ಚಿಕ್ಕಮಗಳೂರಿನಲ್ಲಿ ಗೋ ಬ್ಯಾಕ್ ಶೋಭಕ್ಕ ಅಭಿಯಾನ ನಡೆಸಿದವರ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆಕ್ರೋಶ ಹೊರ ಹಾಕಿದ್ದಾರೆ. ಗಂಡಸರಷ್ಟೇ ಅಧಿಕಾರದಲ್ಲಿ ಇರಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಫೆ.26): ಕಳೆದ ಕೆಲ ದಿನಗಳಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೆ ಈ ಬಾರಿ ಟಿಕೆಟ್ ನೀಡಬಾರದು ಎಂಬ ಅಭಿಯಾನ ಹಾಗೂ ಪತ್ರ ಚಳುವಳಿ ನಡೆಸಿದ್ದಾರೆ. ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಎಂಬ ಭಾವನೆ ಇದೆ. ಈ ದರ್ಪದಿಂದಲೇ ಕೆಲವರು ಈ ರೀತಿ ಮಾಡಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ನಾನು ಕೊಡಲ್ಲ ಹೈಕಮಾಂಡ್, ಹಿರಿಯರು ಕೊಡುತ್ತಾರೆ :
ನನ್ನ ವಿರುದ್ದ ಕಳೆದ ಚುನಾವಣೆ ಯಲ್ಲಿ ಗೋಬ್ಯಾಕ್ ಮಾಡಿದ್ದರು. ಈ ಚುನಾವಣೆಯಲ್ಲೂ ಮಾಡಿದ್ದಾರೆ. ವ್ಯವಸ್ಥಿತವಾಗಿ ಮಾಡಿದ್ದಾರೆ. ಮಾಡಿಸುತ್ತಿದ್ದಾರೆ. ಹೈಕಮಾಂಡ್ ನನಗೆ ಯಾವ ಜವಬ್ದಾರಿ ನೀಡಿದೆ ಪ್ರಾಮಾಣಿಕ ವಾಗಿ, ಕಪ್ಪು ಚುಕ್ಕೆ ಬಾರದಂತೆ ರಾಜಕೀಯ ಮಾಡಿದ್ದೇನೆ. ಯಾರು ಷಡ್ಯಂತ ಮಾಡಿದರು. ಉತ್ತರ ನಾನು ಕೊಡಲ್ಲ ಹೈಕಮಾಂಡ್, ಹಿರಿಯರು ಕೊಡುತ್ತಾರೆ ಎಂದು ಆಕ್ರೋಶ ಹೊರ ಹಾಕಿದರು. ಪತ್ರ ಯಾರು ಬರೆದರು? ಯಾರದ್ದು ಹ್ಯಾಂಡ್ ರೈಟಿಂಗ್ ಬರೆದರಾ? ಯಾರು ಪೋಸ್ಟ್ ಮಾಡಿದರು? ಎಷ್ಟು ಪೋಸ್ಟ್ ಮಾಡಿದರು. ಇದೆಲ್ಲದರ ಬಗ್ಗೆ ಕೇಂದ್ರ ಕೂಡ ವರದಿ ತರಿಸಿ ಕೊಂಡಿದೆ. ಸತ್ಯ ಕೇಂದ್ರದವರಿಗೆ ತಿಳಿದಿದೆ ಎಂಬ ವಿಶ್ವಾಸವಿದೆ ಎಂದರು.ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ಗೊತ್ತಿದೆ.
undefined
ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ; ಪ್ರತಿವರ್ಷ 148 ಮಹಿಳೆಯರ ಮೇಲೆ ಅತ್ಯಾಚಾರ, 2,630 ಮಂದಿಗೆ ಕಿರುಕುಳ
ಗೋ ಬ್ಯಾಕ್ ಎಂದು ಅಭಿಮಾನ ಮಾಡುತ್ತಿರುವವರು ತಮ್ಮ ಶಾಸಕರನ್ನು ಉಳಿಸಿಕೊಳ್ಳಲು ಆಗಲ್ಲ ಎಂದು ಬಿಜೆಪಿ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆ ಆದ ಮೇಲೆ ಎಲ್ಲವೂ ಆಚೆ ಬರುತ್ತದೆ. ಕಾಂಗ್ರೆಸ್ ಆಂತರಿಕ ರಾಜಕೀಯದ ಬಗ್ಗೆ ನಾನು ಕಮೆಂಟ್ ಮಾಡಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವೆ ಏನು ನಡೆಯುತ್ತಿದೆ ಎಂದು ಚುನಾವಣೆ ಬಳಿಕ ಆಚೆಗೆ ಬರುತ್ತದೆ ಎಂದರು.
ಚುನಾವಣೆ ಬಳಿಕ ಎಲ್ಲವೂ ಹೊರ ಬರಲಿದೆ :
ಈ ಬಾರಿ ಶೋಭಾ ಲೋಕಸಭಾ ಚುನಾವಣಾ ಟಿಕೆಟ್ ಪತನವಾಗುತ್ತೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ, ಡಿಸಿಎಂ ಮಧ್ಯ ಏನು ನಡೆದಿದೆ ಅನ್ನೋದು ಚುನಾವಣೆ ಬಳಿಕ ಹೊರಬರಲಿದೆ. ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ ಅನ್ನೋದು ಅವರಿಗೆ ಗೊತ್ತಿದೆ. ಅವರ ಎಂಎಲ್ಎಗಳನ್ನು ಉಳಿಸಿಕೊಳ್ಳಲು ಆಗಲ್ಲ ಅಂತ ಶಾಸಕರಿಗೆ ಬಿಜೆಪಿ ಶಾಸಕರಿಗೆ ಕೈ ಹಾಕಿದ್ದಾರೆ. ಚುನಾವಣೆ ಬಳಿಕ ಎಲ್ಲವೂ ಹೊರ ಬರಲಿದೆ ಎಂದು ಎಂಬಿ ಪಾಟೀಲ್ ವಿರುದ್ಧ ಶೋಭಾ ಅಸಮಾಧಾನ ಹೊರಹಾಕಿದ್ದಾರೆ.
ರಾಜ್ಯಸಭೆ ಚುನಾವಣೆ ಅಡ್ಡ ಮತದಾನಕ್ಕೆ ತಡೆಯೊಡ್ಡಿದ ಬಿಜೆಪಿ; 66 ಶಾಸಕರಿಗೆ ವಿಪ್ ಜಾರಿ
ಮಂಡ್ಯ ಟಿಕೆಟ್ ಜೆಡಿಎಸ್ ಅಥವಾ ಬಿಜೆಪಿಗೋ ಗೊತ್ತಿಲ್ಲ :
ಮಂಡ್ಯ ಲೋಕಸಭಾ ಟಿಕೆಟ್ ವಿಚಾರ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ಹೇಳಿದ ಅವರು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯಾಗಿದ್ದು ಮಂಡ್ಯ ಟಿಕೆಟ್ ಜೆಡಿಎಸ್ ಗೋ, ಬಿಜೆಪಿಗೋ ಗೊತ್ತಿಲ್ಲ ಆದ್ರೆ ನಮಗೆ ಬಂದರೆ ಯಾರು ಅಭ್ಯರ್ಥಿ ಆಗ್ತಾರೆ ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.ನನಗೆ ವಿಶ್ವಾಸವಿದೆ ಹೈಕಮಾಂಡ್ ಒಳ್ಳೆಯ ನಿರ್ಧಾರವನ್ನೇ ಮಾಡುತ್ತೆ ಅಲ್ಲದೆ ಜೆಡಿಎಸ್ ನಮ್ಮೊಂದಿಗೆ ಒಕ್ಕೂಟದ ಭಾಗವಾಗಿದೆ ಎಂದು ತಿಳಿಸಿದರು.