ಮಂತ್ರಿ ಸ್ಥಾನ ಯಾರಿಗೆಲ್ಲ ಸಿಗುತ್ತೆ? ಸುಳಿವು ಕೊಟ್ಟ ಸಚಿವ ಅಶೋಕ್..!

Published : Jan 11, 2021, 04:45 PM ISTUpdated : Jan 11, 2021, 04:54 PM IST
ಮಂತ್ರಿ ಸ್ಥಾನ ಯಾರಿಗೆಲ್ಲ ಸಿಗುತ್ತೆ? ಸುಳಿವು ಕೊಟ್ಟ ಸಚಿವ ಅಶೋಕ್..!

ಸಾರಾಂಶ

ರಾಜ್ಯ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದರ ಮಧ್ಯೆ ಯಾರಿಗೆಲ್ಲ ಸಚಿವ ಸ್ಥಾನ ನೀಡಲಾಗುತ್ತೆ ಎನ್ನುವುದನ್ನು ಅಶೋಕ್ ಸುಳಿವು ಕೊಟ್ಟಿದ್ದಾರೆ.

ಚಿತ್ರದುರ್ಗ, (ಜ.11): ಇದೇ ಜನವರಿ 13ರಂದು ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಮಾಡಿಲಾಗಿದೆ. ಆದ್ರೆ, ಯಾರಿಗೆ ಸಚಿವ ಸ್ಥಾನ ನೀಡಬೇಕೆನ್ನುವ ಚರ್ಚೆಗಳು ಸಹ ನಡೆದಿವೆ.

ಬಿಜೆಪಿ ಸರ್ಕಾರ ಬರಲು ಕಾರಣರಾದವರಿಗೆ ಸಚಿವ ಸ್ಥಾನ ಫಿಕ್ಸ್ ಎನ್ನಲಾಗಿದೆ. ಅವರನ್ನ ಬಿಟ್ಟು ಇನ್ನುಳಿದವರಿಗೆ ಯಾರಿಗೆ ಕೊಡಬೇಕೆನ್ನುವ ಲೆಕ್ಕಾಚಾರಗಳು ಶುರುವಾಗಿದೆ. 

ಕೇವಲ ಸಚಿವ ಸಂಪುಟ ವಿಸ್ತರಣೆ ಮಾತ್ರವಲ್ಲ, ಪ್ರಮುಖ ಖಾತೆ ಬದಲಾವಣೆ ಖಚಿತ...!

ಇನ್ನು ಈ ಬಗ್ಗೆ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು,  ಸಂಪುಟ ವಿಸ್ತರಣೆ ವೇಳೆ ಸರ್ಕಾರ ರಚನೆಗೆ ಸಹಕಾರ ನೀಡಿದವರಿಗೆ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಂಪುಟಕ್ಕೆ ಸೇರುವವರ ಹೆಸರುಗಳು ಸದ್ಯದಲ್ಲೇ ಹೊರಬೀಳಲಿದ್ದು, ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಪಕ್ಷದ ಹಿರಿಯ ಶಾಸಕರಿಗೂ ಆದ್ಯತೆ ನೀಡಲಾಗುತ್ತದೆ ಎಂದರು.

ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಸಿಎಂ ಹುದ್ದೆಯಲ್ಲಿ ಅವರೇ ಮುಂದುವರಿಯುವಂತೆ ಶಾಸಕರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್‌ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ತಮ್ಮನ್ನು ಬಿಜೆಪಿ ಉಚ್ಛಾಟನೆ ಮಾಡಿದ್ಯಾಕೆ? ರಹಸ್ಯ ಬಿಚ್ಚಿಟ್ಟ ಶಾಸಕ ಯತ್ನಾಳ್
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು: ಎರಡೂ ಬಣಗಳಿಂದ ಘೋಷಣೆಗಳ ಸಮರ