ನನಗೆ ಬಂದಿರುವ ಜೀವ ಬೆದರಿಕೆ, ಎನ್‌ಕೌಂಟರ್ ಮಾಡೋದಾಗಿ ಧಮಕಿ ಇರುವಂತಹ ಇನ್‌ಲ್ಯಾಂಡ್ ಪತ್ರದ ಹಿಂದೆ ಬಿಜೆಪಿ ಹಾಗೂ ಸಂಘ ಪರಿವಾರದ ಮನುವಾದಿ ಮನಸ್ಸುಗಳೇ ಇವೆ ಎಂದು ಬಲವಾದಂತಹ ಶಂಕೆ ಎಂದು ಆರ್‌ಡಿಪಿಆರ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿ (ಮಾ.29): ನನಗೆ ಬಂದಿರುವ ಜೀವ ಬೆದರಿಕೆ, ಎನ್‌ಕೌಂಟರ್ ಮಾಡೋದಾಗಿ ಧಮಕಿ ಇರುವಂತಹ ಇನ್‌ಲ್ಯಾಂಡ್ ಪತ್ರದ ಹಿಂದೆ ಬಿಜೆಪಿ ಹಾಗೂ ಸಂಘ ಪರಿವಾರದ ಮನುವಾದಿ ಮನಸ್ಸುಗಳೇ ಇವೆ ಎಂದು ಬಲವಾದಂತಹ ಶಂಕೆ ಎಂದು ಆರ್‌ಡಿಪಿಆರ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮುಂಚೆ 3 ಬಾರಿ ಜೀವ ಬೆದರಿಕೆ ಕರೆಗಳು ಬಂದಿದ್ದು ದೂರು ದಾಖಲಿಸಿರುವೆ. ಈಗ ಜೀವ ಬೆದರಿಕೆಯ ಲಿಖಿತ ಪತ್ರವೇ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಪರಿವಾರದ ಸದಸ್ಯರ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದಾರೆ. ಜಾತಿ ಪ್ರಸ್ತಾಪಿಸಿ ನಿಂದಿಸಿದ್ದಾರೆಂದು ದೂರಿದರು.
ನೀವೇ (ಬಿಜೆಪಿ) ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದೀರಿ. ನನ್ನ ಸಾವು ಬಯಸುತ್ತಿದ್ದೀರಿ, ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂದು ಕುಳಿತಿದ್ದೀರಿ. ಅದಕ್ಕೇ ಸ್ಥಳೀಯ ಸಂಸದರು ಪದೇ ಪದೇ ಕಾನೂನು ಸುವ್ಯವಸ್ಥೆ ಹಾಳಗಿದೆ ಎಂದು ದೂರುತ್ತಿದ್ದಾರೆ. ಇವೆಲ್ಲ ನೋಡಿದರೆ ಅವರ ಪ್ಲಾನ್ ಸುವ್ಯವಸ್ಥೆ ಹಾಳು ಮಾಡಿ ಚುನಾವಣೆ ಗೆಲ್ಲೋದೇ ಆಗಿರುವಂತಿದೆ ಎಂದು ದೂರಿದರು.
ಬಿಜೆಪಿಯವರಿಗೆ ಖರ್ಗೆ ಪರಿವಾರವನ್ನ, ಅದರಲ್ಲೂ ನನ್ನನ್ನು ರಾಜಕೀಯವಾಗಿ ಎದುರಿಸಲು ಆಗುತ್ತಿಲ್ಲ. ಹೀಗಾಗೇ ವೈಯಕ್ತಿಕವಾಗಿ ನನ್ನ ಅವಹೇಳನ ಮಾಡಲು ಮುಂದಾಗಿ ಬೇರೆ ರೀತಿಯ ಪ್ಲಾನ್ ರೂಪಿಸುತ್ತಿರುವಂತಿದೆ. ವೈಯಕ್ತಿಕ ಟೀಕೆಗಳಿಗೆ ನಾನು ಹೆದರೋದಿಲ್ಲ. ಜನಾಶೀರ್ವಾದದಿಂದ ನಾನು ರಾಜಕೀಯದಲ್ಲಿ ಮೇಲೆ ಬಂದವನು. ಇವರೆಲ್ಲರ ಗೊಡ್ಡು ಬೆದರಿಕೆಗಳಿಗೆ ಸೊಪ್ಪು ಹಾಕೋನಲ್ಲವೆಂದು ಪ್ರಿಯಾಂಕ್ ಬಿಜೆಪಿಗೆ ತಿರುಗೇಟು ನೀಡಿದರು.
ಲೋಕಸಭಾ ಚುನಾವಣಾ ಪ್ರಚಾರ ಚರ್ಚಿಸಲು 29ಕ್ಕೆ ಜಂಟಿ ಸಭೆ: ಎಚ್.ಡಿ.ಕುಮಾರಸ್ವಾಮಿ
ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದೀರಿ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂದು ಕುಳಿತಿದ್ದೀರಿ. ಅದಕ್ಕೇ ಸ್ಥಳೀಯ ಸಂಸದರು ಪದೇ ಪದೇ ಕಾನೂನು ಸುವ್ಯವಸ್ಥೆ ಹಾಳಗಿದೆ ಎಂದು ದೂರುತ್ತಿದ್ದಾರೆ. ಇವೆಲ್ಲ ನೋಡಿದರೆ ಅವರ ಪ್ಲಾನ್ ಸುವ್ಯವಸ್ಥೆ ಹಾಳು ಮಾಡಿ ಚುನಾವಣೆ ಗೆಲ್ಲೋದೇ ಆಗಿರುವಂತಿದೆ.
- ಪ್ರಿಯಾಂಕ್ ಖರ್ಗೆ, ಸಚಿವ