ಅಭಿವೃದ್ದಿ ಆಧಾರದಲ್ಲಿ ಚುನಾವಣೆ ನಡೆಯುತ್ತಿದೆ: ಸಚಿವ ಸತೀಶ್ ಜಾರಕಿಹೊಳಿ

Published : Jan 12, 2025, 09:46 AM IST
ಅಭಿವೃದ್ದಿ ಆಧಾರದಲ್ಲಿ ಚುನಾವಣೆ ನಡೆಯುತ್ತಿದೆ: ಸಚಿವ ಸತೀಶ್ ಜಾರಕಿಹೊಳಿ

ಸಾರಾಂಶ

ಮುಖ್ಯಮಂತ್ರಿ ಸ್ಥಾನ ಎರಡುವರೆ ವರ್ಷಕ್ಕೆ ಎಂದು ಹಂಚಿಕೆಯಾಗಿದೆಯೇ ಎಂಬ ವಿಷಯ ನಮಗೆ ಗೊತ್ತಿಲ್ಲ, ಅದನ್ನು ನೀವು ಅವರನ್ನೇ ಕೇಳಬೇಕು ಎಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ 

ಸೋಮವಾರಪೇಟೆ(ಜ.12): ಹಿಂದೆ ಧರ್ಮದ ಆಧಾರದಲ್ಲಿ ಚುನಾವಣೆಗಳು ನಡೆಯುತ್ತಿದ್ದವು. ಪ್ರಸ್ತುತ ಸನ್ನಿವೇಶ ಬದಲಾಗಿದ್ದು, ಇಂದು ಅಭಿವೃದ್ಧಿಯ ಆಧಾರದಲ್ಲಿ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಬೆಳಗಾವಿಯಲ್ಲಿ ಮರಾಠಿ ಕನ್ನಡ ಎಂದು ಮತಗಳು ಚಲಾವಣೆಯಾಗುತ್ತಿದ್ದವು. ಆ ಪರಿಸ್ಥಿತಿ ಇಂದು ಬದಲಾಗಿದ್ದು, ಅಲ್ಲಿಯೂ ಕೂಡ ಅಭಿವೃದ್ಧಿ ಆಧಾರದಲ್ಲಿ ನಡೆಯುತ್ತಿರುವುದು ಉತ್ತಮ ಬೆಳವಣಿಗೆ, ಕೊಡಗು ಸೇರಿದಂತೆ ಹಲವಡೆ ಧರ್ಮದ ಆಧಾರದಲ್ಲಿ ನಡೆಯುತ್ತಿದ್ದ ಪರಿಸ್ಥಿತಿ ಬದಲಾಗಿದೆ ಎಂದರು. ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿಯ ಐಗೂರು ಗ್ರಾಮದಲ್ಲಿರು. 10 ಕೋಟಿ ವೆಚ್ಚದ ನೂತನ ಸೇತುವೆ ನಿರ್ಮಾಣಕ್ಕೆ ಶನಿವಾರ ಚಾಲನೆ ನೀಡಿ, ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. 

ಕಾಂಗ್ರೆಸ್‌ನಲ್ಲೂ ಬಣ ರಾಜಕೀಯವಿದೆ, ದಲಿತ ಶಾಸಕರು, ಸಚಿವರ ಸಭೆ ರದ್ದಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಜಿಲ್ಲೆಯಲ್ಲಿ ಸಾಕಷ್ಟು ರಸ್ತೆ ಅಭಿವೃದ್ಧಿಗೆ ಬೇಡಿಕೆ ಇದೆ. ರಸ್ತೆಗಳೂ ಉತ್ತಮವಾಗಿರಬೇಕೆಂಬ ಚಿಂತನೆಯೊಂದಿಗೆ ಇಲಾಖೆ ಕೆಲಸ ಮಾಡುತ್ತಿದೆ. ಇನ್ನೂ ನಮ್ಮ ಸರ್ಕಾರಕ್ಕೆ ಮೂರು ವರ್ಷಗಳ ಅವಧಿ ಇರುವುದರಿಂದ, ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. 
ಸ್ವಾತಂತ್ರ್ಯ ಪೂರ್ವದಲ್ಲಿಯೇ ನಿರ್ಮಾಣ ಮಾಡಿರುವ ಸೇತುವೆ 100 ವರ್ಷಗಳಿಗೂ ಹೆಚ್ಚಿನ ಕಾಲ ಬಾಳಿಕೆ ಬಂದಿದ್ದು, ಈಗ ಆಧುನಿಕ ಯೋಜನೆಗಳನ್ನು ಬಳಸಿಕೊಂಡು ಇನ್ನೂ ಹೆಚ್ಚಿನ ವರ್ಷಗಳು ಜನರ ಉಪಯೋಗಕ್ಕೆ ಬರುವಂತಹ ಸೇತುವೆ ನಿರ್ಮಾ ಮಾಡುವ ಉಳಿಯುವಂತಾಗಬೇಕೆಂದರು. 

ಇತಿಹಾಸದಲ್ಲಿ ಜಿಲ್ಲೆಯಲ್ಲಿ ಬುದ್ಧ, ಬಸವಣ್ಣ, ಡಾ. ಅಂಬೇಡ್ಕರ್, ನಾರಾಯಣ ಗುರು ಸೇರಿದಂತೆ ಸಾಧಕರ ಪುಸ್ತಕಗಳನ್ನು ಓದುವಂತಹ ಪರಿಸ್ಥಿತಿ ನಿರ್ಮಾಣ ಮಾಡುವ ಮೂಲಕ ಪುಸ್ತಕ ಕ್ರಾಂತಿ ಮಾಡಬೇಕಾಗಿದೆ ಎಂದರು. 
ಶಾಸಕ ಡಾ. ಮಂತರ್‌ಗೌಡ ಮಾತನಾಡಿ, 100 ವರ್ಷಗಳ ಹಿಂದೆ ಬ್ರಿಟಿಷರು ಆಡಳಿತ ನಡೆಸುತ್ತಿದ್ದ ಸಂದರ್ಭ ಲಾರ್ಡ್ ಲೂಯಿಸ್ 1837ರಲ್ಲಿ ನಿರ್ಮಿಸಿದ್ದ ಸೇತುವೆ ಮರ್ಬಲಗೊಂಡಿರುವುದರಿಂದ ನೂತನ ಸೇತುವೆ ನಿರ್ಮಾಣಕ್ಕೆ ಮುಂದಾಗಲಾಗಿದೆ. ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದ್ದು, ಯೋಜನೆಗಳ ಯಶಸ್ವಿಗೆ ಸ್ಥಳೀಯರು ಸಹಕಾರ ಮುಖ್ಯವಾಗಿದೆ ಎಂದರು. 

ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಹಾಗೂ ಸದಸ್ಯರು, ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್, ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ವೀಣಾ ಅಚ್ಚಯ್ಯ, ಎಚ್.ಎಸ್. ಚಂದ್ರಮೌಳಿ, ವಿ.ಪಿ. ಶಶಿಧರ್, ಕೆ.ಎ. ಯಾಕೂಬ್, ಹಾಸನ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜೀನಿಯರ್ಕೆ.ಎನ್. ನಳಿನಿ, ಕೊಡಗು ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನೀಯರ್‌ಎಂ.ಪಿ. ಮುತ್ತಪ್ಪ ಮತ್ತಿತರರು ಇದ್ದರು.

ಡಿನ್ನರ್‌ ಪಾರ್ಟಿ ಸಿಎಂ ಖುರ್ಚಿಗಲ್ಲ, ಬಿಜೆಪಿಗೆ ಕೆಲಸ ಇಲ್ಲ: ಸತೀಶ ಜಾರಕಿಹೊಳಿ

'ಸಿಎಂ ಸ್ಥಾನ ಹಂಚಿಕೆ ವಿಷಯ ಗೊತ್ತಿಲ್ಲ' 

ಮಡಿಕೇರಿ: ಮುಖ್ಯಮಂತ್ರಿ ಸ್ಥಾನ ಎರಡುವರೆ ವರ್ಷಕ್ಕೆ ಎಂದು ಹಂಚಿಕೆಯಾಗಿದೆಯೇ ಎಂಬ ವಿಷಯ ನಮಗೆ ಗೊತ್ತಿಲ್ಲ, ಅದನ್ನು ನೀವು ಅವರನ್ನೇ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. 
ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಸಿಸಿ ಅಧ್ಯಕ್ಷರಿದ್ದಾರೆ. ಸಿಎಂ ಇದ್ದಾರೆ. ಅವರನ್ನು ಕೇಳಿದರೆ ಸರಿಯಾದ ಉತ್ತರ ಸಿಗಬಹುದು. ಅದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದರು. 

ಅದು ಅರ್ಧನೋ ಪೂರ್ತಿನೋ 30 ತಿಂಗಳೋ 50 ತಿಂಗಳೋ ಗೊತ್ತಿಲ್ಲ. ಅದು ನಮ್ಮ ವ್ಯಾಪ್ತಿಗೂ ಬರಲ್ಲ. ಇದಕ್ಕೆ ಉತ್ತರವನ್ನು ನಾವು ಯಾರಿಂದ ಕೇಳಿ ಕೊಡಬೇಕು. ನಮ್ಮ ಹೈಕಮಾಂಡನ್ನೇ ಕೇಳಿ ಸರಿಯಾದ ಉತ್ತರ ಸಿಗಬಹುದು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ