
ಚಿತ್ರದುರ್ಗ, (ಜೂನ್, 30): ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ವಾಹನದ ಮೇಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾವಚಿತ್ರ ತೆಗೆದುಹಾಕಿರುವು ವಿಚಾರಕ್ಕೆ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.
ಇಂದು (ಬುಧವಾರ) ಚಿತ್ರದುರ್ಗದಲ್ಲಿ ಮಾತನಾಡಿರುವ ಶ್ರೀರಾಮುಲು, ಸಿದ್ದರಾಮಯ್ಯ ಅಹಿಂದ ಸಮುದಾಯ ಪರ ಕಾಳಜಿಯಿರುವ ದೊಡ್ಡ ನಾಯಕ. ಅಹಿಂದ ನಾಯಕ ಸಿದ್ದರಾಮಯ್ಯಗೆ ಅವಮಾನ ಮಾಡುವ ಕೆಲಸ ನಡೆದಿದೆ ಎಂದು ಸಿದ್ದು ಪರ ಬ್ಯಾಟಿಂಗ್ ಮಾಡಿದರು.
ಕಾಂಗ್ರೆಸ್ ಪ್ರಚಾರ ವಾಹನದಿಂದ ಸಿದ್ದು ಫೋಟೋ ಮಾಯ!
ಬಿಜೆಪಿಯಲ್ಲಿ ಕಚ್ಚಾಟ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ರು. ಕಾಂಗ್ರೆಸ್ ಪಕ್ಷದಲ್ಲೇ ಕಚ್ಚಾಟ, ರಂಪಾಟ ನಡೆದಿದೆ. ಸಿಎಂ ಸ್ಥಾನದ ಪೈಪೋಟಿ ಕಾರಣ ಸಿದ್ದರಾಮಯ್ಯರ ಚಿತ್ರ ತೆರವು ಕೆಲಸ ಆಗಿದೆ. ತಾಕತ್ತಿದ್ದರೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಘೋಷಿಸಲಿ ಎಂದು ಸವಾಲು ಹಾಕಿದರು.
ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಹಿಂದುಳಿದ, ದಲಿತ ಸಮುದಾಯಕ್ಕೆ ಅವಕಾಶ ನೀಡಿದೆ. ದಲಿತ ಸಮುದಾಯದ ಗೋವಿಂದ ಕಾರಜೋಳಗೆ ಡಿಸಿಎಂ ಹುದ್ದೆ ನೀಡಲಾಗಿದೆ. ರಾಮುಲುಗೆ ಡಿಸಿಎಂ ಪಟ್ಟ ನೀಡಲು ಕಾಯುತ್ತಿರಬಹುದು. ಶ್ರೀರಾಮುಲುಗೆ ಡಿಸಿಎಂ ಮಾಡುವ ಸಮಯಕ್ಕಾಗಿ ಕಾಯುತ್ತಿರಬಹುದು. ರಾಜಕಾರಣದಲ್ಲಿ ಕಾಯುವುದೇ ಒಂದು ದೊಡ್ಡ ಪರೀಕ್ಷೆ ಇರುತ್ತದೆ. ನಮಗೆ ಕೊಟ್ಟ ಮಾತಿನಂತೆ ಪಕ್ಷ ನಡೆದುಕೊಳ್ಳಲಿದೆ. ಕಾಯಬೇಕು ಎಂದು ಡಿಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದರು.
ಇನ್ನು ರಮೇಶ್ ಜಾರಕಿಹೊಳಿ ಬಗ್ಗೆ ಪ್ರತಿಕ್ರಿಯಿಸಿದ ರಾಮುಲು, ಶಾಸಕ ರಮೇಶ ಜಾರಕಿಹೊಳಿ ಕಾನೂನಾತ್ಮಕ ಹೋರಾಟ ಮಾಡುತ್ತಿದ್ದಾರೆ. ಕೋರ್ಟ್ನಲ್ಲಿ ಕ್ಲೀನ್ ಚಿಟ್ ಪಡೆದು ಮರಳಿ ಬರುವ ವಿಶ್ವಾಸವಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.