ಡಿಕೆಶಿ ಸಿಎಂ ಮಾಡಲು ಒಳಒಪ್ಪಂದ?: ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಿಷ್ಟು

Published : Aug 07, 2024, 11:15 AM ISTUpdated : Aug 07, 2024, 12:07 PM IST
ಡಿಕೆಶಿ ಸಿಎಂ ಮಾಡಲು ಒಳಒಪ್ಪಂದ?: ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಿಷ್ಟು

ಸಾರಾಂಶ

ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯಪಾಲರು ಅನುಮತಿ ಕೊಟ್ಟರೇ ಹೋರಾಟ ಮಾಡುತ್ತೇವೆ. ಕಾನೂನು ಹೋರಾಟ ಅನಿವಾರ್ಯವಗಲಿದೆ. ಈಗಾಗಲೇ ಯಾವ ರೀತಿಯ ಹೋರಾಟ ಮಾಡಬೇಕು ಎಂಬುವುದು ಪಕ್ಷದೊಳಗೆ ಸಹ ಚರ್ಚೆ ಆಗಿದೆ ಎಂದ ಸಚಿವ ಸತೀಶ ಜಾರಕಿಹೊಳಿ

ಅಥಣಿ(ಆ.07):  ಪಾದಯಾತ್ರೆ ಹಾಗೂ ಆರೋಪ ಮಾಡಲು ಬಿಜೆಪಿಯವರಿಗೆ ಹಕ್ಕಿದೆ, ಅವರು ಮಾಡಲಿ. ಅದನ್ನು ನಾವು ಪ್ರಶ್ನೆ ಮಾಡಲು ಆಗಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಏಕೆ ರಾಜೀನಾಮೆ ನೀಡಬೇಕು?. ಅಂತಹ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ನಾವು ಸಹ ಮುಡಾ ಕುರಿತಂತೆ ಆ.9 ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ಸಮಾವೇಶ ಮಾಡುತ್ತೇವೆ. ಇದರಲ್ಲಿ ಎಲ್ಲ ಸಚಿವರು ಭಾಗಿಯಾಗಲಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಹಾಗೂ ತಜ್ಞರು ಉತ್ತರ ಕೊಡಲಿದ್ದಾರೆ. ಮುಡಾದಲ್ಲಿ ಏನಿದೆ, ಏನು ಆಗಿದೆ ಎಂದು ಜನರಿಗೆ ತಿಳಿಸುತ್ತೇವೆ ಎಂದರು.

ಸದನದಲ್ಲಿ ಧರಣಿ ಮಧ್ಯೆಯೂ ಬಿಲ್ ಪಾಸ್: ನಮ್ಮ ಪಾತ್ರ ನಾವು ಮಾಡಿದ್ದೇವೆ ಎಂದ ಸಚಿವ ಜಾರಕಿಹೊಳಿ..!

ಡಿಕೆಶಿ ಹಾಗೂ ಎಚ್‌ಡಿಕೆ ನಡುವಿನ ಟಾಕ್‌ವಾರ್‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಇಷ್ಟೊಂದು ಆವೇಶಭರಿತವಾಗಿ ಮಾತನಾಡುವುದು ಸರಿಯಾದ ಕ್ರಮವಲ್ಲ, ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ, ಜನ ಗಮನಿಸುತ್ತಾರೆ ಎಂದು ಕಿವಿಮಾತು ಹೇಳಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯಪಾಲರು ಅನುಮತಿ ಕೊಟ್ಟರೇ ಹೋರಾಟ ಮಾಡುತ್ತೇವೆ. ಕಾನೂನು ಹೋರಾಟ ಅನಿವಾರ್ಯವಗಲಿದೆ. ಈಗಾಗಲೇ ಯಾವ ರೀತಿಯ ಹೋರಾಟ ಮಾಡಬೇಕು ಎಂಬುವುದು ಪಕ್ಷದೊಳಗೆ ಸಹ ಚರ್ಚೆ ಆಗಿದೆ ಎಂದರು.

ವಾಲ್ಮೀಕಿ ಪ್ರಕರಣದಲ್ಲಿ ಮಂತ್ರಿಗಳು-ಶಾಸಕರು ಭಾಗಿಯಾಗಿದ್ದರೆ ಅದು ಖಂಡಿತ ಕಳಂಕ: ಸಚಿವ ಸತೀಶ್‌ ಜಾರಕಿಹೊಳಿ

ಡಿಕೆಶಿ ಸಿಎಂ ಮಾಡಲು ಒಳಒಪ್ಪಂದ ಆಗಿದೆಂಬ ಬಿಜೆಪಿ ಶಾಸಕ ಯತ್ನಾಳ ಆರೋಪ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿ ಅವರು ಹೇಳಿದ್ದಕ್ಕೆ ಯಾವುದೇ ದಾಖಲೆಗಳಿಲ್ಲ, ಹೀಗಾಗಿ ಈ ವಿಷಯದ ಬಗ್ಗೆ ಮಾತನಾಡುವುದಿಲ್ಲ ಎಂದರು.

ಮೊದಲೇ ಬಿಜೆಪಿ ಹಗರಣಗಳ ಕುರಿತು ತನಿಖೆ ಮಾಡಬೇಕಿತ್ತೆಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರ ಹಗರಣಗಳಿಗೆ ನಮ್ಮ ಸರ್ಕಾರ ಹೆಚ್ಚು ಗಮನ ಕೊಟ್ಟಿರಲಿಲ್ಲ. ಈಗ ಎಚ್ಚೆತ್ತುಕೊಂಡಿದ್ದೇವೆ. ಈಗಲೂ ಕಾಲ ಮಿಂಚಿಲ್ಲ ಶೀಘ್ರವಾಗಿ ತನಿಖೆ ಮಾಡಿಸ್ತೇವೆ. ಈಗಾಗಲೇ 29 ಪ್ರಕರಣಗಳು ತನಿಖೆ ನಡೆಯುತ್ತಿವೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ