ಬಿಜೆಪಿ ಪಾದಾರ್ಪಣೆ ಶೆಟ್ಟರ್ ಗೌರವಕ್ಕೆ ಚ್ಯುತಿ: ಸಚಿವ ಶಿವರಾಜ ತಂಗಡಗಿ

By Kannadaprabha News  |  First Published Jan 29, 2024, 3:00 AM IST

ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ ಆಗಿರುವುದು, ಅವರ ಗೌರವ ಕಡಿಮೆ ಮಾಡಿದಂತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಬಿಜೆಪಿ ಹೋಗಿರುವುದು, ನಮಗೇನೂ ತೊಂದರೆ ಇಲ್ಲ. 


ಕೊಪ್ಪಳ (ಜ.29): ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ ಆಗಿರುವುದು, ಅವರ ಗೌರವ ಕಡಿಮೆ ಮಾಡಿದಂತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಬಿಜೆಪಿ ಹೋಗಿರುವುದು, ನಮಗೇನೂ ತೊಂದರೆ ಇಲ್ಲ. ಅವರ ಗೌರವ ಕಡಿಮೆಯಾಗಿದೆ, ನಮ್ಮಂತ ಸಣ್ಣವರು ಮಾಡುವ ಕೆಲಸ ಅವರು ಮಾಡಿದ್ದಾರೆ ಎಂದು ಹೇಳಿದರು.

ಬರ ಪರಿಹಾರ ಬದಲು, ಮಂತ್ರಾಕ್ಷತೆ ನೀಡಿದೆ: ಸರ್ಕಾರ ಆದಷ್ಟು ಬೇಗ ಬರ ಪರಿಹಾರ ನೀಡುತ್ತದೆ. ಈಗಾಗಲೇ ಜಿಲ್ಲೆಯಲ್ಲಿ 90 ಸಾವಿರ ಖಾತೆಗಳಿಗೆ ಬರ ಪರಿಹಾರ ಹಣ ಜಮೆ ಮಾಡಲಾಗಿದೆ. ಕೇಂದ್ರ ಸರ್ಕಾರ ಬರದ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಒಂದು ಪೈಸೆ ಹಣ ಕೊಡುತ್ತಿಲ್ಲ. ಕೇವಲ ಮಂತ್ರಾಕ್ಷತೆ ಹಂಚಿಕೆ ಮಾಡ್ತಿದ್ದಾರೆ. ಪ್ರಧಾನಿಯನ್ನು ಸಿಎಂ ಭೇಟಿ ಮಾಡಿದ್ದು, ಬರದ ಬಗ್ಗೆ ಚರ್ಚೆಗೆ ಅಲ್ಲ. ಅವರು ರಾಜ್ಯಕ್ಕೆ ಬಂದಾಗ ಮಾತಾಡೋಕೆ ಟೈಮ್ ಇಲ್ಲ. ಕೇವಲ ರೋಡ್ ಶೋ ಮಾಡೋಕೆ ಟೈಮ್ ಇದೆ. ದೇಶದ ಪ್ರಧಾನಿ ಒಂದು ದಿನವೂ ಸಂಸದರನ್ನು ಕರೆದು ಸಮಸ್ಯೆ ಕೇಳಿಲ್ಲ ಎಂದು ಆರೋಪಿಸಿದರು.

Tap to resize

Latest Videos

undefined

ಭವಿಷ್ಯದ ವಿದ್ಯುತ್ ಭಾರ ನಿಭಾಯಿಸಲು ಸರ್ಕಾರ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ

ನಮ್ಮ ಸರ್ಕಾರ ರಾಜ್ಯದ ಬಡವರಿಗೆ ಗ್ಯಾರಂಟಿ ಯೋಜನೆ ಕೊಟ್ಟಿದೆ. ರಾಹುಲ್ ಗಾಂಧಿ ನ್ಯಾಯ ಯಾತ್ರೆಗೆ ಅಡ್ಡಿ ಮಾಡಿದ್ದು ಸರಿಯಲ್ಲ. ನ್ಯಾಯ ಯಾತ್ರೆಯಿಂದ ಬಿಜೆಪಿಗೆ ನಡುಕ ಉಂಟಾಗಿದೆ. ಬಿಜೆಪಿಯವರಿಗೆ ಟೆನ್ಶನ್ ಆಗಿದೆ. ಹೀಗೆ ಮುಂದುವರಿದರೆ ರಾಮ ಕೂಡ ಶಾಪ ಹಾಕ್ತಾನೆ. ರಾಮ ಅವರಿಗೆ ಕನಸಲ್ಲಿ ಬಂದು ಶಾಪ ಕೊಡಬಹುದು ಎಂದರು. ಅನಂತಕುಮಾರ ಹೆಗಡೆ ಮಸೀದಿ ಕೆಡವಿ ಮಂದಿರ ನಿರ್ಮಾಣ ಮಾಡ್ತೀವಿ ಎಂದಿದ್ದಾರೆ. ಅನಂತಕುಮಾರ್ ಹೆಗಡೆ ಒಬ್ಬ ಹುಚ್ಚ ಅಂತ ಕೈ ಬಿಟ್ಟಿದ್ದಾರೆ. ಆತನಿಗೆ ಹುಚ್ಚು ಹಿಡಿದಿದೆ, ಅವರೇ ಕೈ ಬಿಟ್ಟಿದ್ದಾರೆ. ನಾವ್ಯಾಕೆ ರಿಯಾಕ್ಟ್ ಮಾಡೋಣ ಎಂದರು.

ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ರಾಜ್ಯ ಸರ್ಕಾರದಿಂದ ಕಳೆದ 9 ತಿಂಗಳುಗಳಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ, ಮಹಿಳೆಯರು, ಯುವಕರು, ಪಡಿತರ ಚೀಟಿದಾರರಿಗೆ ಪಂಚ ಗ್ಯಾರಂಟಿಗಳ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಸರ್ಕಾರಿ ಸಾರಿಗೆಯಲ್ಲಿ ಜೂನ್ ಇಂದ ಇಲ್ಲಿಯವರೆಗೆ 2.36 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣಿಸಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 2,64,807 ಕುಟುಂಬಗಳು ನೋಂದಣಿ ಮಾಡಿಕೊಂಡಿದ್ದು, ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ.

ಜನಸಾಮಾನ್ಯರಿಗೆ ಸಂವಿಧಾನದ ಅರಿವು ಅಗತ್ಯ: ಸಚಿವ ಕೆ.ಎಚ್.ಮುನಿಯಪ್ಪ

ಗೃಹಲಕ್ಷ್ಮೀ ಯೋಜನೆಯಡಿ ಇಲ್ಲಿಯವರೆಗೆ ಜಿಲ್ಲೆಯ 3,01,246 ಫಲಾನುಭವಿಗಳಿಗೆ ₹285 ಕೋಟಿ ಜಮೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೂ 2,606 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಪದವೀಧರರಿಗೆ ಪ್ರತಿ ಮಾಹೆ ₹3000 ಹಾಗೂ ಡಿಪ್ಲೊಮಾ ಹೊಂದಿದವರಿಗೆ ₹1500 ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಅನ್ನ ಭಾಗ್ಯ ಯೋಜನೆಯಡಿ ಅಂತ್ಯೋದಯ, ಬಿಪಿಎಲ್ ಸೇರಿದಂತೆ ಒಟ್ಟು 3,28,533 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ ಒಟ್ಟು 11,83,343 ಸದಸ್ಯರಿಗೆ ಸರ್ಕಾರದ ಎನ್‌ಎಫ್‌ಎಸ್‌ಎ ಕಾಯ್ದೆಯಂತೆ ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಹೆಚ್ಚುವರಿಯಾಗಿ ನೀಡಬೇಕಾದ 5ಕೆ.ಜಿ ಅಕ್ಕಿಗೆ ಪ್ರತಿ ಕೆ.ಜಿ ಗೆ 34 ರೂ. ರಂತೆ ಪ್ರತಿ ಸದಸ್ಯರಿಗೆ ₹170ರಂತೆ ಜುಲೈ ಮಾಹೆಯಿಂದ ಇಲ್ಲಿಯವರೆಗೆ ಒಟ್ಟು 2,89,094 ಪಡಿತರ ಕುಟುಂಬಗಳ ಮುಖ್ಯಸ್ಥರ ಖಾತೆಗೆ ಡಿಬಿಟಿ ಮೂಲಕ ₹102.58 ಕೋಟಿ ಜಮೆ ಮಾಡಲಾಗಿದೆ ಎಂದರು.

click me!