* ಒಂದು ಮೊಟ್ಟೆಯ ಕಥೆಗೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
* ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿವಾದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
* ಶಾಲೆಯಲ್ಲಿ ಮೊಟ್ಟೆ ಕೊಡುವುದಕ್ಕೆ ಶೋಭಾ ಕರಂದ್ಲಾಜೆ ವಿರೋಧ
ಚಿಕ್ಕಮಗಳೂರು, (ಡಿ.10): ಶಾಲೆಗಳಲ್ಲಿ ಬಿಸಿಯೂಟದ ಜತೆ ಒಂದು ಮೊಟ್ಟ ವಿತರಣೆಗೆ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ, ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ.
ಇನ್ನು ಇದಕ್ಕೆ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು, ಮಕ್ಕಳ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ ಯಾರೂ ನೋಡಿಕೊಳ್ಳುವುದಿಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು ಎಂದಿದ್ದಾರೆ.
Egg Distribution in Schools: ಮಕ್ಕಳಿಗೆ ಮೊಟ್ಟೆ ಕೊಟ್ಟರೆ ತಪ್ಪಲ್ಲ: ಬಿಜೆಪಿ ಶಾಸಕ ರಘುಪತಿ ಭಟ್
ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಇಂದು(ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಆಹಾರ ಪದ್ದತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ, ಯಾವುದೇ ವ್ಯಕ್ತಿಗಳು ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ. ಮೊಟ್ಟೆ ಕೊಡುವುದು ಕೆಲ ಸಮಾಜಕ್ಕೆ ನೋವು ತರುತ್ತೆ ಅಂದ್ರೆ ಸರ್ಕಾರ ವಿಚಾರವನ್ನು ಮರುಪರಿಶೀಲನೆ ಮಾಡಬೇಕು ಎಂದರು.
ಮಕ್ಕಳ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ ಯಾರೂ ನೋಡಿಕೊಳ್ಳಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆಯನ್ನು ತಿನ್ನಲು ಕೊಡುವ ವಿಚಾರವಾಗಿ ಹಲವು ಧಾರ್ಮಿಕ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಮಾಣದಲ್ಲಿ ಪರ-ವಿರೋಧಗಳ ಚರ್ಚೆಗಳು ನಡೆಯುತ್ತಿವೆ.
Egg Benefits : ಚಳಿಗಾಲದಲ್ಲಿ ಮೊಟ್ಟೆ ತಿನ್ನೊದ್ರಿಂದ ಆರೋಗ್ಯಕ್ಕೆ ಲಾಭ
ವಿಶ್ವಪ್ರಸನ್ನ ತೀರ್ಥರ ವಿರೋಧ
ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥರು (Vishwaprasanna Teertha) ಪ್ರತಿಕ್ರಿಯಿಸಿದ್ದು, ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಸಾಮೂಹಿಕವಾಗಿ ಮೊಟ್ಟೆ ನೀಡಿ ತಿಳಿವಿಲ್ಲದ ಮಕ್ಕಳಿಗೆ (Children) ತಮ್ಮ ಪರಂಪರೆಯಲ್ಲಿ ಬಂದ ಆಹಾರ ಕ್ರಮವನ್ನು ಬದಲಿಸುವಂತೆ ಮಾಡಬಾರದು ಎಂದದಿದ್ದಾರೆ.
ಶಾಲೆಗಳಲ್ಲಿ ಮೊಟ್ಟೆ ವಿತರಣೆ ಮಾಡುತ್ತಿರುವುದೇಕೆ?
ಶಿಕ್ಷಣ ಇಲಾಖೆ ಅಪೌಷ್ಟಿಕತೆ, ರಕ್ತಹೀನತೆ ಹೊಂದಿರುವ ಶಾಲಾ (School) ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿದ್ದು, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿತ್ತು. 7 ಜಿಲ್ಲೆಗಳ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಮಾಡಲಾಗುತ್ತಿದ್ದು ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಆದರೆ ಇದಕ್ಕೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ರಾಷ್ಟ್ರೀಯ ಲಿಂಗಾಯತ ಧರ್ಮ, ಮಹಾ ಸಭಾ ಬಸವ ಮಂಟಪದ ಜಗದ್ಗುರುಗಳು ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಕೋಳಿ ಮೊಟ್ಟೆ ಸಂಪೂರ್ಣವಾಗಿ ಮಾಂಸಾಹಾರವಾಗಿದೆ. ಮೊಟ್ಟೆ ಕೊಡುವುದರಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗುತ್ತದೆ. ಶಾಲೆಗಳಲ್ಲಿ ಮಕ್ಕಳಿಗೆ ಸರ್ವಸಮ್ಮತ ಆಹಾರವನ್ನು ನೀಡಬೇಕು. ಶಾಲೆಯಲ್ಲಿ ಮೊಟ್ಟೆ ಕೊಡುವುದರಿಂದ ಸಸ್ಯಹಾರಿ, ಮಾಂಸಹಾರಿ ಎಂಬ 2 ಗುಂಪು ರಚನೆಯಾಗತ್ತೆ. ಹೀಗಾಗಿ ಸರ್ಕಾರ ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.
ಯಾದಗಿರಿ (Yadgir) ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ(BellarY) ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ(Koppal) ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು(Raichur) ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್(Bidar) ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.
ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರ ಆದೇಶಿಸಿತ್ತು.