ನಮ್ಮ ಕಾಂಗ್ರೆಸ್ ಸರ್ಕಾರದಲ್ಲಿ ಯಾವ ದಂಧೆಯಾಗಲಿ, ಭ್ರಷ್ಟಾಚಾರವಾಗಲಿ ನಡೆಯುತ್ತಿಲ್ಲ. ವಿರೋಧ ಪಕ್ಷದಲ್ಲಿರುವ ಕಾರಣಕ್ಕೆ ಕೆಲವರು ಸುಳ್ಳು ಆರೋಪ ಮಾಡಿಕೊಂಡು ಕಾಲ ದೂಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರ ವೈಎಸ್‌ಟಿ ಟ್ಯಾಕ್ಸ್ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು.
ರಾಮನಗರ (ಆ.06): ನಮ್ಮ ಕಾಂಗ್ರೆಸ್ ಸರ್ಕಾರದಲ್ಲಿ ಯಾವ ದಂಧೆಯಾಗಲಿ, ಭ್ರಷ್ಟಾಚಾರವಾಗಲಿ ನಡೆಯುತ್ತಿಲ್ಲ. ವಿರೋಧ ಪಕ್ಷದಲ್ಲಿರುವ ಕಾರಣಕ್ಕೆ ಕೆಲವರು ಸುಳ್ಳು ಆರೋಪ ಮಾಡಿಕೊಂಡು ಕಾಲ ದೂಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರ ವೈಎಸ್‌ಟಿ ಟ್ಯಾಕ್ಸ್ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸ್ವಚ್ಛ ಆಡಳಿತ ನೀಡುತ್ತಿದೆ. ಇದನ್ನು ಸಹಿಸದ ವಿಪಕ್ಷಗಳು ಆರೋಪಗಳಲ್ಲಿ ತೊಡಗಿವೆ.
ಈಗ ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ ಪಕ್ಷದಲ್ಲಿದ್ದಾರೆ. ಅದಕ್ಕಾಗಿ ಅವರು ರಾಜ್ಯದಲ್ಲಿ ವೈಎಸ್‌ಟಿ ಟ್ಯಾಕ್ಸ್ ಅಂತೆಲ್ಲ ಆರೋಪ ಮಾಡುತ್ತಿದ್ದಾರೆ. ನಮ್ಮಲ್ಲಿ ಯಾವ ದಂಧೆಯೂ ಇಲ್ಲ, ಯಾವ ಭ್ರಷ್ಟಾಚಾರವೂ ಇಲ್ಲ. ನಮ್ಮದು ಸ್ವಚ್ಛ ಆಡಳಿತ ಎಂದು ಹೇಳಿದರು. ಪೊಲೀಸ್ ಹಾಗೂ ಸಾರಿಗೆ ಇಲಾಖೆಯಲ್ಲಿ ವೇತನ ಪಾವತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಕಾರ್ಯವೈಖರಿ ಇದೆ. ನಮ್ಮ ಕೆಎಸ್‌ಆರ್‌ಟಿಸಿಯಲ್ಲಿ 1ನೇ ತಾರೀಖು ಸಂಬಳ ನೀಡಲಾಗುತ್ತದೆ. ಬಿಎಂಟಿಸಿಯಲ್ಲಿ 7ನೇ ತಾರೀಖು, ಕಲ್ಯಾಣ ಕರ್ನಾಟಕ ಸಾರಿಗೆಗೆ ಒಂದು ದಿನ ನಿಗದಿ ಮಾಡಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ: ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಆಪರೇಷನ್ ಹಸ್ತ!
ಎಲ್ಲಾ ಇಲಾಖೆಗಳಲ್ಲೂ ಈ ರೀತಿಯಾಗಿ ವೇತನ ಪಾವತಿ ಮಾಡುತ್ತಾರೆ. ಆದರೆ, ಇದರಲ್ಲಿಯೂ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಮ್ಮ ಸಾರಿಗೆ ಇಲಾಖೆ ಕುರಿತು ಟ್ವೀಚ್ ಮಾಡಿ ಅರ್ಧ ಸಂಬಳ ಅಂತ ಆರೋಪ ಮಾಡಿದ್ದರು. ಪೂರ್ಣ ಮಾಹಿತಿ ಇಲ್ಲದೆ ಈ ರೀತಿಯ ಹೇಳಿಕೆ ನೀಡಬಾರದು. ಇದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರು. ಅವರ ಅವಧಿಯಲ್ಲಿ ಯಾವ ರೀತಿ ಸಮಸ್ಯೆ ಆಗಿತ್ತು ಅಂತ ಎಲ್ಲರಿಗೂ ಗೊತ್ತು. ಈಗ ನಮಗೆ ನೀತಿ ಪಾಠ ಹೇಳಿಕೊಡಲು ಬರುತ್ತಿದ್ದಾರೆ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.
ಡಿಸಿಎಂ ಸ್ವಕ್ಷೇತ್ರದಲ್ಲಿ ಸಾರಿಗೆ ಬಸ್ಸಿನ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ: ವಾಹನ ಸಂಚಾರ ಅಸ್ತವ್ಯಸ್ಥೆ!
ಶಾಸಕರು ಹಾಗೂ ಸಚಿವರ ನಡುವೆ ಸಣ್ಣಪುಟ್ಟ ಅಸಮಾಧಾನ ಇದ್ದೆ ಇರುತ್ತದೆ. ಇಲ್ಲ ಅಂತ ಏನಿಲ್ಲ. ಆದರೆ, ಎಲ್ಲವನ್ನೂ ಕೂತು ಬಗೆಹರಿಸಿಕೊಳ್ಳುತ್ತೇವೆ ಎಂದು ರಾಮಲಿಂಗಾರೆಡ್ಡಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಲೋಕಸಭಾ ಚುನಾವಣೆ ವಿಚಾರವಾಗಿ ಹೈಕಮಾಂಡ್ ಎಲ್ಲರಿಗೂ ಹಲವು ಸಲಹೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆಯ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಕುರಿತು ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದಾರೆ ಎಂದು ಹೇಳಿದರು. ಶಾಸಕ ಇಕ್ಬಾಲ್ ಹುಸೇನ್, ಮಾಜಿ ಶಾಸಕ ಕೆ.ರಾಜು, ನಗರಸಭೆ ಪ್ರಭಾರ ಅಧ್ಯಕ್ಷ ಸೋಮಶೇಖರ್(ಮಣಿ) ಮತ್ತಿತರರು ಹಾಜರಿದ್ದರು.