ಬಿಜೆಪಿ ಅಂಗಳದಲ್ಲಿ ಕತ್ತೆ ಸತ್ತು ಬಿದ್ದಿದೆ: ಸಚಿವ ಶಿವರಾಜ್ ತಂಗಡಗಿ

Published : Jan 23, 2025, 12:32 PM IST
ಬಿಜೆಪಿ ಅಂಗಳದಲ್ಲಿ ಕತ್ತೆ ಸತ್ತು ಬಿದ್ದಿದೆ: ಸಚಿವ ಶಿವರಾಜ್ ತಂಗಡಗಿ

ಸಾರಾಂಶ

ರಾಜ್ಯ ಬಿಜೆಪಿ ಪಾಳೆಯದಲ್ಲಿ ಅಧ್ಯಕ್ಷರು ಯಾರು ಎನ್ನುವ ಗೊಂದಲ ಇದೆ. ಅಸಲಿ-ನಕಲಿ ರಾಜ್ಯಾಧ್ಯಕ್ಷರು ಯಾರು ಎನ್ನುವ ಪ್ರಶ್ನೆ ಬೇರೆ ಎದ್ದಿದೆ. ಇದನ್ನು ಹುಟ್ಟು ಹಾಕಿದ್ದು ಬಿಜೆಪಿಯವರೆ ಹೊರತು ಕಾಂಗ್ರೆಸ್‌ನವರಲ್ಲ. ಹೀಗಾಗಿ ಬಿಜೆಪಿಗರು ಮೊದಲು ತಮ್ಮ ಪಕ್ಷದ ಹೊಲಸನ್ನು ತೊಳೆದುಕೊಳ್ಳಲಿ ನಂತರ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಚರ್ಚಿಸಲಿ ಎಂದು ವ್ಯಂಗ್ಯವಾಡಿದ ಸಚಿವ ಶಿವರಾಜ್ ತಂಗಡಗಿ

ಕಾರಟಗಿ(ಜ.23):  ರಾಜ್ಯ ಬಿಜೆಪಿಯ ಅಂಗಳದಲ್ಲಿ ಕತ್ತೆ ಸತ್ತು ಬಿದ್ದಿದೆ. ಅದನ್ನು ಸರಿಪಡಿಸಿಕೊಳ್ಳಲಿ ಅದು ಬಿಟ್ಟು ಕಾಂಗ್ರೆಸ್‌ನ ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ತಲೆ ಹಾಕುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಬಿಜೆಪಿ ಪಾಳೆಯದಲ್ಲಿ ಅಧ್ಯಕ್ಷರು ಯಾರು ಎನ್ನುವ ಗೊಂದಲ ಇದೆ. ಅಸಲಿ-ನಕಲಿ ರಾಜ್ಯಾಧ್ಯಕ್ಷರು ಯಾರು ಎನ್ನುವ ಪ್ರಶ್ನೆ ಬೇರೆ ಎದ್ದಿದೆ. ಇದನ್ನು ಹುಟ್ಟು ಹಾಕಿದ್ದು ಬಿಜೆಪಿಯವರೆ ಹೊರತು ಕಾಂಗ್ರೆಸ್‌ನವರಲ್ಲ. ಹೀಗಾಗಿ ಬಿಜೆಪಿಗರು ಮೊದಲು ತಮ್ಮ ಪಕ್ಷದ ಹೊಲಸನ್ನು ತೊಳೆದುಕೊಳ್ಳಲಿ ನಂತರ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಚರ್ಚಿಸಲಿ ಎಂದು ವ್ಯಂಗ್ಯವಾಡಿದರು. 

ಪ್ರಿಯಾಂಕಾ ಗಾಂಧಿಯವರನ್ನ ಕಿತ್ತೂರು ರಾಣಿ ಚೆನ್ನಮ್ಮಗೆ ಹೋಲಿಸಿದ್ರೆ ತಪ್ಪೇನು? : ಸಚಿವ ಶಿವರಾಜ ತಂಗಡಗಿ

ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತ ಹಾಗೂ ಬಿರುಕಿಲ್ಲ. ಈಗಾಗಲೇ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಯಾರೂ ಮಾತನಾಡಬಾರದು ಎಂದು ಸ್ಪಷ್ಟ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಯಾರೂ ಮಾತನಾಡುವುದಿಲ್ಲ ಎಂದರು. 

ಬಿಜೆಪಿಗರಿಗೆ ಗಾಂಧಿ, ಕಾಂಗ್ರೆಸ್ ಹಾಗೂ ಅಂಬೇಡ್ಕರ್ ಅವರ ಇತಿಹಾಸ, ಹೋರಾಟದ ಬಗ್ಗೆ ಕಿಂಚಿತ್ತೂ ಅರಿವಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಅನುಭವ, ಜ್ಞಾನವಾಗಲಿ ಇಲ್ಲ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ನಾವೇ ಎಂದು ವೀರ ಸಾವರ್ಕ‌ರ್ ಪತ್ರ ಬರೆದಿದ್ದನ್ನು ದಾಖಲೆ ಸಮೇತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೋರಿಸಿ ಬಿಜೆಪಿಯವರ ಇತಿಹಾಸವನ್ನು ಬಹಿರಂಗಪಡಿಸಿದ್ದಾರೆ. ಬಿಜೆಪಿಯ ಇನ್ನೋರ್ವ ಮಹಾನ್ ನಾಯಕರು ಸಂಸತ್ತಿನಲ್ಲಿ ಕಾಂಗ್ರೆಸ್‌ನವರು ಪದೇ ಪದೇ ಅಂಬೇಡ್ಕರ್ ಅಂಬೇಡ್ಕರ್ ಎಂದು ಹೇಳುವ ಬದಲು ದೇವರ ಬಗ್ಗೆ ಜಪ ಮಾಡಿದರೆ ಸ್ವರ್ಗಕ್ಕೆ ಹೋಗುವುದಾಗಿ ಹೇಳುವ ಮೂಲಕ ಅಂಬೇಡ್ಕರ್ ಕಂಡರೆ ಅವರಿಗೆಷ್ಟು ಗೌರವ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಸಂವಿಧಾನ, ಅಂಬೇಡ್ಕರ್, ಗಾಂಧಿ, ನೆಹರು ಪರಿವಾರದ ಬಗ್ಗೆ ಅವರು ಮಾತನಾಡಿದಷ್ಟು ಕಾಂಗ್ರೆಸ್ ಬಲಿಷ್ಠವಾಗುತ್ತೆ. ಕಾರ್ಯಕರ್ತರು ಬಲಿಷ್ಠವಾಗುತ್ತಾರೆ. ನಾವು ಯಾವತ್ತೂ ಈ ದೇಶದ ಅನೇಕತೆಗೆ ಕಾರಣವಾಗಿರುವ ಸಂವಿಧಾನ ರಕ್ಷಣೆಗೆ ಕಟಿಬದ್ದರಾಗಿದ್ದೇವೆ ಎಂದರು.

ಮಿನಿವಿಧಾನಸೌಧಕ್ಕೆ ಜಾಗ: 

ಕಾರಟಗಿ ತಾಲೂಕು ಆಡಳಿತ ಕೇಂದ್ರ ನಿರ್ಮಾಣ ಸ್ಥಳ ಹುಡುಕಾಟ ನಡೆಸುವಂತೆ ತಹಸೀಲ್ದಾರ್‌ಗೆ ಸೂಚಿಸಿದ್ದೆ. ಅದರಂತೆ ತಹಸೀಲ್ದಾ‌ರ್ ಸರ್ಕಾರಿ ಭೂಮಿ ಗುರುತಿಸಿದ್ದಾರೆ. ಕನಕಗಿರಿಯಲ್ಲಿ ಈಗಾಗಲೇ ಸ್ಥಳ ಗುರುತಿಸಲಾಗಿದ್ದು, ಶೀಘ್ರದಲ್ಲಿಯೇ ಮಿನಿ ವಿಧಾನಸೌಧ ನಿರ್ಮಾಣ ಮಾಡಲಿದ್ದೇವೆ. ಕಾರಟಗಿ ಆಸತ್ರೆ ನಿರ್ಮಾಣ ಸಂಬಂಧ ಟೆಂಡರ್‌ ಪ್ರಕ್ರಿಯೆ ನಡೆದಿದೆ. ಇದರ ಜೊತೆಗೆ ಕಾರಟಗಿ ಹಾಗೂ ಕನಕಗಿರಿ, ಕಾರಟಗಿ-ಚಳ್ಳೂರು, ಮುನ್ಸೂರು, ಸಿದ್ದಾಪುರ, ಚಳ್ಳೂರು ರಸ್ತೆ ನಿರ್ಮಾಣಕ್ಕೆ ಸಂಬಂಧ ₹70-80 ಕೋಟಿ ಮೊತ್ತದ ಟೆಂಡರ್‌ ಆಗಿವೆ. ಶೀಘ್ರದಲ್ಲಿ ಅವುಗಳಿಗೆಲ್ಲ ಭೂಮಿ ಪೂಜೆ ನೆರವೇರಿಸಲಾಗುವುದು. ರೈಸ್ ಟೆಕ್ನಾಲಜಿ ಪಾರ್ಕ್ ಸಂಬಂಧ ಈ ಹಿಂದಿನ ಬಿಜೆಪಿ ಸರ್ಕಾರ ಗಮನಹರಿಸಲಿಲ್ಲ. ಹೀಗಾಗಿ ಸಮಸ್ಯೆಯಾಗಿದೆ. ಶೀಘ್ರದಲ್ಲಿಯೇ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕ್ರಮವಹಿಸುತ್ತೇನೆ. ತೋಟಗಾರಿಕೆ ಪಾರ್ಕ್ ನಿರ್ಮಾಣ ಕಾರ್ಯಕ್ಕೂ ಚಾಲನೆ ನೀಡಲಾಗುವುದು ಎಂದರು.

ಭೂದಾಖಲೆಗಳ ಡಿಜಿಟಲೀಕರಣಕ್ಕೆ ಸಚಿವ ಚಾಲನೆ

ಕನಕಗಿರಿ: ಇಲ್ಲಿನ ತಹಸೀಲ್ದಾರ ಕಚೇರಿಯ ಅಭಿಲೇಖಾಲಯದ ದಾಖಲಾತಿಗಳ ಡಿಜಿಟಲೀಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಬುಧವಾರ ಚಾಲನೆ ನೀಡಿದರು. 

ಯಡಿಯೂರಪ್ಪ ಬಗ್ಗೆ ಮಾತಾಡೋ ಹಕ್ಕು ರಮೇಶ್‌ಗಿಲ್ಲ: ವಿಜಯೇಂದ್ರ

ನಂತರ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಕಾರಟಗಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿನ ಖಾಸ್ರಾ, ಆರ್‌ಟಿಸಿ, ಎ ಹಾಗೂ ಬಿ ಶ್ರೇಣಿಯ ದಾಖ ಲಾತಿಗಳನ್ನು ಸ್ಕ್ಯಾನಿಂಗ್ ಮಾಡಿ ಡಿಜಿಟಲೀ ಕರಣಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ಕನಕಗಿರಿ ತಾಲೂಕಿನ ಭೂದಾಖಲೆಗಳನ್ನ ಸ್ಕ್ಯಾನಿಂಗ್ ಮಾಡುವ ಮೂಲಕ ಡಿಜಿಟಲೀಕರಣ ಮಾಡುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಫೆ.10ರ ನಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ದಾಖಲೆ ಪಡೆದುಕೊಳ್ಳಬಹುದು. ಮೊದಲಿನಂತೆ ನಿಯಮಗಳನ್ನು ಸರಳೀಕರಣಗೊಳಿಸಿ ದಾಖಲೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕ್ರಿಯೆ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ತಿಳಿಸಿದರು. 

ತಹಸೀಲ್ದಾರ ವಿಶ್ವನಾಥ ಮುರುಡಿ, ಗ್ರೇಡ್-2 ತಹಸೀಲ್ದಾರ ವಿ.ಎಚ್. ಹೊರಪೇಟೆ, ಶಿರಸ್ತೇದಾರ ಅನಿತಾ ಇಂಡಿ, ಗ್ರಾಮ ಆಡಳಿತಾಧಿಕಾರಿ ಅಮರ ತೆಗ್ಗಿನಮನಿ, ಪಪಂ ಉಪಾಧ್ಯಕ್ಷ ಕಂಠಿರಂಗಪ್ಪ ನಾಯಕ, ಸದಸ್ಯ ಸಂಗಪ್ಪ ಸಜ್ಜನ, ಪ್ರಮುಖರಾದ ಅಮರಪ್ಪ ಗದ್ದಿ, ರಾಮಣ್ಣ ಆಗೋಲಿ, ವಿರೂಪಾಕ್ಷ ಸೇರಿ ತಹಸೀಲ್ದಾರ ಕಚೇರಿ ಸಿಬ್ಬಂದಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ