ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಬಂದರೆ ಸ್ವಾಗತಿಸುತ್ತೇನೆ. ಅವರು ಮೊದಲಿನಿಂದಲೂ ಬಿಜೆಪಿ ವಿರೋಧಿ. ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ರಾಜ್ಯಾಧ್ಯಕ್ಷರಿಗೆ ಗೊತ್ತಿಲ್ಲವೆಂದರೆ ಅವರಿಗೆ ನೋವಾಗಲ್ವಾ. ಜೆಡಿಎಸ್ ಜಾತ್ಯಾತೀತ ಪರದೆ ಬಹಳ ಹಿಂದೆಯೇ ಸರಿದು ಹೋಗಿದೆ: ಸಚಿವ ಶಿವಾನಂದ ಪಾಟೀಲ
ವಿಜಯಪುರ(ಅ.04): ಶಾಮನೂರ ಶಿವಶಂಕರಪ್ಪನವರು ಮುಖ್ಯಮಂತ್ರಿಗಳಿಗಿಂತಲೂ ಹಿರಿಯರು.ಅವರು ಲಿಂಗಾಯತ ಸಮುದಾಯಕ್ಕೆ ಸೂಕ್ತ ಸ್ಥಾನ ಕಲ್ಪಿಸಲು ಸಲಹೆ ನೀಡಿದ್ದರೆ ಮುಖ್ಯಮಂತ್ರಿಗಳು ಸ್ವೀಕರಿಸುತ್ತಿದ್ದರು ಎಂಬುವುದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾವುದೇ ಸರ್ಕಾರ ಇದ್ದರೂ ಜಾತಿ ಆಧಾರದ ಮೇಲೆ ಅಧಿಕಾರಿಗಳ ಪೋಸ್ಟಿಂಗ್ ಮಾಡಲು ಆಗುವುದಿಲ್ಲ ಎಂದರು. ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಬಂದರೆ ಸ್ವಾಗತಿಸುತ್ತೇನೆ. ಅವರು ಮೊದಲಿನಿಂದಲೂ ಬಿಜೆಪಿ ವಿರೋಧಿ. ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ರಾಜ್ಯಾಧ್ಯಕ್ಷರಿಗೆ ಗೊತ್ತಿಲ್ಲವೆಂದರೆ ಅವರಿಗೆ ನೋವಾಗಲ್ವಾ. ಜೆಡಿಎಸ್ ಜಾತ್ಯಾತೀತ ಪರದೆ ಬಹಳ ಹಿಂದೆಯೇ ಸರಿದು ಹೋಗಿದೆ ಎಂದು ಸಚಿವರು ಹೇಳಿದರು.
ಶಿವಮೊಗ್ಗ ಗಲಭೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಘಟನೆಗೆ ಸರ್ಕಾರ ಕಾರಣವೆಂದು ವಿರೋಧ ಪಕ್ಷಗಳ ಹೇಳಿಕೆ ಸರಿಯಲ್ಲ. ಸರ್ಕಾರ ಬರುತ್ತವೆ, ಹೋಗುತ್ತವೆ. ಸರ್ಕಾರದ ಮೇಲೆ ಗೂಬೆ ಕೂರಿಸಬಾರದು. ಸೌಹಾರ್ದತೆಯಿಂದ ಬಾಳುವ ನೈತಿಕ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ತಿಳಿಸಿದರು.