ಲೋಕಸಭೆ ಚುನಾವಣೆಗೆ ಸನ್ನದ್ಧರಾಗಿ: ಸಚಿವ ಸಂತೋಷ್‌ ಲಾಡ್‌

Published : Aug 07, 2023, 11:21 PM IST
ಲೋಕಸಭೆ ಚುನಾವಣೆಗೆ ಸನ್ನದ್ಧರಾಗಿ: ಸಚಿವ ಸಂತೋಷ್‌ ಲಾಡ್‌

ಸಾರಾಂಶ

ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನ ಶಕ್ತಿ ತೋರ್ಪಡಿಸಿದ್ದಿರಿ. ಲೋಕಸಭೆ ಚುನಾವಣೆಯಲ್ಲೂ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು. 

ಹೊಸಪೇಟೆ (ಆ.07): ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಹಗಲಿರುಳು ಶ್ರಮವಹಿಬೇಕು. ಈ ಮೂಲಕ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಹಕಾರ ನೀಡಬೇಕು. ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನ ಶಕ್ತಿ ತೋರ್ಪಡಿಸಿದ್ದಿರಿ. ಲೋಕಸಭೆ ಚುನಾವಣೆಯಲ್ಲೂ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು. ನಗರದ ಕೊಂಡನಾಯಕನಹಳ್ಳಿಯಲ್ಲಿರುವ ವಿಜಯನಗರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿಯಾಗಿದ್ದಾರೆ. 

ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣ. ಶಾಸಕರು, ಮಾಜಿ ಶಾಸಕರು ಕೂಡ ಕಾರ್ಯಕರ್ತರೊಂದಿಗೆ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕು ಎಂದರು. ಮುಂಬರುವ ದಿನಗಳಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಸಾಕಷ್ಟು ಜನಪ್ರಿಯ ಯೋಜನೆಗಳ ಮೂಲಕ ವಿಜಯನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯ ಒದಗಿಸಲಾಗುವುದು. ಬಡ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಲು ಸ್ಥಳೀಯ ಶಾಸಕರ ಜತೆಗೆ ಚರ್ಚಿಸಿ, ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

ಮೆದುಳು ನಿಷ್ಕ್ರಿಯತೆ: ಸಮಾಜ ಸೇವಕಿ ಸಹನಾ ಜೋನ್ಸ್ ರೂಬೆನ್ ಅವರ ಅಂಗಾಗಗಳ ದಾನ

ಯುವ ಕಾಂಗ್ರೆಸ್‌ ಸಮಿತಿ ಮಾಜಿ ಜಿಲ್ಲಾಧ್ಯಕ್ಷ ಎಚ್‌.ಜಿ. ಗುರುದತ್ತ, ನಗರಸಭೆ ಸದಸ್ಯ ಕೆ. ಮಹೇಶ್‌, ಮುಖಂಡರಾದ ರಘು ಗುಜ್ಜಲ, ಅನಂತ ಪದ್ಮನಾಭ, ಗುಜ್ಜಲ ನಾಗರಾಜ್‌, ತಮ್ಮನೆಳ್ಳಪ್ಪ, ನಿಂಬಗಲ್‌ ರಾಮಕೃಷ್ಣ, ಸಂಗಪ್ಪ, ಬಿ. ಮಾರೆಣ್ಣ, ಮರಡಿ ಮಂಜುನಾಥ್‌, ಗೋವಿಂದಪ್ಪ, ರಮೇಶ, ಇಂದುಮತಿ, ಅಮೀನಾ ಬೇಗಂ, ಪಿ. ವೀರಾಂಜನೇಯ, ಕೋಟಗಿನಾಳ್‌ ಹುಲುಗಪ್ಪ, ಮೂಸಾ ಸಾಬ್‌, ರುಕ್ಸಾನಾ, ನಾಗಮ್ಮ, ಕವಿತಾ, ಮಂಜುಳಾ, ಜಯಮ್ಮ, ಖಾಜಾಬನ್ನಿ ಮತ್ತಿತರರಿದ್ದರು.

ಯುವನಿಧಿ ಕಾರ್ಯಕ್ರಮವೂ ಶೀಘ್ರ ಅನುಷ್ಠಾನ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಹಂತಹಂತವಾಗಿ ಜಾರಿ ಮಾಡುತ್ತಿದ್ದು, ಯುವನಿಧಿ ಕಾರ್ಯಕ್ರಮವನ್ನೂ ಸದ್ಯದಲ್ಲೇ ಜಾರಿ ಮಾಡಲಾಗುವುದು. ಸದ್ಯ ಗೃಹಲಕ್ಷ್ಮೇ ಯೋಜನೆಯ ಎಲ್ಲ ಫಲಾನುಭವಿಗಳಿಗೂ ಮಾಸಿಕ ತಲಾ .2000 ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಐದು ಗ್ಯಾರಂಟಿಗಳ ಜಾರಿಗೆ ಅಂದಾಜು .60 ಸಾವಿರ ಕೋಟಿ ಆಗಲಿದೆ. ಸಹಜವಾಗಿ ಅನುದಾನದ ಕೊರತೆ ಉಂಟಾಗುತ್ತದೆ. 

ಆಲಮಟ್ಟಿ ಡ್ಯಾಂ ಭರ್ತಿಗೆ ಒಂದೇ ದಿನ ಬಾಕಿ: ಸಿಎಂ ಬಾಗಿನ ಅರ್ಪಿಸುವ ಸಾಧ್ಯತೆ!

ಇದನ್ನು ನಾನೂ ಒಪ್ಪುತ್ತೇನೆ. ಆದರೆ, ಇನ್ನು ಆರು ತಿಂಗಳಲ್ಲಿ ಎಲ್ಲವೂ ಸರಿಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗಳ ಸಾಕಾರಕ್ಕೆ ಕ್ರಮವಹಿಸಿದ್ದಾರೆ. ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ ಸಾಕಾರಗೊಳಿಸಲಾಗಿದೆ. ಶಕ್ತಿ ಯೋಜನೆಯಡಿ ಶೇ.94ರಷ್ಟುಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ