ನನಗೆಷ್ಟೇ ನೋವಾದ್ರೂ ಮುಜುಗರ ತರುವ ಹೇಳಿಕೆ ನೀಡಲಿಲ್ಲ ಎಂದ ಸಚಿವ

By Suvarna News  |  First Published Apr 4, 2021, 10:06 PM IST

ಕೆಎಸ್ ಈಶ್ವರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಬಿಎಸ್ ಯಡಿಯೂರಪ್ಪ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಸಚಿವರೊಬ್ಬರು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ರಾಣಿಬೆನ್ನೂರು, (ಏ.4): ಬಿಜೆಪಿ ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ನನಗೆ ಎಷ್ಟು ನೋವಾದರೂ ಪಕ್ಷಕ್ಕೆ ಮುಜುಗರ ತರುವ ಯಾವ ಹೇಳಿಕೆ ನೀಡಲಿಲ್ಲ ಎಂದು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್‌. ಶಂಕರ್‌ ಹೇಳಿದರು.

 ತಾಲೂಕಿನ ಹಲಗೇರಿ ಗ್ರಾಮದಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಮಹಾಶಕ್ತಿ ಕೇಂದ್ರದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದ ಅವರು, ಕ್ಷೇತ್ರದಲ್ಲಿ ಪಕ್ಷೇತರನಾಗಿ ಗೆಲುವು ಸಾಧಿ ಸಿದ ನಂತರ ಮೊದಲು ಯಡಿಯೂರಪ್ಪ ಸಿಎಂ ಆಗಬೇಕೆಂದು ಅವರನ್ನು ಭೇಟಿ ಮಾಡಿದ್ದೇನೆ. ಆದರೆ ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್‌ಗೆ ಹೋಗಬೇಕಾಯಿತು. ನಂತರ ಜಾರಕಿಹೊಳಿ ಹಾಗೂ ನಾನು ಸೇರಿಕೊಂಡು ಬಿಜೆಪಿ ಬೆಂಬಲಿಸಿದ್ದೇವೆ ಎಂದರು.

Tap to resize

Latest Videos

ಯಡಿಯೂರಪ್ಪ-ಈಶ್ವರಪ್ಪ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದಕ್ಕೆ ಮತ್ತೊಮ್ಮೆ ಜಗಜ್ಜಾಹೀರು

ಅತೀ ಹೆಚ್ಚು ಸದಸ್ಯರನ್ನು ಹೊಂದಿದ ಬಿಜೆಪಿ ವಿಶ್ವದಲ್ಲಿಯೇ ದೊಡ್ಡ ಪಕ್ಷದಾಗಿದೆ. ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರ ಶ್ರಮ ಅಪಾರವಾಗಿದೆ. ಕಾರ್ಯಕರ್ತರು ಸಂಘಟನೆ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಜಿಪಂ ಹಾಗೂ ತಾಪಂ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮತ್ತೊಂದೆಡೆ ಕೆಎಸ್ ಈಶ್ವರಪ್ಪ ಹಾಗೂ ಬಸನಗೌಡ ಪಾಟೀಲ್ ಯತ್ನಾಲ್ ಬಿಎಸ್ ಯಡಿಯೂರಪ್ಪನವರ ನಡೆಗೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ತಮ್ಮ ಇಲಾಖೆಯಲ್ಲಿ ಅಸ್ತಕ್ಷೇಪ ಮಾಡಿದ್ದಾರೆಂದು ಈಶ್ವರಪ್ಪ ಅವರು ಸಿಎಂ ವಿರುದ್ಧ ದೂರು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

click me!