ಮೋದಿಯಿಂದ ದೇಶ ದಿವಾಳಿ, ಗಡ್ಕರಿಗೆ ಪ್ರಧಾನಿ ಹುದ್ದೆ ಬಿಟ್ಟುಕೊಡಲಿ; ಸಚಿವ ಸಂತೋಷ್ ಲಾಡ್

Published : Feb 18, 2025, 12:18 PM ISTUpdated : Feb 18, 2025, 12:26 PM IST
ಮೋದಿಯಿಂದ ದೇಶ ದಿವಾಳಿ, ಗಡ್ಕರಿಗೆ ಪ್ರಧಾನಿ ಹುದ್ದೆ ಬಿಟ್ಟುಕೊಡಲಿ; ಸಚಿವ ಸಂತೋಷ್ ಲಾಡ್

ಸಾರಾಂಶ

ಕಾರ್ಮಿಕ ಸಚಿವ ಸಂತೋಷ್ ಲಾಡ್, ಪ್ರಧಾನಿ ಮೋದಿ ಅವರನ್ನು ಟೀಕಿಸಿ, ದೇಶವನ್ನು ದಿವಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಬೇಕೆಂದು ಒತ್ತಾಯಿಸಿದರು. ಬಿಜೆಪಿ ಕಾರ್ಯಕರ್ತರು ಮೋದಿ ರಾಜೀನಾಮೆಗೆ ಒತ್ತಾಯಿಸಬೇಕೆಂದೂ ಹೇಳಿದ್ದಾರೆ.

ಗದಗ (ಫೆ.18): ದೇಶದ ಪರಿಸ್ಥಿತಿ ಬದಲಾವಣೆ ಆಗಿದೆ. ಈಗ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ನಮ್ಮ ದೇಶ ದಿವಾಳಿಯಾಗಿದ್ದು, ನಿತಿನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿಯಾಗಬೇಕು. ಮೋದಿ ಅವರು ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರು ಮತ್ತು ಮುಖಂಡರು ಧ್ವನಿ ಎತ್ತಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು.

ಗದಗ ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ‌ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಲ್ಲಿವರೆಗೆ ಸುಮಾರು 20ಕ್ಕೂ ಹೆಚ್ಚಿನ‌‌ ಜಿಲ್ಲೆಗಳಿಗೆ ತಾವು ಪ್ರವಾಸ ಮಾಡಿದ್ದು, ಕಾರ್ಮಿಕ‌ ಇಲಾಖೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು‌ ಪ್ರಗತಿಪರಿಶೀಲನಾ ಸಭೆ ನಡೆಸಿದ್ದೇನೆ. ಅದರಂತೆ ಗದಗಿಗೂ ಬಂದು‌ ಸಭೆ ನಡೆಸಲಾಗಿದೆ. ರಾಜ್ಯದ ದೇಶದ ಸಮಸ್ಯೆಗಳ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡಬೇಕೇ‌ ವಿನಃ ಸಚಿವ ಸಂಪುಟ‌ ಸರ್ಜರಿ‌ ಅದು-ಇದು ಎನ್ನುವ ವಿಷಯಕ್ಕೆ ಮಹತ್ವ ನೀಡಬಾರದು.ಜನರ ಸಮಸ್ಯೆಗಳಿಗಿಂತ‌‌ ಅಭಿವೃದ್ಧಿಗಿಂತ ಸಚಿವ ಸಂಪುಟದ ವಿಷಯವೇನಷ್ಟೂ ಮಹತ್ವದ್ದಲ್ಲ.ಮಹತ್ವದ ಜನರ ವಿಚಾರಗಳಿಗೆ ಗಮನ‌ ನೀಡಬೇಕು ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜಣ್ಣ ವಿಚಾರ ಅವರವರಿಗೆ ಬಿಟ್ಟಿದ್ದಾಗಿದೆ.ಯಾರೂ ಹೊಸ ಸಿಎಂ ವಿಚಾರವನ್ನು ತೇಲಿಬಿಟ್ಟಿದ್ದಾರೆಯೋ ಅವರನ್ನೇ ಸುದ್ದಿಗಾರರು ಪ್ರಶ್ನಿಸಬೇಕೇ ಹೊರತು ನನ್ನನ್ನಲ್ಲ.ನನಗೆ ಸಂಬಂಧವಿಲ್ಲದ ಅಥವಾ ತಿಳಿಯದೇ ಇರುವ ವಿಚಾರದ ಬಗ್ಗೆ ಮಾತನಾಡುವುದು‌ ಸೂಕ್ತವಲ್ಲ.ನಾನು‌ ಯಾರ ಪರವೂ ಅಲ್ಲ,ವಿರೋದವೂ‌ ಅಲ್ಲ.ನಾನು‌ ಕಾಂಗ್ರೆಸ್ ಪಕ್ಷದ ಪರ ಎಂದು‌ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸಂತೋಷ್ ಲಾಡ್ ಉತ್ತರಿಸಿದರು.

ಇದನ್ನೂ ಓದಿ: ಮಾರ್ಚ್ ನಂತರ ಸಚಿವ ಸಂಪುಟ ವಿಸ್ತರಣೆ, ನಾನೂ ಈ ಸಲ ಸಚಿವನಾಗ್ತೇನೆ; ವಿನಯ ಕುಲಕರ್ಣಿ

ಕುಂಭಮೇಳದಲ್ಲಿ ಎಷ್ಟೊಂದು ಜನರ ಸಾವಾಗಿದೆ.ಸಾವಿರಾರು ಜನರಿಗೆ ಅನಾನುಕೂಲವಾಗಿದೆ.ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ನೆರವಾಗುವಂತೆ ಸುದ್ದಿಗಾರರು ಕೇಂದ್ರವನ್ನು‌ ಪ್ರಶ್ನೆ ಮಾಡಬೇಕು ಎಂದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಶಾಸಕರಾದ ಜಿ.ಎಸ್ ಪಾಟೀಲ್, ಸಂಕನೂರು ಚಂದ್ರು ಲಮಾಣಿ ಹಾಗೂ‌ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಭಾರತಿ, ಕಾರ್ಮಿಕ ಇಲಾಖೆಯ ಆಯುಕ್ತ ಗೋಪಾಲಕೃಷ್ಣ ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ