ಜೆಡಿಎಸ್ ಸ್ವತಂತ್ರ ಪ್ರಾದೇಶಿಕ ಪಕ್ಷ| ಯಾರ ಜೊತೆ ಹೋಗಬೇಕು ಎಂಬ ತೀರ್ಮಾನ ಕೈಗೊಳ್ಳಲು ಅವರು ಸ್ವತಂತ್ರರು| ಈ ಬಗ್ಗೆ ಬ್ರಹ್ಮನಿಗೂ ಗೊತ್ತಿಲ್ಲ| ಸಿದ್ದರಾಮಯ್ಯಗೆ ಸಚಿವ ಆರ್. ಅಶೋಕ್ ಟಾಂಗ್|
ಹಾಸನ(ನ.28): ಸಿಎಂ ಬದಲಾವಣೆ ಪ್ರಶ್ನೆ ಉದ್ಭವವಾಗಿಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾರೆ, ಅದೇ ಸ್ಥಾನದಲ್ಲಿ ಅವರು ಮುಂದುವರೆಯುತ್ತಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಶಿರಾ, ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಒಪ್ಪಂದ ಮಾಡಿಕೊಂಡಿತ್ತು ಎಂಬ ಸಿದ್ದರಾಮಯ್ಯ ಆರೋಪದ ಬಗ್ಗೆ ಇಂದು(ಶನಿವಾರ) ಜಿಲ್ಲೆಯ ಚನ್ನರಾಯಪಟ್ಟಣ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಸ್ವತಂತ್ರ ಪ್ರಾದೇಶಿಕ ಪಕ್ಷವಾಗಿದೆ. ಯಾರ ಜೊತೆ ಹೋಗಬೇಕು ಎಂಬ ತೀರ್ಮಾನ ಕೈಗೊಳ್ಳಲು ಅವರು ಸ್ವತಂತ್ರರಾಗಿದ್ದಾರೆ. ಈ ಬಗ್ಗೆ ಬ್ರಹ್ಮನಿಗೂ ಗೊತ್ತಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.
ತಾರಕಕ್ಕೇರಿದ ಸಿದ್ದರಾಮಯ್ಯ-ಅಶೋಕ್ ಮಾತಿನ ಸಮರ
ಹೇಮಾವತಿ ಪುನರ್ವಸತಿ ಸಂತ್ರಸ್ತರಿಗೆ ಭೂಮಿ ಹಂಚಿಕೆಯ ಭ್ರಷ್ಟಾಚಾರ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ನಾನೇ ಕ್ರಮ ಜರುಗಿಸುವೆ. ಯಾವುದೇ ಅಧಿಕಾರಿ ತಪ್ಪು ಮಾಡಿದ್ದರೂ ಅವರ ವಿರುದ್ಧ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.