
ಕೊಪ್ಪಳ(ಮಾ.26): ''ಮೋದಿ ಮೋದಿ ಎಂದು ಕೂಗುವ ಯುವಕರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು'' ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಯೂ ಆಗಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಂಗಡಗಿ ಈ ಹೇಳಿಕೆ ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಾರಟಗಿಯಲ್ಲಿ ಭಾನುವಾರ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುವ ವೇಳೆ ತಂಗಡಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುತ್ತೇನೆಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಆದರೆ ಆ ಭರವಸೆಯನ್ನು ಅವರು ಈವರೆಗೂ ಈಡೇರಿಸಿಲ್ಲ. 10 ವರ್ಷ ಅಧಿಕಾರ ನಡೆಸಿದರೂ ಯುವಕರಿಗೆ ಉದ್ಯೋಗ ಕೊಡಲು ಆಗಿಲ್ಲ. ಅವರು ಹೇಳಿದಂತೆ ಆಗಿದ್ದರೆ ಹತ್ತು ವರ್ಷದಲ್ಲಿ ದೇಶದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ, ಉದ್ಯೋಗದ ಬದಲು ಪಕೋಡಾ ಮಾರಲು ಹೋಗಿ ಎಂದರು. ಇದಕ್ಕಾಗಿ ಅವರಿಗೆ ನಾಚಿಕೆಯಾಗಬೇಕು. ಆದರೂ ''ಮೋದಿ ಮೋದಿ'' ಎಂದು ಹೇಳುವ ಯುವಕರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿದರು.
ಮೋದಿ ನೇತೃತ್ವದ ಬಿಜೆಪಿಯಿಂದ ದೇಶ ಅಧೋಗತಿಗೆ: ಸಚಿವ ಶಿವರಾಜ ತಂಗಡಗಿ
ಮೋದಿ ಸರ್ಕಾರ ಅಭಿವೃದ್ಧಿ ವಿಚಾರದಲ್ಲೂ ಸಂಪೂರ್ಣವಾಗಿ ವಿಫಲವಾಗಿದೆ. ಅವರಿಗೆ ಮತ ಕೇಳಲು ನಾಚಿಕೆಯಾಗಬೇಕು. ಯಾವ ಮುಖ ಇಟ್ಟುಕೊಂಡು ಅವರು ಮತದಾರರ ಮುಂದೆ ಹೋಗುತ್ತಾರೆ. ಅವರಿಗೆ ಯಾವುದೇ ಅಭಿವೃದ್ಧಿ ಮಾಡುವ ಸಾಮರ್ಥ್ಯವೂ ಇಲ್ಲ ಎಂದು ಕಿಡಿಕಾರಿದರು.
ಆಯೋಗಕ್ಕೆ ಬಿಜೆಪಿ ದೂರು
ಬೆಂಗಳೂರು: ‘ಮೋದಿ ಮೋದಿ’ ಎನ್ನುವವರ ಕಪಾಳಕ್ಕೆ ಬಾರಿಸಬೇಕು ಎಂದು ಹೇಳಿಕೆ ನೀಡಿರುವ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.