ಗ್ಯಾರಂಟಿ ಬಗ್ಗೆ ಟೀಕಿಸಿದವರಿಗೆ ತಕ್ಕ ಉತ್ತರ: ಸಚಿವ ಸತೀಶ್‌ ಜಾರಕಿಹೊಳಿ

By Kannadaprabha News  |  First Published Aug 15, 2023, 9:42 PM IST

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಹಾಗೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕೈಗೊಂಡ ಜನಪರ ಯೋಜನೆಗಳಿಂದ ವಿಧಾನಸಭೆ ಚುನಾವಣೆಯಲ್ಲಿ ನಾವು ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ: ಸತೀಶ್‌ ಜಾರಕಿಹೊಳಿ 


ಬೆಳಗಾವಿ(ಆ.15):  ಗ್ಯಾರಂಟಿ ಯೋಜನೆಗಳನ್ನು ಹೇಗೆ ನೀಡುತ್ತಾರೆ? ಹೇಗೆ ದುಡ್ಡು ಹೊಂದಿಸುತ್ತಾರೆ? ಎಂಬ ಪ್ರಶ್ನೆ ಬಿಜೆಪಿಯವರು ಸೇರಿದಂತೆ ಹಲವರಲ್ಲಿ ಮೂಡಿತ್ತು. ಆದರೆ, ಸಿಎಂ ಸಿದ್ದರಾಮಯ್ಯನವರ ಆರ್ಥಿಕ ನೀತಿಯಿಂದ .40 ಸಾವಿರ ಕೋಟಿ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿಯೇ ಮೀಸಲಿಟ್ಟು, ಟೀಕೆ ಮಾಡಿದವರಿಗೆ ಉತ್ತರ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಎಷ್ಟೇ ಅಭಿನಂದನೆ ಸಲ್ಲಿಸಿದರೂ ಸಾಲದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಯಮಕನಮರಡಿ ಮತಕ್ಷೇತ್ರದ ಅರಳಿಕಟ್ಟಿಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕುಂದು-ಕೊರತೆಗಳ ಸಭೆ ಹಾಗೂ ಬನ್ನಿಬಾಗಿ, ಚಿಲಬಾಂವಿ, ಜಾರಕಿಹೊಳಿ ಗ್ರಾಮಸ್ಥರಿಂದ ಜರುಗಿದ ಸನ್ಮಾನ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ನೀಡಿದ ಪ್ರಮುಖ 5 ಭರವಸೆಗಳಲ್ಲಿ 3 ಭರವಸೆಗಳನ್ನು ಈಡೇರಿಸಿದ್ದು, ಇನ್ನೇರಡು ಭರವಸೆಗಳನ್ನು ಶೀಘ್ರದಲ್ಲೇ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.

Latest Videos

undefined

ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಕಡ್ಡಾಯ: ಸಿಎಂ ಸಿದ್ದರಾಮಯ್ಯ ಮಾಹಿತಿ

ಯಮಕನಮರಡಿ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು, ಪ್ರಸ್ತುತ ಬಜೆಟ್‌ನಲ್ಲಿ ಕಡಿಮೆ ಅನುದಾನ ಇದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಇನ್ನಷ್ಟುರಸ್ತೆಗಳನ್ನು ಸುಧಾರಣೆ ಮಾಡೋಣ. ರಾಜ್ಯದಲ್ಲಿ ನಮ್ಮ ಇಲಾಖೆಯಿಂದ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‌ ಪಕ್ಷದ 135 ಅಭ್ಯರ್ಥಿಗಳು ಗೆಲುವು ಸಾಧಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚಿಸಲು ಕಾರಣಿಕರ್ತರಾದ ಮುಖಂಡರಿಗೆ, ಮತದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಶಿಕಾಂತ ನಾಯಿಕ, ಗುರು ಪಾಟೀಲ, ಕರುಣಾಕರ ಶೆಟ್ಟಿ, ಅಬ್ದುಲ… ಘನಿ ದರ್ಗಾ ಸೇರಿದಂತೆ ಅರಳಿಕಟ್ಟಿ, ಬನ್ನಿಬಾಗಿ, ಚಿಲಬಾಂವಿ, ಜಾರಕಿಹೊಳಿ ಗ್ರಾಮದ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಹಾಗೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕೈಗೊಂಡ ಜನಪರ ಯೋಜನೆಗಳಿಂದ ವಿಧಾನಸಭೆ ಚುನಾವಣೆಯಲ್ಲಿ ನಾವು ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.  

click me!