ಬಿಜೆಪಿಯ ಮತ್ತೋರ್ವ ನಾಯಕ ರಾಸಲೀಲೆ ಸಿ.ಡಿ. ರಿಲೀಸ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಬೆಂಗಳೂರು, (ಮಾ.02): ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ರಿಲೀಸ್ ಆಗಿದೆ. ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಯುವತಿಯನ್ನು ಸಚಿವ ರಮೇಶ್ ಜಾರಕಿಹೊಳಿ ಮಂಚಕ್ಕೆ ಎಳೆದಿದ್ದಾರೆ. ಇದೀಗ ಈ ಸಿ.ಡಿ. ರಿಲೀಸ್ ಆಗಿದ್ದು, ಸಚಿವರ ಕಾಮದಾಟ ಬಟಾಬಯಲಾಗಿದೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಹಲ್ಲಹಳ್ಳಿ ಎನ್ನುವವರು ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ರಿಲೀಸ್ ಮಾಡಿದ್ದು, ಯುವತಿಯ ಕುಟುಂಬಕ್ಕೆ ನ್ಯಾಯ ಕೊಡಿಸಿ ಎಂದು ದಿನೇಶ್ ಹಲ್ಲಹಳ್ಳಿ, ಬೆಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿರುವ ವಿಡಿಯೋ ಇದಾಗಿದ್ದು,ರಾಜ್ಯ ರಾಜಕಾರಣದಲ್ಲಿ ಈ ಸಿಡಿ ಪ್ರಕರಣ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ