'ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದು, ಅಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ'

Published : Jan 02, 2021, 05:27 PM IST
'ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದು, ಅಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ'

ಸಾರಾಂಶ

ಗ್ರಾಮ ಪಂಚಾಯಿತಿ ಫಲಿತಾಂಶದ ಬಗ್ಗೆ ಬೆಳಗಾವಿಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಮುಸುಕಿನ ಗುದ್ದಾಟ ಮುಂದುವರೆದಿದೆ. 

ಬೆಳಗಾವಿ, (ಜ.02): ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದ್ದು, ನಾನೇ ಕಟ್ಟಿ ಬೆಳೆಸಿದ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಆಗಿನ ಮುಖನೇ ಬೇರೆ ಈಗೀನ ಮುಖನೇ ಬೇರೆ. ನಾನು ಮುಂದಿನ ಬಾರಿ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಟಾಂಗ್​ ಕೊಟ್ಟಿದ್ದಾರೆ.

ಬೆಳಗಾವಿಯಲ್ಲಿ ಇಂದು (ಶನಿವಾರ) ಸುದ್ದಿಗಾರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆಕೆಯ ಗಾಡ್ ಫಾದರ್ ಇಬ್ಬರೂ ಪ್ರಚಾರ ಪ್ರೀಯರು. ನಾವು ಪ್ರಚಾರ ಪ್ರಿಯನಲ್ಲ ಎಂದು ವ್ಯಂಗ್ಯವಾಡಿದರು. 

'ಲಕ್ಷ್ಮಿ ಕಟಾಕ್ಷ' ಬೆಳಗಾವಿಯಲ್ಲಿ ಹೆಬ್ಬಾಳ್ಕರ್ ಬಣಕ್ಕೆ ಭರ್ಜರಿ ಜಯ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗ್ರಾಮೀಣ ಮತಕ್ಷೇತ್ರದಲ್ಲಿ ಹೆಚ್ಚಿನ ಸದಸ್ಯರು ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಮುಂದಿನ ದಿನದಲ್ಲಿ ಸದಸ್ಯರನ್ನು ಮಾದ್ಯಮದ ಮುಂದೆ ಹಾಜರುಪಡಿಸುತ್ತೇನೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಏನು ಬೇಕಾದರೂ ಬರೆದುಕೊಳ್ಳಬಹುದು. ಪ್ರಧಾನ ಮಂತ್ರಿ ಎಂದೂ ಬರೆದುಕೊಳ್ಳಬಹುದು. ಆದ್ರೆ ವಾಸ್ತವ ಸ್ಥಿತಿಯೇ ಬೇರೆಯಾಗಿದೆ. ಮಾದ್ಯಮ ಕ್ಷೇತ್ರದಿಂದ ತಿಸ್ಕರಿಸಲ್ಪಟ್ಟ ವ್ಯಕ್ತಿಯೊಬ್ಬನನ್ನು ಪಿಆರ್ ಓ ಮಾಡಿಕೊಂಡು ಅಪಪ್ರಚಾರದ ಫೋಸ್ಟ್ ಹಾಕಿಸುತ್ತಿದ್ದಾರೆ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!