ಕಾಲ್ತುಳಿತದ ಬಗ್ಗೆ ತನಿಖೆ ಮಾಡ್ತಾರೆ, ವರದಿ ಬಳಿಕ ಸತ್ಯಾಂಶ ಹೊರಬರುತ್ತೆ: ಸಚಿವ ಸತೀಶ್‌ ಜಾರಕಿಹೊಳಿ

Kannadaprabha News   | Kannada Prabha
Published : Jun 09, 2025, 01:39 AM IST
Satish Jarkiholi

ಸಾರಾಂಶ

ಕಮಿಷನರ್ ಆಫೀಸ್, ಕೆಳಗಿನ ಪೊಲೀಸ್ ಅಧಿಕಾರಿಗಳು ಅನುಮತಿ ನೀಡಿದ್ರಾ, ಬೇಡ ಅಂದ್ರು ಏಕೆ ಹೋದರು, ಸಾಕಷ್ಟು ಗೊಂದಲಗಳಿವೆ, ಸಿಐಡಿ, ಸಿಒಡಿ ತನಿಖೆ ಮಾಡ್ತಾರೆ, ವರದಿ ಬಳಿಕ ಸತ್ಯಾಂಶ ಹೊರಗೆ ಬರುತ್ತೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಹೊಳೆನರಸೀಪುರ (ಜೂ.09): ಕಮಿಷನರ್ ಆಫೀಸ್, ಕೆಳಗಿನ ಪೊಲೀಸ್ ಅಧಿಕಾರಿಗಳು ಅನುಮತಿ ನೀಡಿದ್ರಾ, ಬೇಡ ಅಂದ್ರು ಏಕೆ ಹೋದರು, ಸಾಕಷ್ಟು ಗೊಂದಲಗಳಿವೆ, ಸಿಐಡಿ, ಸಿಒಡಿ ತನಿಖೆ ಮಾಡ್ತಾರೆ, ವರದಿ ಬಳಿಕ ಸತ್ಯಾಂಶ ಹೊರಗೆ ಬರುತ್ತೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಪಟ್ಟಣದಲ್ಲಿ ಸಂಸದ ಶ್ರೇಯಸ್ ಎಂ.ಪಟೇಲ್ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಭೀಕರ ಕಾಲ್ತುಳಿತ ಪ್ರಕರಣ ಸಂಬಂಧ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮಾತನಾಡಿದರು. ಸ್ಟೇಡಿಯಂಗೆ ಹೋಗುವ ಮುಂಚೆ ಡೆತ್ ಆಗಿದ್ರೆ ಸಿಎಂಗೆ, ಸರ್ಕಾರಕ್ಕೆ ಹೇಳಬೇಕಾದದ್ದು ಪೊಲೀಸರ ಕರ್ತವ್ಯ, ಜವಾಬ್ದಾರಿ, ಜತೆಗೆ ಮುಖ್ಯಮಂತ್ರಿಗಳಿಗೆ ಮುಂಚೆಯೇ ಹೇಳಬೇಕಿತ್ತು.

ಯಾಕೆ ಹೇಳಿಲ್ಲ ಎಂದು ಪ್ರಶ್ನಿಸಿ, ಇದು ಪೊಲೀಸರ ಮೇಲೆ ಬಂದ ಪ್ರಶ್ನೆಯಾಗಿದೆ. ಇದರ ಬಗ್ಗೆ ಸಿಐಡಿ, ಸಿಒಡಿ ಇನಿಖೆ ನಡೆಸಿದ ನಂತರ ಭೀಕರ ಕಾಲ್ತುಣಿತ ಪ್ರಕರಣದ ಬಗ್ಗೆ ಸತ್ಯಾಂಶ ತಿಳಿಯಲಿದೆ ಎಂದರು. ಮಹಾತ್ಮಗಾಂಧಿ ವೃತ್ತದಲ್ಲಿ ಮಹಾತ್ಮಗಾಂಧಿ ಪ್ರತಿಮೆಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರು ಮಾಲಾರ್ಪಣೆ ಮಾಡಿದರು. ಸಂಸದರಾದ ಶ್ರೇಯಸ್ ಎಂ.ಪಟೇಲ್ ಹಾಗೂ ಪ್ರಿಯಾಂಕ ಜಾರಕಿಹೊಳಿ, ಎಂಎಲ್ಎ ಚಂದ್ರಪ್ಪ, ಮುಖಂಡರಾದ ಲಖನ್ ಜಾರಕಿಹೋಳಿ, ಎಚ್.ವಿ.ಪುಟ್ಟರಾಜು, ಲಕ್ಷ್ಮಣ, ಶೃತಿ ಗುಂಡಣ್ಣ, ಡೊನಾಲ್ಡ್, ಬಾಗಿವಾಳು ಮಂಜೇಗೌಡ, ಪ್ರಜ್ವಲ್, ಇತರರು ಇದ್ದರು.

ಬೇಲೂರಿನ ಅಭಿವೃದ್ಧಿಗೆ ಅನುದಾನ ನೀಡಲು ಬದ್ಧ: ಹೊಳೆಬೀದಿ ಸೇತುವೆ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲು ಕ್ರಿಯಾಯೋಜನೆ ಸಿದ್ಧವಾಗಿದ್ದು, ಅತಿ ಶೀಘ್ರದಲ್ಲಿ ಚಾಲನೆಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಜಿಲ್ಲೆಯಲ್ಲಿ ಎರಡು ದಿನಗಳ ಅಧಿಕೃತ ಭೇಟಿ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ವಿವಿರ ಸಂಗ್ರಹಿಸಿದ ಸಚಿವರು, ಹೊಳೆಬೀದಿ ಬಸ್ ನಿಲ್ದಾಣ ಮುಖ್ಯರಸ್ತೆ ಹಾಗೂ ತಾಲೂಕು ಕಚೇರಿಯನ್ನು ವೀಕ್ಷಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಶ್ವ ಪಾರಂಪಾರಿಕ ಪಟ್ಟಿಗೆ ಸೇರ್ಪಡೆಯಾದ ನಂತರ ಇಲ್ಲಿ ಹೆಚ್ಚಿನ ಅನುದಾನ ನೀಡಲು ಸರ್ಕಾರ ಬದ್ಧರಾಗಿದ್ದು, ಈಗಾಗಲೇ ಸ್ಥಳೀಯ ಶಾಸಕ ಎಚ್. ಕೆ. ಸುರೇಶ್ ಅವರ ಒತ್ತಾಸೆಯ ಮೇರೆಗೆ ಮೊದಲ ಹಂತದಲ್ಲಿ ಹೊಳೆಬೀದಿ ಅಭಿವೃದ್ಧಿಪಡಿಸಲು ಸೇತುವೆ ನಿರ್ಮಾಣಕ್ಕೆ ನಮ್ಮ ತಾಂತ್ರಿಕ ಅಧಿಕಾರಿಗಳು ಪರಿಶೀಲಿಸಿ, ಅದಕ್ಕೆ ಸಂಪೂರ್ಣ ಅನುದಾನ ನೀಡಲಾಗುತ್ತಿದೆ. ಎರಡು ವರ್ಷಗಳ ಅವಧಿಯಲ್ಲಿ ಸೇತುವೆ ನಿರ್ಮಾಣ ಕಾರ್ಯವನ್ನು ಸಂಪೂರ್ಣಗೊಳಿಸಿದ ನಂತರ ತಾಲೂಕಿನ ಎಲ್ಲಾ ಗ್ರಾಮಗಳ ರಸ್ತೆಗೆ ಅನುದಾನ ನೀಡಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಹೊಳೆಬೀದಿ ರಸ್ತೆ ಅಭಿವೃದ್ಧಿ ಆದ ನಂತರ ಹಲವಾರು ವರ್ಷಗಳಿಂದ ಅಭಿವೃದ್ಧಿಯಾಗದ ಬಸ್ ನಿಲ್ದಾಣ ನಿರ್ಮಾಣ ಹಾಗೂ ಮುಖ್ಯರಸ್ತೆ ಅಗಲೀಕರಣಕ್ಕೆ ಕಾಯಕಲ್ಪ ಕೊಡಲಾಗುತ್ತದೆ. ಶಾಸಕರು ಹಾಗೂ ಸಾರ್ವಜನಿಕರ ಅಭಿಪ್ರಾಯದಂತೆ ಬಸ್ ನಿಲ್ದಾಣಕ್ಕೆ ನಮ್ಮ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗವನ್ನು ನೀಡಲು ಕಾನೂನಿನಲ್ಲಿ ಅವಕಾಶ ಇದ್ದರೆ ಅದನ್ನು ಗಮನಿಸಿ ನಮ್ಮ ಅಧಿಕಾರಿಗಳ ಜೊತೆ ಚರ್ಚಿಸಿ, ಜಾಗ ಸಹ ನೀಡಲು ಬದ್ಧರಾಗಿದ್ದೇವೆ ಎಮದು ಹೇಳಿದರು.ಅಲ್ಲದೆ ಹೊಳೆಬೀದಿ ವಿಶ್ವ ಪ್ರವಾಸಿ ತಾಣವಾಗಿರುವುದರಿಂದ ಹೆಚ್ಚುವರಿ ಬಸ್ ನಿಲ್ದಾಣಕ್ಕೆ ಎಲ್ಲಿ ಜಾಗವಿದೆ ಎಂದು ಮಾನ್ಯ ಸಾರಿಗೆ ಸಚಿವರ ಜೊತೆ ಚರ್ಚಿಸಿ, ಬಸ್ ನಿಲ್ದಾಣ ಹಾಗೂ ಹೆಚ್ಚುವರಿ ಬಸ್ ಒದಗಿಸಲು ಕ್ರಮ ಕೈಗೊಳ್ಳಲಾಗುವುದು‌ ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ