ಕೊಪ್ಪಳ: ಇಂದು ಕುಕನೂರಿಗೆ ಸಚಿವೆ ಶೋಭಾ ಕರಂದಾಜ್ಲೆ ಆಗಮನ

Published : Feb 22, 2023, 10:44 AM IST
ಕೊಪ್ಪಳ: ಇಂದು ಕುಕನೂರಿಗೆ ಸಚಿವೆ ಶೋಭಾ ಕರಂದಾಜ್ಲೆ ಆಗಮನ

ಸಾರಾಂಶ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಇಂದು (ಫೆ.22) ರಂದು ಕುಕನೂರು ಪಟ್ಟಣಕ್ಕೆ ಭಾರತ ಸರ್ಕಾರದ ರಾಜ್ಯ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವೆ ಶೋಭಾ ಕರಂದಾಜ್ಲೆ(Shobha karandlaje) ಆಗಮಿಸಲಿದ್ದಾರೆ.

ಕುಕನೂರು (ಫೆ.22) : ಫೆ.22 ರಂದು ಕುಕನೂರು ಪಟ್ಟಣಕ್ಕೆ ಭಾರತ ಸರ್ಕಾರದ ರಾಜ್ಯ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವೆ ಶೋಭಾ ಕರಂದಾಜ್ಲೆ(Shobha karandlaje) ಆಗಮಿಸಲಿದ್ದಾರೆ.

ಪಟ್ಟಣದ ಶರಣಪ್ಪ ಅರಕೇರಿ ಜಾಗೆಯಲ್ಲಿ ಬೆಳಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ, ಜಿಪಂ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(Department of Women and Child Development) ಸಹಯೋಗದಲ್ಲಿ ಜರುಗಲಿರುವ ಅಂತಾರಾಷ್ಟಿ್ರಯ ಮಹಿಳಾ ದಿನಾಚರಣೆ-2023(International Women's Day-2023)ರ ಪ್ರಯುಕ್ತ ಹಮ್ಮಿಕೊಂಡಿರುವ ಬೃಹತ್‌ ಮಹಿಳಾ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಕೌಶಲ್ಯ ಅಭಿವೃದ್ಧಿ ಮೇಳದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಬರುವಂತೆ ಅಪಾರ ಮಹಿಳೆಯರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.ಅಲ್ಲದೆ ಉಪಹಾರದ ವ್ಯವಸ್ಥೆ ಸಹ ಕೈಗೊಂಡಿದ್ದಾರೆ. ಸುಮಾರು 15 ಸಾವಿರ ಮಹಿಳೆಯರು ಭಾಗಿಯಾಗಲಿದ್ದಾರೆ.

ಕುರುಬರಿಗೂ ಮೋಸ ಮಾಡಿದ್ದ ಸಿದ್ದರಾಮಯ್ಯ: ಶೋಭಾ ಕರಂದ್ಲಾಜೆ

ರಾಜ್ಯ ಪ್ರವಾಸೋದ್ಯಮ(Karnataka tourism), ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌(Minister Anand singh) ಕಾರ್ಯಕ್ರಮದ ಉದ್ಘಾಟಿಸಲಿದ್ದಾರೆ.ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಆಚಾರ(Alappa Achar) ಅಧ್ಯಕ್ಷತೆ ವಹಿಸುವರು. ಸಂಸದ ಸಂಗಣ್ಣ ಕರಡಿ(Sanganna Karadi) ವಸ್ತು ಪ್ರದರ್ಶನ ಮಳಿಗೆಗಳಿಗೆ ಚಾಲನೆ ನೀಡಲಿದ್ದಾರೆ.

ಶಾಸಕರಾದ ಅಮರೇಗೌಡ ಎಲ್‌.ಪಾಟೀಲ್‌ ಬಯ್ಯಾಪೂರ, ಕೆ.ರಾಘವೇಂದ್ರ ಹಿಟ್ನಾಳ್‌, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು,ವಿಧಾನ ಪರಿಷತ್‌ ಸದಸ್ಯರಾದ ಶಶೀಲ್‌ ಜಿ.ನಮೋಶಿ, ಡಾ.ಚಂದ್ರಶೇಖರ್‌ ಬಿ.ಪಾಟೀಲ, ಶರಣಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಪಾಲ್ಗೊಳ್ಳುವರು.

ಶಾಲೆಗಳಲ್ಲಿ ಯಕ್ಷಗಾನ ಕಲಿಸಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ ಅನಿಲಕುಮಾರ್‌,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗ ಡಾ ಎನ್‌.ಮಂಜುಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಡಾ ಅನುರಾಧ ಕೆಎನ್‌.,ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ರತ್ನಂ ಪಾಂಡೆಯ,ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ.,ಕುಕನೂರು ತಹಸೀಲ್ದಾರ ಮುರಳೀಧರರಾವ್‌ ಕುಲಕರ್ಣಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ,ಯಲಬುರ್ಗಾ ತಹಸೀಲ್ದಾರ ವಿಠ್ಠಲ್‌ ಚೌಗಲಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸುವರು ಎಂದು ಯಲಬುರ್ಗಾ-ಕುಕನೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಅಂಗಡಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ