ಗ್ರಾಮದಲ್ಲಿ ಕದ್ದರಗಿ ಗ್ರಾಮದಿಂದ ಯರಗಲ್ ವರೆಗಿನ ರಸ್ತೆ ಕಾಮಗಾರಿಗೆ ₹೫೦ ಲಕ್ಷ ಮತ್ತು ಶಾಲಾ ಕಟ್ಟಡ ನಿರ್ಮಾಣಕ್ಕೆ ₹೧೩.೯೦ ಲಕ್ಷ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರವು ಆಳುವ ಸರ್ಕಾರವಲ್ಲಾ ಜನರ ನೋವನ್ನು ಆಲಿಸುವ ಸರ್ಕಾರವಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಬದ್ಧರಾಗಿದ್ದು ಅದರಂತೆ ಅಭಿವೃದ್ಧಿಯನ್ನು ಮಾಡುತ್ತಿದ್ದೇವೆ ಎಂದರು.

ನಾವು ವಿಧಾನಸಭೆ ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಯಂತೆ ೪ ಗ್ಯಾರಂಟಿ ಯೊಜನೆಗಳನ್ನು ಜಾರಿಗೆ ತಂದಿದ್ದು ಶಕ್ತಿ ಯೊಜನೆಯಡಿಯಲ್ಲಿ ನಿತ್ಯ ೬೦ ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಗೃಹಜ್ಯೊತಿ ಯೊಜನೆಯಡಿಯಲ್ಲಿ ೧.೫೦ ಕೊಟಿ ಫಲಾನುಭವಿಗಳು ೨೦೦ ಯೂನಿಟ್ ಕರೆಂಟ್ ಫ್ರೀ ಪಡೆದುಕೊಳ್ಳುತ್ತಿದ್ದಾರೆ. ಅನ್ನಭಾಗ್ಯ ಯೊಜನೆಯಡಿಯಲ್ಲಿ ೫ ಕೆ.ಜಿ ಅಕ್ಕಿ ನೀಡುವ ಯೊಜನೆಗೆ ಕೇಂದ್ರ ಅಕ್ಕಿ ನೀಡದೇ ಇರುವದರಿಂದ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಮೋಸಗಾರ, ದಲಿತರ ಪರವಾಗಿಲ್ಲ: ಗೋವಿಂದ ಕಾರಜೋಳ ಆರೋಪ

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಬ್ ರೀಜನಲ್ ಸೆಂಟರ್‌ಗಳನ್ನು ಕಲಬುರಗಿ ಮತ್ತು ಚಿತ್ತಾಪುರ ತಾಲೂಕಿನಲ್ಲಿ ಮುಂದಿನ ಏಪ್ರಿಲ್ ಒಳಗಾಗಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲೆಯಲ್ಲಿ ಬರಗಾಲ ಘೋಷಣೆಯಾಗಿದ್ದು, ತಾಲೂಕಿನ ಯಾವ ಗ್ರಾಮದಲ್ಲಿಯೂ ತೊಂದರೆ ಆಗದ ರೀತಿಯಲ್ಲಿ ತಾಲೂಕು ಆಡಳಿತ ಸಿದ್ಧರಾಗಿರಬೇಕು. ಇದರಲ್ಲಿ ಅಧಿಕಾರಿಗಳು ನಿರ್ಲಕ್ಷವನ್ನು ತೊರಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!