ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಮತಕ್ಷೇತ್ರದ ಜನರ ಕುಂದುಕೊರತೆ ಆಲಿಸುವ ಜೊತೆಗೆ ಜನರ ಅಹವಾಲು ಸ್ವೀಕರಿಸಿದರು.
ಬಸವನಬಾಗೇವಾಡಿ (ಜು.30): ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಮತಕ್ಷೇತ್ರದ ಜನರ ಕುಂದುಕೊರತೆ ಆಲಿಸುವ ಜೊತೆಗೆ ಜನರ ಅಹವಾಲು ಸ್ವೀಕರಿಸಿದರು. ಜನರ ಕುಂದುಕೊರತೆ ಆಲಿಸುವ ಮುನ್ನು ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ನಂತರ ದೇವಸ್ಥಾನದಲ್ಲಿ ನಡೆದಿರುವ ಟೆನ್‌ಸೈಲ್ ಪ್ಯಾಬ್ರಿಕ್ ಕಾಮಗಾರಿ ವೀಕ್ಷಿಸಿದರು.
ಮೂಲನಂದೀಶ್ವರ ಬಯಲು ರಂಗಮಂದಿರದ ಹತ್ತಿರ ನಿರ್ಮಾಣ ಮಾಡುವ ದಾಸೋಹ ಭವನದ ಜಾಗೆ, ನೀಲನಕ್ಷೆಯನ್ನು ಪರಿಶೀಲಿಸಿ ಐತಿಹಾಸಿಕ ಬಾವಿಯ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮತಕ್ಷೇತ್ರದ ನಿಡಗುಂದಿ, ಕೊಲ್ಹಾರ ತಾಲೂಕು ಸೇರಿದಂತೆ ಮತಕ್ಷೇತ್ರದ ಜನರು ತಮ್ಮ ಗ್ರಾಮದಲ್ಲಿರುವ ರಸ್ತೆ ಅಭಿವೃದ್ಧಿ, ದೇವಸ್ಥಾನಗಳ ಜೀರ್ಣೋದ್ಧಾರ, ಜಮೀನುಗಳ ದಾರಿ ಸಮಸ್ಯೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಹವಾಲು, ಸಮಸ್ಯೆ ಕುರಿತು ಸಚಿವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ ಅವರು, ಕಾಂಗ್ರೆಸ್ ಪಕ್ಷವು ಚುನಾವಣೆ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರವಾಗಿದೆ.
undefined
ಟೋಲ್ ಸಂಗ್ರಹಿಸುವವರು ನಾವಲ್ಲ, ಹೆದ್ದಾರಿ ಪ್ರಾಧಿಕಾರದವರು: ಸಿದ್ದರಾಮಯ್ಯ
ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಉಳಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡಲು ಸದಾ ಬದ್ಧ. ತಾವು ಕೈಗೊಂಡಿರುವ ಮತಕ್ಷೇತ್ರದ ಅಭಿವೃದ್ಧಿಗೆ ಮತಕ್ಷೇತ್ರದ ಮತಬಾಂಧವರು ಬಹುಅಂತರದಿಂದ ಆಯ್ಕೆ ಮಾಡಿದ್ದಾರೆ. ನಿಮ್ಮೆಲ್ಲರ ಆಶಯದಂತೆ ನಾನು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸುತ್ತಿರುವೆ. ಸಚಿವ ಸ್ಥಾನದೊಂದಿಗೆ ಕ್ಷೇತ್ರದ ಜನರೊಂದಿಗೆ ಸದಾ ಸಂಪರ್ಕ ಇಟ್ಟುಕೊಂಡು ಮತಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ. ಮತಕ್ಷೇತ್ರದ ಜನರ ಕುಂದುಕೊರತೆ ಆಲಿಸಲು ಸಭೆ ಹಮ್ಮಿಕೊಳ್ಳಲಾಗುವುದು.ಜನರು ಈ ಸಭೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಬಹುದಿನಗಳ ಬೇಡಿಕೆಯಾಗಿರುವ ಬಸವೇಶ್ವರ ಜನ್ಮಸ್ಥಳದ ಬಸವನಬಾಗೇವಾಡಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚನೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಸವನಬಾಗೇವಾಡಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚನೆಗೆ ಮಾಡಲು ಮುಖ್ಯಮಂತ್ರಿಗಳಿಗೆ ಅಂತಿಮ ಪತ್ರ ನೀಡಲಾಗಿದೆ. ಅಭಿವೃದ್ಧಿ ಮಂಡಳಿ ರಚನೆಗೆ ಮಾಡಲು ಶಾಸನ ಮಾಡಬೇಕಾಗುತ್ತದೆ. ಮುಂಬರುವ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಿ ನಿರ್ಣಯಿಸಲಾಗುತ್ತದೆ ಎಂದರು.
ಯಾರಿಗೂ ಆಹಾರ ಕೊರತೆ ಆಗಬಾರದು: ಸಚಿವ ಮುನಿಯಪ್ಪ
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಕೊಲ್ಹಾರ ಬ್ಲಾಕ್ ಅಧ್ಯಕ್ಷ ರಫೀಕ್ ಪಕಾಲಿ, ಮುಖಂಡರಾದ ಕಲ್ಲು ದೇಸಾಯಿ, ಸಂಗಮೇಶ ಓಲೇಕಾರ, ಶಂಕರಗೌಡ ಬಿರಾದಾರ, ಅಶೋಕ ಹಾರಿವಾಳ, ಕಲ್ಲು ಸೊನ್ನದ, ಜಗದೇವಿ ಗುಂಡಳ್ಳಿ, ಸಂಗಮೇಶ ಓಲೇಕಾರ, ತಹಸೀಲ್ದಾರ ದುಂಡಪ್ಪ ಕೋಮಾರ, ಸಿಡಿಪಿಓ ನಿರ್ಮಲ ಸುರಪೂರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಿ.ಬಿ.ಕಿರಸೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು ಇದ್ದರು.