'ಪರಂ ಸೋಲಿಸಿ, ಸಿಎಂ ಪಟ್ಟತಪ್ಪಿಸಿದ್ದೇ ಸಿದ್ದು’

Published : Nov 30, 2019, 09:38 AM IST
'ಪರಂ ಸೋಲಿಸಿ, ಸಿಎಂ ಪಟ್ಟತಪ್ಪಿಸಿದ್ದೇ ಸಿದ್ದು’

ಸಾರಾಂಶ

ಕಾಂಗ್ರೆಸ್‌ನಲ್ಲಿ ಮೂಲ ಮತ್ತು ವಲಸೆ ಕಾಂಗ್ರೆಸ್ಸಿಗರನ್ನು ಸಂಪೂರ್ಣವಾಗಿ ತುಳಿದವರು ಸಿದ್ದರಾಮಯ್ಯ. ಕಾಂಗ್ರೆಸ್‌ ಪಕ್ಷ ಕಟ್ಟಿಬೆಳೆಸಿದ ಹಿಂದುಳಿದ ಸಮುದಾಯದ ನಾಯಕ ಡಾ.ಜಿ.ಪರಮೇಶ್ವರ ಅವರನ್ನು ತುಳಿದಿದ್ದಾರೆ ಎಂದು ಶ್ರೀ ರಾಮುಲು ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ನ.30):  ಹಿಂದುಳಿದ ಸಮುದಾಯದ ಸ್ವಯಂ ಘೋಷಿತ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ಸಮುದಾಯದ ಮುಖಂಡರ ‘ಕತ್ತು ಸೀಳುವ’ ಕೆಲಸ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹರಿಹಾಯ್ದಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಎಸ್‌.ಟಿ.ಸೋಮಶೇಖರ್‌ ಅವರ ಪರ ಮತಯಾಚಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ಮೂಲ ಮತ್ತು ವಲಸೆ ಕಾಂಗ್ರೆಸ್ಸಿಗರನ್ನು ಸಂಪೂರ್ಣವಾಗಿ ತುಳಿದವರು ಸಿದ್ದರಾಮಯ್ಯ. ಕಾಂಗ್ರೆಸ್‌ ಪಕ್ಷ ಕಟ್ಟಿಬೆಳೆಸಿದ ಹಿಂದುಳಿದ ಸಮುದಾಯದ ನಾಯಕ ಡಾ.ಜಿ.ಪರಮೇಶ್ವರ ಅವರನ್ನು ತುಳಿದರಲ್ಲದೆ, ಚುನಾವಣೆಯಲ್ಲಿ ಪರಮೇಶ್ವರ್‌ ಅವರು ಸೋಲುವಂತೆ ನೋಡಿಕೊಂಡರು. ಪರಮೇಶ್ವರ್‌ ಅವರು ಮುಖ್ಯಮಂತ್ರಿ ಆಗುವ ಅವಕಾಶವನ್ನು ಸಿದ್ದರಾಮಯ್ಯ ತಪ್ಪಿಸಿದರು ಎಂದು ದೂರಿದರು.

ಮಾಜಿ ಸಚಿವರಾದ ಎಂ.ಬಿ. ಪಾಟೀಲ್‌, ವಿನಯ್‌ ಕುಲಕರ್ಣಿ ಸೇರಿದಂತೆ ಹಲವು ನಾಯಕರನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡರು. ಸಿದ್ದರಾಮಯ್ಯ ಅವರಿಂದ ಯಾರಿಗೂ ಉಪಯೋಗ ಆಗಿಲ್ಲ. ಮುಂದಿನ ದಿನಗಳಲ್ಲಿ ಅವರದ್ದೇ ಪಕ್ಷದ ನಾಯಕರು ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಿದ್ದಾರೆ ಎಂದು ಛೇಡಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಚಿವ ವಿ.ಸೋಮಣ್ಣ ಅವರನ್ನು ‘ಬಚ್ಚಾ’ ಎಂದು ಕರೆದಿದ್ದಾರೆ. ನಾವು ಶಾಸಕರಾಗಿ ವಿಧಾನಸಭೆಯಲ್ಲಿ ಮುಂದಿನ ಆಸನದಲ್ಲಿ ಕುಳಿತುಕೊಳ್ಳುವಾಗ ಕುಮಾರಸ್ವಾಮಿ ಅವರು ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳುತ್ತಿದ್ದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಮುಂದೆ ಕುಳಿತುಕೊಂಡಾಗ ನಾವು ಅವರನ್ನು ‘ಬಚ್ಚಾ’ ಎಂದು ಕರೆಯಲಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

15 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ವರದಿ ನೀಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಚಾರದ ವೇಳೆ ಮಾಜಿ ಶಾಸಕ ಎಸ್‌.ಮುನಿರಾಜು ಇನ್ನಿತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಕೆಂಡಾಮಂಡಲ!