ಹಿಂದಿನ ಸರ್ಕಾರದಲ್ಲಿ ಸಂಪುಟ ದರ್ಜೆ ಕೊಡಲಾಗಿತ್ತು. ಈಗಲೂ ಕೂಡ ಸಿಎಂಗೆ ಎರಡು ಕಾರ್ಯದರ್ಶಿ ಹುದ್ದೆ ಕೊಡಲಾಗಿದೆ. ಎಲ್ಲ ಸರ್ಕಾರದಲ್ಲೂ ಮಾಡಿದ್ದಾರೆ. ನಮ್ಮ ಸರ್ಕಾರದಲ್ಲೂ ಮಾಡುತ್ತಾರೆ ಎಂದ ಅವರು ,ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಬಿಟ್ಟ ವಿಚಾರ ಎಂದರು.
ಬೆಳಗಾವಿ(ನ.29): ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡುವ ವಿಚಾರ ಸಂಬಂಧ ಕಾನೂನಿನಡಿಯಲ್ಲೇ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡುವುದಕ್ಕೆ ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂಬ ಭೀಮಪ್ಪ ಗಡಾದ ಹೇಳಿಕೆ ಪ್ರತಿಕ್ರಿಯಿಸಿದ ಸಚಿವ ಸತೀಶ ಜಾರಕಿಹೊಳಿ ಅವರು, ಹಿಂದಿನ ಸರ್ಕಾರದಲ್ಲಿ ಸಂಪುಟ ದರ್ಜೆ ಕೊಡಲಾಗಿತ್ತು. ಈಗಲೂ ಕೂಡ ಸಿಎಂಗೆ ಎರಡು ಕಾರ್ಯದರ್ಶಿ ಹುದ್ದೆ ಕೊಡಲಾಗಿದೆ. ಎಲ್ಲ ಸರ್ಕಾರದಲ್ಲೂ ಮಾಡಿದ್ದಾರೆ. ನಮ್ಮ ಸರ್ಕಾರದಲ್ಲೂ ಮಾಡುತ್ತಾರೆ ಎಂದ ಅವರು ,ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಬಿಟ್ಟ ವಿಚಾರ ಎಂದರು.
undefined
ನಿಗಮ-ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ವಿರುದ್ಧ ಪಿಐಎಲ್
ತಮ್ಮ ವಿದೇಶ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರವಾಸಕ್ಕೆ ಒಬ್ಬನೇ ಹೋಗಿದ್ದೇನೆ, ಒಬ್ಬನೇ ಬಂದಿದ್ದೇನೆ. ಅದರಲ್ಲೇನೂ ವಿಶೇಷತೆ ಇಲ್ಲ. ಒಟ್ಟಾಗಿ ಹೋಗಿದ್ದರೆ ವಿಶೇಷ ಇರುತ್ತಿತ್ತು. ಒಟ್ಟಾಗಿ ಹೋಗುವುದಕ್ಕೆ ಮುಹೂರ್ತ ತೆಗೆದು ನೋಡಬೇಕೆಂದು ನಸುನಗುತ್ತ ಹೇಳಿದರು.
ನಿಗಮ ಮಂಡಳಿಗೆ ಕಾರ್ಯಕರ್ತರನ್ನು ನೇಮಿಸಲಿ
ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ವಿಚಾರ ಸಂಬಂಧ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಜಂಟಿಯಾಗಿ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಹಿರಿಯ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಆದ್ಯತೆ ನೀಡುವುದಾಗಿ ಹೇಳಿದ್ದಾರೆ. ಕಾರ್ಯಕರ್ತರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂಬುದು ನಮ್ಮ ಬೇಡಿಕೆಯಿದೆ. ಈ ಕುರಿತು ಮುಖ್ಯಮಂತ್ರಿ ಗಮನ ಸೆಳೆಯಲಾಗಿದೆ. ಶೇ.50ರಷ್ಟು ಕಾರ್ಯಕರ್ತರಿಗೆ, ಶೇ.50ರಷ್ಟು ಶಾಸಕರಿಗೆ ನೀಡಲು ಹೇಳಿದ್ದೇವೆ. ಕಾರ್ಯಕರ್ತರಿಗೆ ನೀಡಿದರೆ ಒಳ್ಳೆಯದು. ಶಾಸಕರ ಪಟ್ಟಿ ರೆಡಿಯಾಗಿದೆ. ಕಾರ್ಯಕರ್ತರದ್ದು ಇನ್ನೂ ಆಗಿಲ್ಲ ಎಂದು ಹೇಳಿದರು.