ಲೋಕಸಭಾ ಚುನಾವಣೆ ನಂತರ ಬಿಜೆಪಿಯವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಹುನ್ನಾರ ನಡೆಸಿದ್ದಾರೆ. ಯಾವುದೇ ಸರ್ಕಾರ ಮಾಡದ 5 ಗ್ಯಾರಂಟಿ ಯೋಜನೆ ಜಾರಿಗೆ ತರುವ ಮೂಲಕ ರಾಷ್ಟ್ರಾದ್ಯಂತ ಖ್ಯಾತಿ ಪಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
ಹುಬ್ಬಳ್ಳಿ (ಫೆ.25): ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಪಾಲಕರು, ಹಿರಿಯರು ತಮ್ಮ ಮಕ್ಕಳಿಗೆ ಓದಿಸುವ ಮೂಲಕ ಮನೆಮನೆಯಲ್ಲೂ ಸಂವಿಧಾನದ ಕುರಿತ ಜಾಗೃತಿ ಕಾರ್ಯ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡ ಜಿಲ್ಲೆಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾದ ಎರಡು ಇವೆಂಟ್‌ಗಳು ಇಂಡಿಯನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿದೆ. ಇದರಂಗವಾಗಿ ಪಾಲಿಕೆ ಸಭಾಂಗಣದಲ್ಲಿ ನಡೆದ ಇದರ ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳೊಂದಿಗೆ ಹಲವಾರು ಜನಪರ ಕೆಲಸ ಕೈಗೊಂಡಿದೆ. ಇವುಗಳಲ್ಲಿ ಮುಖ್ಯವಾಗಿರುವುದು ಈ ಸಂವಿಧಾನ ಜಾಗೃತಿ ನಡಿಗೆ. ಇದನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸುವುದರೊಂದಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಪಂಜಿನ ಮೆರವಣಿಗೆ ಹಾಗೂ ಪಾರಂಪರಿಕ ನಡಿಗೆಯಲ್ಲಿ ಹೆಚ್ಚಿನ ಜನ ಸೇರುವ ಮೂಲಕ ದಾಖಲೆ ನಡಿಗೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಗೆ ಎರಡು ಪ್ರಶಸ್ತಿಗಳು ಲಭಿಸಿವೆ ಎಂದರು. ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜ. 26 ರಿಂದ ಪ್ರಾರಂಭಗೊಂಡಿತು.
ಕಾನೂನು ತಿದ್ದುಪಡಿ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಚಳವಳಿ: ಪ್ರಲ್ಹಾದ್ ಜೋಶಿ ಎಚ್ಚರಿಕೆ
146 ಗ್ರಾಮಗಳು, ಪಾಲಿಕೆಯ 82 ವಾರ್ಡ್‌ಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿ ನಡೆದಿದೆ. ಸಂವಿಧಾನ ಜಾಗೃತಿ ಜಾಥಾ ಸ್ಪರ್ಧೆಯಲ್ಲಿ ಜಿಲ್ಲೆಯು ಮೊದಲ 10 ದಿನಗಳಲ್ಲಿ ಮೊದಲನೇ ಸ್ಥಾನದಲ್ಲಿತ್ತು. ನಂತರ 3ನೇ ಸ್ಥಾನಕ್ಕೆ ಇಳಿಕೆ ಕಂಡಿತು. ಹಲವಾರು ವಿಶೇಷ ಕಾರ್ಯಕ್ರಮಗಳ ಆಯೋಜನೆ ನಂತರ ಪುನಃ ಮೊದಲ ಸ್ಥಾನ ಗಳಿಸಿತು. ಜಿಲ್ಲೆಯಲ್ಲಿ ನಡೆದ ಪಾರಂಪರಿಕ ನಡಿಗೆಗೆ 10 ಸಾವಿರಕ್ಕೂ ಅಧಿಕ ಜನರು ಹಾಗೂ ಪಂಜಿನ ಮೆರವಣಿಗೆ 15 ಸಾವಿರಕ್ಕೂ ಅಧಿಕ ಜನರು ಸೇರಿ ಯಶಸ್ವಿಗೊಳಿಸಿದ್ದಕ್ಕಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಸಂದಿವೆ. ಇಡೀ ರಾಜ್ಯದಲ್ಲಿ ಜಾಥಾ ಹೆಸರಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇದೇ ವೇಳೆ ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ದೆಹಲಿಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆಯ ತೀರ್ಪುಗಾರ ನರವಿಜಯ ಅವರಿಂದ ದಾಖಲೆಯ ಪ್ರಶಸ್ತಿ ಪ್ರಮಾಣಪತ್ರ ಪಡೆದರು. ಶಾಸಕ, ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ, ದೆಹಲಿಯ ಇಂಡಿಯಾ ಬುಕ್ಕ್ ಆಫ್ ರೆಕಾರ್ಡ ಸಂಸ್ಥೆಯ ತೀರ್ಪುಗಾರ ನರವಿಜಯ, ಪಾಲಿಕೆಯ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಮಾತನಾಡಿದರು.
ಇದೇ ವೇಳೆ ಪೌರಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಸನ್ಮಾನಿಸಲಾಯಿತು. ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ಸಿ. ಬೇವೂರ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಪಂ ಸಿಇಓ ಸ್ವರೂಪ ಟಿ.ಕೆ, ಪಾಲಿಕೆಯ ಪ್ರತಿಪಕ್ಷ ನಾಯಕಿ ಸುವರ್ಣ ಕಲ್ಲಕುಂಟ್ಲಾ, ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಭಕ್ಷ, ಹುಬ್ಬಳ್ಳಿ ಶಹರ ತಹಸೀಲ್ದಾರ್ ಕಲಗೌಡ ಪಾಟೀಲ, ಪಾಲಿಕೆಯ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ, ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಇದ್ದರು.
ಬಿಜೆಪಿಯವರು ದ್ವೇಷದ ರಾಜಕಾರಣ ಬಿಡಬೇಕು: ಗೃಹ ಸಚಿವ ಪರಮೇಶ್ವರ್
ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ: ಲೋಕಸಭಾ ಚುನಾವಣೆ ನಂತರ ಬಿಜೆಪಿಯವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಹುನ್ನಾರ ನಡೆಸಿದ್ದಾರೆ. ಯಾವುದೇ ಸರ್ಕಾರ ಮಾಡದ 5 ಗ್ಯಾರಂಟಿ ಯೋಜನೆ ಜಾರಿಗೆ ತರುವ ಮೂಲಕ ರಾಷ್ಟ್ರಾದ್ಯಂತ ಖ್ಯಾತಿ ಪಡೆದಿದೆ. ಇದನ್ನು ನೋಡಿ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಮೂಲಕ ₹58 ಸಾವಿರ ಕೋಟಿ ಹಣವನ್ನು ಬಡಜನರ ಮನೆಮನೆಗೆ ತಲುಪಿಸುವ ಕಾರ್ಯ ಮಾಡಲಾಗಿದೆ. ರಾಜ್ಯದ 1 ಕೋಟಿ 20ಲಕ್ಷ ಮಹಿಳೆಯರ ಆಶೀರ್ವಾದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲಿದೆ. ಅವರನ್ನು ಅಳುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು.