
ಬೆಂಗಳೂರು, (ಅ.14): ಸಚಿವ ಶ್ರೀರಾಮುಲು ಅವರಿಗೆ ಆರೋಗ್ಯ ಖಾತೆ ಕಿತ್ತುಕೊಂಡು ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಶ್ರೀರಾಮುಲು ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ಮೂಲಕ ಬಗೆಹರಿಸಿದ್ದಾರೆ.
ಆದ್ರೆ, ಶ್ರೀರಾಮುಲು ಅಸಮಾಧಾನ ಶಮನವಾಗಿಲ್ಲ. ತಮಗೆ ಒಂದು ಮಾತು ತಿಳಿಸದೇ ಏಕಾಏಕಿ ಖಾತೆ ಬದಲಾವಣೆ ಮಾಡಿರುವುದಕ್ಕೆ ಶ್ರೀರಾಮುಲು, ಯಡಿಯೂರಪ್ಪನವರ ಮುಂದೆಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ಮಂಗಳವಾರ ಶ್ರೀರಾಮುಲು ಅವರೇ ಖುದ್ದು ಯಡಿಯೂರಪ್ಪನವರ ಮುಂದೆಯೇ ತಮ್ಮ ಅಸಮಾನಧವನ್ನು ಹೊರಹಾಕಿದ್ದು, ಭರವಸೆ ನೀಡಿದಂತೆ ಡಿಸಿಎಂ ಹುದ್ದೆ ನೀಡಿ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಖಾತೆ ಬದಲಾವಣೆ: ಸಿಎಂ ಭೇಟಿ ಬಳಿಕ ತಮ್ಮ ಆಪ್ತರ ಬಳಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀರಾಮುಲು..!
ತಮ್ಮ ಖಾತೆ ಬದಲಾಗುತ್ತದೆ ಎಂದು ಶ್ರೀರಾಮುಲು ಯಾವತ್ತೂ ಎಣಿಸಿರಲಿಲ್ಲ, ಸಂಪುಟ ಪುನಾರಚನೆ ವೇಳೆ ಕೂಡ ತಾವು ಸೇಫ್ ಎಂದೇ ಭಾವಿಸಿದ್ದರು. ಖಾತೆ ಬದಲಾವಣೆ ನಂತರ ತೀವ್ರ ಅಸಮಾಧಾನಗೊಂಡಿರುವ ಶ್ರೀರಾಮುಲು 2018 ರ ವಿಧಾನಸಭೆ ಚುನಾವಣೆ ವೇಳೆ ತಮ್ಮನ್ನು ಡಿಸಿಎಂ ಅಭ್ಯರ್ಥಿ ಎಂದೇ ಬಿಂಬಿಸಲಾಗಿತ್ತು. ಹೀಗಾಗಿ ತಮಗೆ ಡಿಸಿಎಂ ಹುದ್ದೆ ನೀಡಬೇಕು ಎಂದಿದ್ದಾರೆ.
2008 ರಲ್ಲಿ ನಾನು ಆರೋಗ್ಯ ಇಲಾಖೆ ನಿರ್ವಹಿಸಿದ್ದೆ. ನಾನು ಮೊದಲಿನಿಂದಲೂ ಸಮಾಜ ಕಲ್ಯಾಣ ಇಲಾಖೆ ಬಯಸಿದ್ದೆ, ಹಿಂದುಳಿದ ವರ್ಗಗಳ ಸಮುದಾಯಗಳ ಒಳಿತಿಗಾಗಿ ನಾನು ಕೆಲಸ ಮಾಡಲು ಬಯಸಿದ್ದೇನೆ.
ಡಿಸಿಎಂ ಮಾಡಬೇಕು ಎಂಬುದು ನನ್ನ ಹಳೇಯ ಬೇಡಿಕೆಯಾಗಿದೆ. ಸಮಾಜ ಕಲ್ಯಾಣ ಖಾತೆ ಜೊತೆಗೆ ಡಿಸಿಎಂ ಹುದ್ದೆ ನಿಭಾಯಿಸುವ ಸಾಮರ್ಥ್ಯ ನನಗಿದೆ ಎಂದು ಶ್ರೀರಾಮುಲು, ಸಿಎಂ ಮುಂದೆ ಪ್ರಸ್ತಾಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.