ಲೋಕಸಭೆ ಹೊಸ್ತಿಲಲ್ಲಿ ಗ್ಯಾಸ್‌ ಸಬ್ಸಿಡಿ ಚುನಾವಣೆ ಗಿಮಿಕ್‌: ಸಚಿವ ಶಿವರಾಜ ತಂಗಡಗಿ

By Kannadaprabha News  |  First Published Aug 31, 2023, 3:00 AM IST

ಕಾಂಗ್ರೆಸ್‌ನ ಗ್ಯಾರಂಟಿಗಳಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ. ನಮ್ಮ ಸರ್ಕಾರದ ಗ್ಯಾರಂಟಿ ಪರಿಣಾಮ ದೇಶದಾದ್ಯಂತ ಆಗುತ್ತಿರುವುದರಿಂದಲೇ ಈಗ ಏಕಾಏಕಿ ಪ್ರಧಾನಿ ನರೇಂದ್ರ ಮೋದಿ ಗ್ಯಾಸ್‌ ಸಿಲಿಂಡರ್‌ ಬೆಲೆ ಮೇಲೆ 200 ಸಬ್ಸಿಡಿ ಘೋಷಣೆ ಮಾಡಿದ್ದಾರೆ. 


ಕೊಪ್ಪಳ (ಆ.31): ಕಾಂಗ್ರೆಸ್‌ನ ಗ್ಯಾರಂಟಿಗಳಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ. ನಮ್ಮ ಸರ್ಕಾರದ ಗ್ಯಾರಂಟಿ ಪರಿಣಾಮ ದೇಶದಾದ್ಯಂತ ಆಗುತ್ತಿರುವುದರಿಂದಲೇ ಈಗ ಏಕಾಏಕಿ ಪ್ರಧಾನಿ ನರೇಂದ್ರ ಮೋದಿ ಗ್ಯಾಸ್‌ ಸಿಲಿಂಡರ್‌ ಬೆಲೆ ಮೇಲೆ 200 ಸಬ್ಸಿಡಿ ಘೋಷಣೆ ಮಾಡಿದ್ದಾರೆ. ಇದು ಲೋಕಸಭಾ ಚುನಾವಣೆ ಗಿಮಿಕ್‌ ಅಲ್ಲದೆ ಮತ್ತೇನು ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಿಡಿಕಾರಿದರು. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಕಳೆದ ನಾಲ್ಕು ವರ್ಷಗಳಿಂದ ಜನರ ಸಂಕಷ್ಟನೆನಪಾಗಲಿಲ್ಲ. 

ಲೋಕಸಭೆ ಚುನವಣೆ ಹೊಸ್ತಿಲಲ್ಲಿ ಈಗ ನೆನಪಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದಲ್ಲಿ ಗ್ಯಾರಂಟಿ ಜಾರಿ ಮಾಡಿದಂತೆ ತಾವೂ ಅಧಿಕಾರಕ್ಕೆ ಬಂದ ತಕ್ಷಣ ಏಕೆ ಈ ಸಬ್ಸಿಡಿ ಘೋಷಣೆ ಮಾಡಲಿಲ್ಲ? ಎಂದು ಆಕ್ರೋಶ ಹೊರ ಹಾಕಿದರು. ಲೋಕಸಭಾ ಚುನಾವಣೆ ನಂತರವೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ. ಕೇಂದ್ರದಲ್ಲಿ ಆಳ್ವಿಕೆ ನಡೆಸುತ್ತಿರುವವರು ರಾಜ್ಯದಲ್ಲಿ ಜಾರಿ ಮಾಡಿರುವ ಇಂಥ ಗ್ಯಾರಂಟಿ ಯೋಜನೆಗಳಿಗೆ ಪ್ರತಿಯಾಗಿ ಒಂದು ಯೋಜನೆಯ ಉದಾಹರಣೆ ನೀಡಲಿ ಎಂದು ಸವಾಲು ಹಾಕಿದರು.

Tap to resize

Latest Videos

undefined

ರಾಜಕಾರಣದಿಂದ ಹೊರಗೆ ಹೆಜ್ಜೆ ಇಟ್ಟಿಲ್ಲ, ಸಮಯ, ಸಂದರ್ಭ ಎಲ್ಲದಕ್ಕೂ ಉತ್ತರ ಕೊಡುತ್ತೆ: ನಿಖಿಲ್‌

ಆಪರೇಷನ್‌ನಿಂದ ಅನೈತಿಕ ಸರ್ಕಾರ ರಚಿಸಿದ್ದು ಬಿಜೆಪಿ: ಆಪರೇಷನ್‌ ಕಮಲ ಮಾಡಿ ಅನೈತಿಕ ಸರ್ಕಾರ ರಚನೆ ಮಾಡಿದ್ದು ಬಿಜೆಪಿ, ಕಾಂಗ್ರೆಸ್‌ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ ನಾವೇಕೆ ಆಪರೇಷನ್‌ ಮಾಡೋಣ? ಎಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಪ್ರಶ್ನಿಸಿದರು. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರನ್ನು ಬಳಸಿ ಅವರನ್ನು ಅನರ್ಹರನ್ನಾಗಿ ಮಾಡಿದ ಯಾವುದಾದರೂ ಸರ್ಕಾರ ಇದ್ದರೆ ಅದು ಬಿಜೆಪಿ ಸರ್ಕಾರ ಎಂದು ಟೀಕಿಸಿದರು.

ಕಾಂಗ್ರೆಸ್‌ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ ನಾವು ಏಕೆ ಅಪರೇಷನ್‌ ಮಾಡ್ತೀವಿ. ಕಾಂಗ್ರೆಸ್‌ ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಸೇರಿದರೆ ಅವರಿಗೆ ನಾವು ಸ್ವಾಗತಿಸುತ್ತೇವೆ. ಬಿಜೆಪಿಯವರು 16 ಶಾಸಕರನ್ನು ಆಪರೇಷನ್‌ ಕಮಲ ಮಾಡಿ ಬೀದಿಗೆ ಬಿಟ್ಟಿದ್ದಾರೆ. ಬಿಜೆಪಿಯವರನ್ನು ನಂಬಿ ಅವರು ಅಲ್ಲಿ ಇರೋಕೆ ಆಗಲ್ಲ, ನಾವು ಏನಾದರೂ ಬಾಗಲು ತೆರೆದರೆ ಎಲ್ಲರೂ ಬರುತ್ತಾರೆ. ಕಾಂಗ್ರೆಸ್‌ ಸಿದ್ಧಾಂತಗಳನ್ನು ಒಪ್ಪಿ ಬಂದರೆ ಬರಲಿ ಅದಕ್ಕೆ ನಿರ್ಣಯ ತೆಗೆದುಕೊಳ್ಳಲು ಮುಖ್ಯಮಂತ್ರಿ ಹಾಗೂ ಡಿಸಿಎಂ, ಡಾ. ಮಲ್ಲಿಕಾರ್ಜುನ ಖರ್ಗೆ ಅವರಿದ್ದಾರೆ ಎಂದರು.

ಸಚಿವ ಈಶ್ವರ ಖಂಡ್ರೆ ಜನಸ್ಪಂದನ ನೆಪ ಮಾತ್ರ: ಕೇಂದ್ರ ಸಚಿವ ಭಗವಂತ ಖೂಬಾ

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ರಚನೆಯಾಗಿ 100 ದಿನಗಳು ಕಳೆದರೂ ಇಲ್ಲಿವರೆಗೆ ಬಿಜೆಪಿಯಲ್ಲಿ ವಿರುದ್ಧ ಪಕ್ಷದ ನಾಯಕರ ಆಯ್ಕೆ ಆಗಿಲ್ಲ ಎಂದರು. ಕಾಂಗ್ರೆಸ್‌ ಸರ್ಕಾರ ನೂರು ದಿನಗಳಲ್ಲಿ ಜನರ ಬೇಡಿಕೆಯನ್ನು ಈಡೇರಿಸಿದೆ. ಸರ್ಕಾರ ನೀಡಿರುವ ಐದು ಗ್ಯಾರಂಟಿಗಳನ್ನು ಕೂಡ ಈಡೇರಿಸಿದೆ ಎಂದರು. ಈಶ್ವರಪ್ಪ ಅವರು ಸುಳ್ಳಿನ ಸರದಾರ ಅವರು ಏನೇ ಹೇಳಿ ಸುಳ್ಳು ಹೇಳುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ ಆರೋಪಿಸಿದರು.

click me!