ಸಿದ್ದು ದಿಕ್ಕು ಕಾಣದೆ ಅಲೆಯುತ್ತಿರುವ ನಾಯಕ: ಸಚಿವ ಅಶೋಕ್‌ ಲೇವಡಿ

By Govindaraj SFirst Published Jan 13, 2023, 3:20 AM IST
Highlights

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಂದು ರೀತಿ ದಿಕ್ಕು ಕಾಣದೆ ಅಲೆಯುತ್ತಿರುವ ನಾಯಕ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೀನಾಯ ಸೋಲು ಕಂಡರು. ಚಾಮುಂಡೇಶ್ವರಿ ಕ್ಷೇತ್ರವನ್ನು ಯಾಕೆ ತೊರೆದರು ಎಂದು ಜನರು ಕೂಡ ಕೇಳುತ್ತಿದ್ದಾರೆ. 

ಬೆಂಗಳೂರು (ಜ.13): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಂದು ರೀತಿ ದಿಕ್ಕು ಕಾಣದೆ ಅಲೆಯುತ್ತಿರುವ ನಾಯಕ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೀನಾಯ ಸೋಲು ಕಂಡರು. ಚಾಮುಂಡೇಶ್ವರಿ ಕ್ಷೇತ್ರವನ್ನು ಯಾಕೆ ತೊರೆದರು ಎಂದು ಜನರು ಕೂಡ ಕೇಳುತ್ತಿದ್ದಾರೆ. ಒಂದು ವೇಳೆ ಅಭಿವೃದ್ಧಿ ಕಾರ್ಯ ಮಾಡಿದರೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾಕೆ ಸೋಲು ಅನುಭವಿಸಿದರು? 

ನಂತರ ಬಾದಾಮಿಗೆ ಹೋದರು. ಅಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದರೆ ಜನ ಯಾಕೆ ಓಡಿಸುತ್ತಿದ್ದರು. ವೇದಿಕೆಯಲ್ಲಿ ಮಾಜಿ ಶಾಸಕ ಚಿಮ್ಮನಕಟ್ಟಿಅವರು ಸಿದ್ದರಾಮಯ್ಯ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಸಿದ್ದರಾಮಯ್ಯ ಅವರಿಗೆ ಛಲ, ಗೌರವ ಇದ್ದರೆ ಬಾದಾಮಿ ಅಥವಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಲಿ ಎಂದು ಸವಾಲು ಹಾಕಿದರು. ಸಿದ್ದರಾಮಯ್ಯ ಅವರು ಪದೇ ಪದೇ ಕ್ಷೇತ್ರ ಪಲಾಯನ ಯಾಕೆ ಮಾಡುತ್ತಿದ್ದಾರೆ? ಒಂದು ಬಾರಿ ಗೆದ್ದರೂ ಜನರ ಪ್ರೀತಿ, ವಿಶ್ವಾಸ ಕಳೆದುಕೊಂಡಿದ್ದಾರೆ. 

ಈಗ ಒಕ್ಕಲಿಗರ ಮೀಸಲು ಏರಿಕೆಗೆ ಹೆಚ್ಚಿದ ಒತ್ತಡ: ಸಿಎಂ ಭೇಟಿ ಮಾಡಿದ ಸಚಿವ ಅಶೋಕ್‌ ನೇತೃತ್ವದ ನಿಯೋಗ

ಈ ಹಿಂದೆ ಕಾಂಗ್ರೆಸ್‌ ಮುಖಂಡರಾದ ಡಾ.ಜಿ.ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ ಅವರನ್ನು ಸೋಲಿಸಿದರು. ಇಬ್ಬರೂ ಅವರನ್ನು ಸೋಲಿಸಲು ಕಾಯುತ್ತಿದ್ದಾರೆ. ಎಚ್ಚರಿಕೆಯಿಂದ ಇರಬೇಕು. ಒಂದು ಕಡೆ ನಿಂತು ರಾಜಕಾರಣ ಮಾಡಬೇಕು. ಕ್ಷೇತ್ರದ ಜನತೆ ಮೇಲೆ ವಿಶ್ವಾಸ ಇಟ್ಟು, ನಿರ್ದಿಷ್ಟಕೆಲಸ ಮಾಡಿಕೊಡುತ್ತೇನೆ ಎಂಬುದಾಗಿ ಹೇಳಿ ಮಾಡಿಕೊಡಬೇಕು. ಅದು ಬಿಟ್ಟು ಕೆಲಸ ಮಾಡದೆ ಕ್ಷೇತ್ರಕ್ಕಾಗಿ ಅಲೆಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ವಿಧಾನಸೌಧ ಎದುರು ಬಸವಣ್ಣ, ಕೆಂಪೇಗೌಡ ಪುತ್ಥಳಿಗಿಂದು ಶಂಕು: ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. 24 ಅಡಿ ಎತ್ತರದ ಎರಡು ಅಶ್ವಾರೂಢ ಪುತ್ಥಳಿಗಳನ್ನು ಒಟ್ಟು ಎಂಟು ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಪ್ರತಿಮೆ ನಿರ್ಮಿಸುವ ಸಂಬಂಧ ಗುರುವಾರ ಕಂದಾಯ ಸಚಿವ ಆರ್‌.ಅಶೋಕ್‌ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಸುತ್ತೂರು ಸ್ವಾಮೀಜಿ, ಆದಿಚುಂಚನಗಿರಿ ಸ್ವಾಮೀಜಿ, ಪೇಜಾವರ, ಮಾದಾರ ಚನ್ನಯ್ಯ ಸ್ವಾಮೀಜಿ ಆಗಮಿಸಲಿದ್ದಾರೆ. ಒಂದೂವರೆ ತಿಂಗಳೊಳಗೆ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು. ವಿಧಾನಸೌಧ ಮುಂಭಾಗದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮಾಜಿ ಪ್ರಧಾನಿ ಜವಾಹರ್‌ಲಾಲ್‌ ನೆಹರು ಪ್ರತಿಮೆಗಳಿವೆ. ಇವೆರಡು ಪ್ರತಿಮೆಗಳ ನಡುವೆ ಬಸವಣ್ಣ ಮತ್ತು ಕೆಂಪೇಗೌಡ ಪ್ರತಿಮೆ ನಿರ್ಮಾಣವಾಗಲಿದೆ ಎಂದರು. ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಿರ್ಮಾಣವಾಗಿದೆ. 

ಸಿದ್ದರಾಮಯ್ಯ ಲೀಡರ್‌ ಆಗುವ ಭ್ರಮೆ ಬಿಡಲಿ: ಕೆ.ಎಸ್‌.ಈಶ್ವರಪ್ಪ ಲೇವಡಿ

ಅಂತಹವರ ಪ್ರತಿಮೆಯನ್ನು ಹಿಂದೆಯೇ ಮಾಡಬೇಕಿತ್ತು. ಆದರೆ, ಯಾರೂ ಇದರ ಕಡೆ ಗಮನ ಹರಿಸಿಲ್ಲ. ಅದೇ ರೀತಿ ಬಸವಣ್ಣ ಜಾತಿಯತೆ ಹೋಗಲಾಡಿಸುವ ಮೂಲಕ ಸಮಾನತೆಗಾಗಿ ಕೆಲಸ ಮಾಡಿದವರು. ಅವರ ಪ್ರತಿಮೆ ಸಹ ಪ್ರತಿಷ್ಠಾಪನೆ ಮಾಡಿರಲಿಲ್ಲ. ನಮ್ಮ ಸರ್ಕಾರವು ಇಬ್ಬರ ಪ್ರತಿಮೆಗಳನ್ನು ಪ್ರತಿಷ್ಠಾಪನೆ ಮಾಡುತ್ತಿದೆ. ಇನ್ನು, ಬಸವಣ್ಣ ಮತ್ತು ಕೆಂಪೇಗೌಡ ಅವರಿಗೆ ಜಾತಿ ಲೇಪನ ಕಟ್ಟುವುದು ಬೇಡ. ಅವರು ಅದಕ್ಕೂ ಮೀರಿದ ವ್ಯಕ್ತಿಗಳು. ಬಸವಣ್ಣ ಅವರು ಜಾತಿ ಬಿಟ್ಟು ಬನ್ನಿ ಎಂದು ಕರೆದರೆ, ಕೆಂಪೇಗೌಡ ಅವರು ವಿವಿಧ ಪೇಟೆಗಳನ್ನು ಕಟ್ಟಿದವರು ಎಂದು ತಿಳಿಸಿದರು.

click me!