ಗೃಹಜ್ಯೋತಿ ಯೋಜನೆಯಿಂದ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಬೆಳಗಾವಿಯಲ್ಲಿ 10 ಲಕ್ಷಕ್ಕೂ ಅಧಿಕ ಗ್ರಾಹಕರಿಗೆ ಇದರ ಪ್ರಯೋಜನ ದೊರೆಯಲಿದ್ದು, ಇದುವರೆಗೆ ಶೇ.80ರಷ್ಟು ಹಕರು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ(ಆ.06): ಗೃಹಜ್ಯೋತಿ ಯೋಜನೆಗಾಗಿ ಬೆಳಗಾವಿ ಜಿಲ್ಲೆಗೆ ಪ್ರತಿ ವರ್ಷಕ್ಕೆ .516 ಕೋಟಿಯನ್ನು ಸರ್ಕಾರ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಶನಿವಾರ ನಡೆದ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುವ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ವಿತರಿಸಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯಿಂದ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಬೆಳಗಾವಿಯಲ್ಲಿ 10 ಲಕ್ಷಕ್ಕೂ ಅಧಿಕ ಗ್ರಾಹಕರಿಗೆ ಇದರ ಪ್ರಯೋಜನ ದೊರೆಯಲಿದ್ದು, ಇದುವರೆಗೆ ಶೇ.80ರಷ್ಟು ಹಕರು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಗೆ ಸ್ಪರ್ಧೆ: ಸಚಿವ ಜಾರಕಿಹೊಳಿ ಹೇಳಿದ್ದಿಷ್ಟು
ಇಷ್ಟೊಂದು ದೊಡ್ಡ ಮೊತ್ತವನ್ನು ಸರ್ಕಾರ ಹೇಗೆ ಹೊಂದಾಣಿಕೆ ಮಾಡಲಿದೆಂಬ ಆತಂಕವಿತ್ತು. ಆದರೆ, ಮುಖ್ಯಮಂತ್ರಿಗಳು ಇದನ್ನು ಸುಗಮವಾಗಿ ಜಾರಿಗೊಳಿಸುವ ಮೂಲಕ ನಮ್ಮ ಸರ್ಕಾರ ಬಡವರ ಪರ ಎಂಬುವುದನ್ನು ಸಾಬೀತುಪಡಿಸಿದ್ದಾರೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೋರಿದರು.
ಚುನಾವಣೆಯಲ್ಲಿ ನೀಡಿರುವ ಗ್ಯಾರಂಟಿ ಪ್ರಕಾರ ಗೃಹಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ನಮ್ಮ ಸರ್ಕಾರವು ನುಡಿದಂತೆ ನಡೆದಿದೆ. 3 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ ಗ್ಯಾರಂಟಿ ಜಾರಿಗೊಳಿಸಲಾಗಿದ್ದು, ಇನ್ನುಳಿದ ಗೃಹಲಕ್ಷ್ಮಿ, ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ಬದುಕು ರೂಪಿಸಲು ಮುಂದಾಗಬೇಕು. ಬಸವಣ್ಣನವರ ಸಮಾನತೆ, ಡಾ.ಅಂಬೇಡ್ಕರ್ ಸಂವಿಧಾನವನ್ನು ಗೌರವಿಸುವ ಸಂಸ್ಕಾರ ಹಾಗೂ ಶಿಕ್ಷಣವನ್ನು ನೀಡಬೇಕು. ಮುಂಬರುವ ದಿನಗಳಲ್ಲಿ ಇನ್ನಷ್ಟುಜನಪರ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಲಿದೆ. ಸರ್ಕಾರ ವಿನಿಯೋಗಿಸುವ ಇಷ್ಟುದೊಡ್ಡ ಮೊತ್ತದ ಹಣ ಸದ್ಬಳಕೆಯಾಗಬೇಕು. ಸರ್ಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಗೃಹಜ್ಯೋತಿಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಕೇವಲ 3 ತಿಂಗಳಲ್ಲಿ 3 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ತನ್ನ ಭರವಸೆ ಈಡೇರಿಸಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ಯೋಜನೆಗಳು ಪೂರಕವಾಗಿವೆ. ಮುಂಬರುವ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜತೆಗೆ ಅಭಿವೃದ್ಧಿಯತ್ತ ದಾಪುಗಾಲು ಹಾಕೋಣ ಎಂದರು.
ಶಾಸಕ ಆಸಿಫ್(ರಾಜು) ಸೇಠ್ ಮಾತನಾಡಿ, ಬಡವರ ಹಿತರಕ್ಷಣೆಗಾಗಿ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಗೃಹಜ್ಯೋತಿ ಯೋಜನೆಯನ್ನು ಪ್ರತಿ ಕುಟುಂಬಕ್ಕೆ ತಲುಪಿಸಲಾಗುವುದು. ಪ್ರತಿ ತಿಂಗಳು ಬೆಳಗಾವಿ ಜಿಲ್ಲೆಯಲ್ಲಿ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗೃಹಲಕ್ಷ್ಮಿ ಯೋಜನೆ ಕೂಡ ಇನ್ನು ಕೆಲವೇ ದಿನಗಳಲ್ಲಿ ಅನುಷ್ಠಾನಗೊಳ್ಳಲಿದೆ. ಬಡವರ ಪರ ತತ್ವಸಿದ್ಧಾಂತವನ್ನು ಪಾಲಿಸಿಕೊಂಡು ಬರುತ್ತಿರುವುದರಿಂದ ಇಂತಹ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.
ಮುಖ್ಯ ಇಂಜಿನಿಯರ್ ವಿ.ಪ್ರಕಾಶ್ ಮಾತನಾಡಿ, ರಾಜ್ಯದಲ್ಲಿ 2.20 ಕೋಟಿ ಗೃಹಬಳಕೆಯ ಗ್ರಾಹಕರಿಗೆ ಹಾಗೂ ಬೆಳಗಾವಿ ಜಿಲ್ಲೆಯ 10.65 ಲಕ್ಷ ಗ್ರಾಹಕರಿಗೆ ಈ ಯೋಜನೆಯ ಲಾಭ ದೊರಕಲಿದೆ. ನೋಂದಣಿ ಪ್ರಕ್ರಿಯೆ ಎಲ್ಲೆಡೆ ಚುರುಕಿನಿಂದ ನಡೆದಿದ್ದು, ಎಲ್ಲ ಅರ್ಹರಿಗೆ ಯೋಜನೆಯ ಲಾಭವನ್ನು ತಲುಪಿಸಲಾಗುವುದು ಎಂದು ತಿಳಿಸಿದರು.
50,000 ಕೋಟಿಗಳ 5 ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರ: ಸಚಿವ ಸತೀಶ ಜಾರಕಿಹೊಳಿ
ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಪೃಥ್ವಿ ಕತ್ತಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಪಂ ಸಿಇಒ ಹರ್ಷಲ್ ಭೋಯರ, ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಸಿದ್ದು ಹುಲ್ಲೋಳಿ ಮತ್ತಿತರರು ಉಪಸ್ಥಿತರಿದ್ದರು. ಹೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪ್ರವೀಣಕುಮಾರ ಸ್ವಾಗತಿಸಿದರು. ಸರ್ವಮಂಗಳ ಅರಳಿಮಟ್ಟಿ ನಿರೂಪಿಸಿದರು.
ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ .4 ರಿಂದ .5 ಸಾವಿರ ಖರ್ಚು ಮಾಡಲಿದೆ. ಇದು ಮಕ್ಕಳ ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಗೆ ಬಳಕೆಯಾಗಬೇಕು. ಅಂದಾಗ ಮಾತ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾರ್ಥಕವಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.