
ಚಿತ್ರದುರ್ಗ (ಜು.18): ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶ್ರೀ ಸಿದ್ದರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳನ್ನು ಮಂಗಳವಾರ ಸಚಿವರು ಭೇಟಿಯಾದ ಬಳಿಕ ಮಾಧ್ಯಮಗಳನ್ನ ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ರಾಜ್ಯದಲ್ಲಿ ನಾಲ್ಕು ವರ್ಷಗಳ ಬಿಜೆಪಿ ದುರಾಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿಯವರು ನಾಲ್ಕು ವರ್ಷ ಜನತೆಗೆ ಚಿಪ್ಪು ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಜನ ಆ ಪಕ್ಷಕ್ಕೆ ಚಿಪ್ಪು ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ಜನ ಚಿಪ್ಪು ನೀಡುವುದು ಗ್ಯಾರಂಟಿ ಎಂದು ಛೇಡಿಸಿದರು.
Belagavi Crime: 6ನೇ ತರಗತಿಯಿಂದಲೇ ಲವ್, ಪ್ರಿಯಕರನ ಜತೆ ಸೇರಿ ಭೀಮನ ಅಮವಾಸ್ಯೆ ದಿ
9 ವರ್ಷದ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ. ವಿದೇಶದಿಂದ ಕಪ್ಪು ಹಣ ತರುತ್ತೇವೆ. ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಸುಳ್ಳು ಆಶ್ವಾಸನೆ ನೀಡುತ್ತಾ ಜನತೆಗೆ ಮೋಸ ಮಾಡಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. 9 ವರ್ಷದಲ್ಲಿ ದೇಶ ಹಾಳು ಮಾಡಲು ಬೇಕಾದ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ವಿಪಕ್ಷದವರಿಗೆ ಬಾಯಿ ಚಪಲ:
ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದೆ. ಈಗಾಗಲೇ ಮೂರು ಗ್ಯಾರಂಟಿಗಳು ಜಾರಿಗೆ ಬಂದಿವೆ. ಮುಂದಿನ ತಿಂಗಳು ಪ್ರತಿ ಮಹಿಳೆಗೆ 2 ಸಾವಿರ ಹಣ ನೀಡುವ ಗೃಹ ಲಕ್ಷ್ಮೀ ಗ್ಯಾರಂಟಿ ಜಾರಿಗೆ ಬರಲಿದೆ. ಇದನ್ನು ಸಹಿಸಲು ಆಗದ ವಿಪಕ್ಷಗಳ ನಾಯಕರು ಬಾಯಿ ಚಪಲಕ್ಕೆ ಆರೋಪ ಮಾಡುತ್ತಿದ್ದಾರೆ. ರಾಜ್ಯ ವಿಪಕ್ಷ ನಾಯಕರಿಗೆ ಆರೋಪ ಮಾಡುವುದು ಚಾಳಿಯಾಗಿದೆ. ರೈತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ.
Bengaluru: ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿರುದ್ದ ಪತ್ನಿ ದೂರು
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಏನೆಲ್ಲಾ ಕಾರ್ಯಕ್ರಮ ರೂಪಿಸಿದ್ದಾರೆ ಎಂಬುದು ಜನತೆಗೆ ಗೊತ್ತಿದೆ. ಯಾವುದೇ ವಿಚಾರ ಇಲ್ಲದ ಕಾರಣಕ್ಕಾಗಿ ಸುಖಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಈ ದೇಶದಲ್ಲಿ ರೈತರ ಕಲ್ಯಾಣ, ಬಡವ, ದಲಿತ, ಅಲ್ಪಸಂಖ್ಯಾತ, ಮಹಿಳೆಯ ಸಬಲೀಕರಣವಾಗಿದ್ದರೆ ಅದು ಕಾಂಗ್ರೆಸ್ ನಿಂದ ಮಾತ್ರ. ಬಿಜೆಪಿ ಮತ್ತು ಜೆಡಿಎಸ್ ನವರು ರೈತರು, ದಲಿತರಿಗೆ ಏನು ಮಾಡಿದ್ದಾರೆ ಎಂದು ಹೇಳಲಿ ಎಂದು ಸಚಿವರು ಮಾರ್ಮಿಕವಾಗಿ ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.