ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು: ಆರಗ ಹೇಳಿಕೆಗೆ ಪ್ರಿಯಾಂಕ್ ತಿರುಗೇಟು

By Govindaraj S  |  First Published Aug 3, 2023, 5:48 PM IST

ಹಿರಿಯ ಮುತ್ಸದ್ಧಿ ರಾಜಕಾರಣಿ ಹಾಗೂ ರಾಜ್ಯಸಭೆ ವಿರೋಧಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಖಡಕ್ ತಿರುಗೇಟು ನೀಡಿದ್ದಾರೆ.


ಕಲಬುರಗಿ (ಆ.03): ಹಿರಿಯ ಮುತ್ಸದ್ಧಿ ರಾಜಕಾರಣಿ ಹಾಗೂ ರಾಜ್ಯಸಭೆ ವಿರೋಧಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಖಡಕ್ ತಿರುಗೇಟು ನೀಡಿದ್ದು, 'ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ' ಎಂದು ಮಾರುತ್ತರ ನೀಡಿದ್ದಾರೆ.

ಬಿಜೆಪಿ ಪ್ರತಿಭಟನೆ ವೇಳೆ ಖರ್ಗೆ ಅವರ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದ ಜ್ಞಾನೇಂದ್ರ, ಕಲ್ಯಾಣ ಕರ್ನಾಟಕ ಭಾಗದವರು ಸುಟ್ಟು ಕರುಕಲಾಗಿರುತ್ತಾರೆ, ಖರ್ಗೆಯವರನ್ನ ನೋಡಿದರೆ ಗೊತ್ತಾಗುತ್ತದೆ ಎಂದು ಅವಹೇಳನ ಮಾಡಿದ್ದರು.  ಈ ಹೇಳಿಕೆ ವಿರುದ್ದ ಕೆರಳಿ ಕೆಂಡವಾದ ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕರ ವಿರುದ್ದ ಕಟು ಮಾತುಗಳಿಂದ ಖಂಡಿಸಿದ್ದರು. ಜೊತೆಗೆ, ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದರು.

Tap to resize

Latest Videos

ಎಚ್‌ಡಿಕೆ ತೋರಿಸಿದ್ದ ಪೆನ್‌ಡ್ರೈವ್‌ ಎಲ್ಲಿ ಹೋಯ್ತು?: ಪ್ರಿಯಾಂಕ್‌ ಖರ್ಗೆ

ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಖರ್ಗೆ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆ ಮಾತು ಎಂದು ಟ್ವೀಟ್ ಮಾಡಿದ್ದಾರೆ. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ '

ಸಿಎಂ ಎಲ್ಲರನ್ನೂ ಸಮಾಧಾನ ಮಾಡಲು ಆಗಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

'ಶತ ಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ'. 'ಮನುಸ್ಮೃತಿ ಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿ ದಲಿತರ ರಾಜಕೀಯ ಏಳಿಗೆ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ'. 'ಕರ್ನಾಟಕ ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರುಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿ ಯ ಕಾಲವಲ್ಲ, ಬಾಬಾಸಾಹೇಬರ ಸಂವಿಧಾನದ ಕಾಲ' ಎಂದು ಹೇಳಿದ್ದಾರೆ.
 

, ಅವರೇ,

ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು.

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ.

ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge)
click me!