ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಶಿವಾನಂದ ಪಾಟೀಲ

By Kannadaprabha News  |  First Published Jun 6, 2023, 11:00 PM IST

ರಾಜ್ಯದ ಜನತೆ ಕಾಂಗ್ರೆಸ್‌ ಪಕ್ಷದ ಮೇಲೆ ವಿಶ್ವಾಸವಿಟ್ಟು ನಿಚ್ಚಳ ಬಹುಮತ ನೀಡಿದ್ದಾರೆ. ಜನರ ವಿಶ್ವಾಸಕ್ಕೆ ಪಕ್ಷ ದ್ರೋಹ ಬಗೆಯುವುದಿಲ್ಲ. ಅವರಿಗೆ ಕೊಟ್ಟ ವಚನದಂತೆ ನಮ್ಮ ಸರ್ಕಾರ ನಡೆದುಕೊಂಡಿದೆ. ಈ ಮೂಲಕ ರಾಜ್ಯದ ಜನರ ಋುಣ ತೀರಿಸುವ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ: ಸಚಿವ ಶಿವಾನಂದ ಪಾಟೀಲ 


ಬಸವನಬಾಗೇವಾಡಿ(ಜೂ.06):  ಈ ಸಲದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚು ಸ್ಥಾನಗಳನ್ನು ರಾಜ್ಯದ ಜನರು ಆಯ್ಕೆ ಮಾಡುವ ಮೂಲಕ ರಾಜ್ಯದಲ್ಲಿ ಮಾಜಿ ಸಿಎಂ ವಿರೇಂದ್ರ ಪಾಟೀಲ ನಂತರ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬಿದ್ದಾರೆ. ಕಾಂಗ್ರೆಸ್‌ ಪಕ್ಷವು ಚುನಾವಣೆ ಮುನ್ನ ರಾಜ್ಯದ ಜನರಿಗೆ ನೀಡಿರುವ ಐದು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್‌ ಸರ್ಕಾರ ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದ ಬಸವ ಭವನದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಪುರಸಭೆಯಿಂದ ಪೌರ ಸನ್ಮಾನ, ವಿವಿಧ ಇಲಾಖೆಯ ಅಧಿಕಾರಿಗಳಿಂದ, ಕಾಂಗ್ರೆಸ್‌ ಪಕ್ಷದ ಮುಖಂಡರಿಂದ, ಕಾರ್ಯಕರ್ತರಿಂದ, ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿದ ನಂತರ ಮಾತನಾಡಿದ ಅವರು, ರಾಜ್ಯದ ಜನತೆ ಕಾಂಗ್ರೆಸ್‌ ಪಕ್ಷದ ಮೇಲೆ ವಿಶ್ವಾಸವಿಟ್ಟು ನಿಚ್ಚಳ ಬಹುಮತ ನೀಡಿದ್ದಾರೆ. ಜನರ ವಿಶ್ವಾಸಕ್ಕೆ ಪಕ್ಷ ದ್ರೋಹ ಬಗೆಯುವುದಿಲ್ಲ. ಅವರಿಗೆ ಕೊಟ್ಟ ವಚನದಂತೆ ನಮ್ಮ ಸರ್ಕಾರ ನಡೆದುಕೊಂಡಿದೆ. ಈ ಮೂಲಕ ರಾಜ್ಯದ ಜನರ ಋುಣ ತೀರಿಸುವ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ನಮ್ಮ ಪಕ್ಷಕ್ಕೆ ನಿಚ್ಚಳ ಬಹುಮತ ನೀಡಿದ ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

Latest Videos

undefined

ಕೈಗಾರಿಕೆ ಸ್ಥಾಪನೆಗೆ ಏಕಗವಾಕ್ಷಿ ವ್ಯವಸ್ಥೆ: ಸಚಿವ ಎಂ.ಬಿ.ಪಾಟೀಲ್‌

ಈ ಬಾರಿ ಚುನಾವಣೆಯಲ್ಲಿ ಬಸವಣ್ಣ ಹಾಗೂ ಮತಕ್ಷೇತ್ರದ ಜನರು ನನ್ನನ್ನು ಕೈಬಿಡಲಿಲ್ಲ. ಹೆಚ್ಚು ಮತಗಳ ಅಂತರದಿಂದ ಆಯ್ಕೆ ಮಾಡಿದರು. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೈಹಿಡಿದವು. ಕ್ಷೇತ್ರದ ಜನರಿಗೆ ಎಷ್ಟುಕೃತಜ್ಞತೆ ಸಲ್ಲಿಸಿದರೂ ಸಾಲದು. ಮುಂಬರುವ ದಿನಗಳಲ್ಲಿ ನಾನು ಕ್ಷೇತ್ರದಲ್ಲಿ ಜನರ ಆಶಯದಂತೆ ಸದಾ ಅಭಿವೃದ್ಧಿಯನ್ನು ಗುರಿಯನ್ನಾಗಿ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತೇನೆ ಎಂದರು.

ಮುಂಬರುವ ದಿನಗಳಲ್ಲಿ ಬಸವನವಬಾಗೇವಾಡಿ ಪಟ್ಟಣವನ್ನು ಜನಾಕರ್ಷಣೆ ಕೇಂದ್ರವನ್ನಾಗಿ ಮಾಡಲು, ರೈತರ ಜಮೀನುಗಳಿಗೆ ನೀರು ಹರಿಸಲು, ಒಣದ್ರಾಕ್ಷಿ ಸಂರಕ್ಷಣಾ ಘಟಕ ಸ್ಥಾಪಿಸಲು, ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಯೋಜನೆ ರೂಪಿಸುತ್ತೇನೆ. ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆಂದರು.

ನೀರಾವರಿ ಖಾತೆ ಕೈ ತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಸಚಿವ ಎಂ.ಬಿ.ಪಾಟೀಲ

ಸಾನಿಧ್ಯ ವಹಿಸಿದ್ದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಚಿವರು ಬಸವ ಜನ್ಮಸ್ಥಳಕ್ಕೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆ, ಪಟ್ಟಣದ ಬಡಾವಣೆಗಳಿಗೆ ಶರಣರ ಹೆಸರು ನಾಮಕರಣ ಮಾಡಲು ಆದ್ಯತೆ ನೀಡಬೇಕು ಎಂದರು.

ಸಿದ್ಧಲಿಂಗ ಸ್ವಾಮೀಜಿ, ಚನ್ನಬಸವ ಸ್ವಾಮೀಜಿ, ಈರಣ್ಣ ಪಟ್ಟಣಶೆಟ್ಟಿ, ಸಂಗಮೇಶ ಓಲೇಕಾರ, ಮಲ್ಲಿಕಾರ್ಜುನ ನಾಯಕ ಮಾತನಾಡಿದರು. ಆನಂದದೇವರು, ಕಾಂಗ್ರೆಸ್‌ ಮುಖಂಡರಾದ ಸುರೇಶ ಹಾರಿವಾಳ, ಅಧ್ಯಕ್ಷ ಸುರೇಶಗೌಡ ಪಾಟೀಲ, ರುಕ್ಮಿಣಿ ರಾಠೋಡ, ಸಚಿವರ ಪತ್ನಿ ಭಾಗ್ಯಶ್ರೀ ಪಾಟೀಲ, ಅಳಿಯ ಶಿವಕುಮಾರ, ಸಚಿವರ ಪುತ್ರಿ ಸಂಯುಕ್ತಾ ಪಾಟೀಲ, ಸಹೋದರ ಶಿವಶರಣಗೌಡ ಪಾಟೀಲ, ಎಲ್‌.ಎನ್‌.ಅಗರವಾಲ, ಲ.ರು.ಗೊಳಸಂಗಿ, ಎ.ಎಂ.ಪಾಟೀಲ, ಶೇಖರ ಗೊಳಸಂಗಿ, ರವಿ ರಾಠೋಡ, ಕಲ್ಲು ಸೊನ್ನದ, ಅಶೋಕ ಹಾರಿವಾಳ,ಜಗದೇವಿ ಗುಂಡಳ್ಳಿ, ಸಂಜೀವ ಕಲ್ಯಾಣಿ, ನಜೀರ ಗಣಿ, ರವಿ ನಾಯ್ಕೋಡಿ, ಅಬ್ದುಲ್‌ ಚೌಧರಿ, ಬಸವರಾಜ ಗೊಳಸಂಗಿ, ಬಸವರಾಜ ಹಾರಿವಾಳ, ಅನಿಲ ಅಗರವಾಲ, ಚಂದ್ರಶೇಖರಗೌಡ ಪಾಟೀಲ, ಪ್ರೇಮಕುಮಾರ ಮ್ಯಾಗೇರಿ, ಬಸಣ್ಣ ದೇಸಾಯಿ ಸೇರಿದಂತೆ ಇತರರು ಇದ್ದರು. ಗೀತಾ ಘೋರ್ಪಡೆ ಪ್ರಾರ್ಥಿಸಿದರು. ಶಂಕರಗೌಡ ಬಿರಾದಾರ ಸ್ವಾಗತಿಸಿದರು. ಎಚ್‌.ಬಿ.ಬಾರಿಕಾಯಿ ನಿರೂಪಿಸಿದರು.

click me!