ಸಚಿವ ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಕೆಲವರ ಖಾತೆ ಬದಲಾವಣೆ ಬಗ್ಗೆಯೂ ಮಾತುಕತೆ ನಡೆದಿದೆ. ಆದರೆ, ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದರ ಮೇಲೆ ಎಲ್ಲವೂ ನಿಂತಿದೆ. ವರಿಷ್ಠರು ನಿರ್ಧರಿಸಿದರೆ ಸಚಿವ ಸಂಪುಟ ಪುನಾರಚನೆ ಆಗದೆಯೂ ಇರಬಹುದು ಎಂದ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು(ನ.28): ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ನಡೆಯುತ್ತಿದ್ದು, ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ. ದೆಹಲಿಯಿಂದ ಪಟ್ಟಿ ಬಂದರೆ ಕಥೆ ಮುಗಿಯಿತು. ಮನೆ ಖಾಲಿ ಮಾಡಿಕೊಂಡು ಹೋಗಬೇಕು ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಕೆಲವರ ಖಾತೆ ಬದಲಾವಣೆ ಬಗ್ಗೆಯೂ ಮಾತುಕತೆ ನಡೆದಿದೆ. ಆದರೆ, ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದರ ಮೇಲೆ ಎಲ್ಲವೂ ನಿಂತಿದೆ. ವರಿಷ್ಠರು ನಿರ್ಧರಿಸಿದರೆ ಸಚಿವ ಸಂಪುಟ ಪುನಾರಚನೆ ಆಗದೆಯೂ ಇರಬಹುದು ಎಂದರು.
ಸಚಿವ ಸ್ಥಾನ ಬಿಡುವಂತೆ ಕೆಲವರಿಗೆ ಹೇಳಿದ್ದೆವು: ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಲ್ಲು-ಮುಳ್ಳಿನ ಹಾದಿ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾ ಯಿಸುವುದು ಸುಲಭವಲ್ಲ. ಅದು ಕಲ್ಲು-ಮುಳ್ಳಿನ ಹಾದಿ. ಆದರೆ, ಸದ್ಯಕ್ಕೆ ನನ್ನ ಮುಂದೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಯೋಚನೆಯಿಲ್ಲ. ಮುಂದೆ ಏನಾಗುತ್ತದೆಯೋ ನೋಡಬೇಕು. ಸಚಿವ ಸಂಪುಟ ಪುನಾರಚನೆ ಜತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹಿಂದೆ ಚರ್ಚೆಯಾಗಿತ್ತು. ಹೈಕಮಾಂಡ್ ಎಲ್ಲ ಬದಲಾ ವಣೆಗಳನ್ನು ಯಾವಾಗ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು ಎಂದರು.
ದಿಲ್ಲೀಲಿ ಖರ್ಗೆ ಜೊತೆ ಡಿಕೆಶಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದಿಢೀರ್ ಭೇಟಿಯಾಗಿ ಸಂಪುಟ ವಿಸ್ತರಣೆ ಸೇರಿ ವಿವಿಧ ವಿಚಾರಗಳ ಕುರಿತು ಸುಮಾರು ಅರ್ಧಗಂಟೆ ಕಾಲ ಚರ್ಚೆ ನಡೆಸಿದರು.
ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಕಸರತ್ತು, ವಿಧಾನ ಪರಿಷತ್ ಸದಸ್ಯರ ನಾಮನಿರ್ದೇಶನ ವಿಚಾರವೂ ಚರ್ಚೆಗೆ ಬಂದಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಆಗಮಿಸಿದ ಬಳಿಕ ಚರ್ಚೆ ಮಾಡೋಣ ಎಂದು ಖರ್ಗೆ ಅವರು ಹೇಳಿದ್ದಾರೆಂದು ತಿಳಿದು ಬಂದಿದೆ.
ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಕೂಡ ದೆಹಲಿಗೆ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರು ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿ ಸಲು ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಅವರನ್ನು ಡಿ.ಕೆ.ಶಿವಕುಮಾರ್ ಅವರ ಜೊತೆಗೂಡಿ ಭೇಟಿಯಾಗಿ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ. ಅಲ್ಲದೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವ ಬಗ್ಗೆಯೂ ರಾಜಕೀಯ ವಲಯದಲ್ಲಿ ಗುಲ್ಲೆದ್ದಿದ್ದು, ಈ ಬಗ್ಗೆ ಚರ್ಚೆ ನಡೆಯುವುದೇ ಅಥವಾ ಇಲ್ಲವೇ ಎಂಬುದು ಖಚಿತಪಟ್ಟಿಲ್ಲ.
ಬುಧವಾರ ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ವೇಣುಗೋಪಾಲ್ ಅವರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೆ, ಪ್ರಿಯಾಂಕಾ ಗಾಂಧಿಯ ವರನ್ನೂ ಭೇಟಿಯಾದರು. ಶುಕ್ರವಾರ ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಸೇರಿ ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಇದೇ ವೇಳೆ, ಸಿದ್ದರಾಮಯ್ಯ ಕೆಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.