ರಾಸಲೀಲೆ ವಿಡಿಯೋ ರಿಲೀಸ್: ಸಚಿವ ರಮೇಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ

By Suvarna NewsFirst Published Mar 2, 2021, 10:11 PM IST
Highlights

ವಿಡಿಯೋ ರಿಲೀಸ್ ಆಗ್ತಿದ್ದಂತೆಯೇ ನಾಪತ್ತೆಯಾಗಿದ್ದ ಸಚಿವ ರಮೇಶ್ ಜಾರಕಿಹೊಳಿ ಪ್ರತ್ಯಕ್ಷರಾಗಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಹೀಗೆ....

ಬೆಂಗಳೂರು, (ಮಾ.02): ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗಿರುವುದರಿಂದ ರಾಜ್ಯ ರಾಜಕೀಯದಲ್ಲಿ ಭಾರೀ ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದೆ.

ವಿಡಿಯೋ ವಿಚಾರವಾಗಿ ಆರ್​​ಟಿ ನಗರ ಮೂಲದ ಯುವತಿಗೆ ರಮೇಶ್ ಜಾರಕಿಹೊಳಿ ಜೀವ ಬೆದರಿಕೆ ಹಾಕಿದ್ದಾರೆ. ಯುವತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎನ್ನುವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಚಿವರ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ 'ಸಿಡಿ'ದ ರಾಸಲೀಲೆ ಕರ್ಮಕಾಂಡ: Video Part 2

ಇನ್ನು ಈ ಹಸಿಬಿಸಿ ದೃಶ್ಯ ರಿಲೀಸ್​ ಆಗುತ್ತಿದ್ದಂತೆ ಅಜ್ಞಾತ ಸ್ಥಳದಲ್ಲಿದ್ದ ರಮೇಶ್ ಜಾರಕಿಹೊಳಿ ದಿಢೀರ್ ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾಗಿದ್ದು, ಈ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ನಾನು ಯಾವ ತಪ್ಪೂ ಮಾಡಿಲ್ಲ. ತಪ್ಪಿತಸ್ಥ ಎಂದು ದೃಢಪಟ್ಟರೆ ಆಗ ರಾಜೀನಾಮೆಯ ಪ್ರಶ್ನೆ ಉದ್ಭವಿಸುತ್ತದೆ. ರಾಸಲೀಲೆ ವಿಡಿಯೋ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದರು.

ನನ್ನ ವಿರುದ್ಧ ಯಾರೋ ಈ ಷಡ್ಯಂತ್ರ ಮಾಡಿದ್ದಾರೆ ಎಂಬುದರ ಬಗ್ಗೆಯೂ ನಾನು ಆರೋಪ ಮಾಡುವುದಿಲ್ಲ. ಯಾರ ಮೇಲೆಯೂ ನನಗೆ ಅನುಮಾನವೂ ಇಲ್ಲ. ಕಳೆದ 21 ವರ್ಷಗಳಿಂದ ನಾನು ಶಾಸಕನಾಗಿ ಸಾರ್ವಜನಿಕರ ಸೇವೆ ಮಾಡುತ್ತಿದ್ದೇನೆ. ಅತ್ಯಂತ ಸೂಕ್ಷ್ಮ ಮನಸ್ಥಿತಿಯ ಮನುಷ್ಯ ನಾನು ಎಂದು ಹೇಳಿದರು.

click me!