ಸಿಬಿಐ, ಇಡಿ ಸಂಸ್ಥೆಗಳನ್ನು ಬಿಜೆಪಿಯವರು ಸ್ವಂತ ಆಸ್ತಿಯಾಗಿ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಕಾನೂನಾತ್ಮಕವಾಗಿ ವಾಪಸ್ ಪಡೆದಿದ್ದರೂ, ಮತ್ತೊಮ್ಮೆ ಎದುರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ
ಮೈಸೂರು(ಜ.03): ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಇದು ನೂರಕ್ಕೆ ನೂರು ಸತ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ತಿಳಿಸಿದರು.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ, ಇಡಿ ಸಂಸ್ಥೆಗಳನ್ನು ಬಿಜೆಪಿಯವರು ಸ್ವಂತ ಆಸ್ತಿಯಾಗಿ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಕಾನೂನಾತ್ಮಕವಾಗಿ ವಾಪಸ್ ಪಡೆದಿದ್ದರೂ, ಮತ್ತೊಮ್ಮೆ ಎದುರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
'ನನ್ನ ಅರೆಸ್ಟ್ ಹಿಂದೆ ವ್ಯವಸ್ಥಿತ ಪಿತೂರಿ ಇದೆ, ಟೈಮ್ ಬಂದಾಗ ಎಲ್ಲವನ್ನೂ ಹೇಳ್ತೇನೆ': ವಿಕ್ರಮ್ ಸಿಂಹ
ಇದರ ಮೂಲಕ ಬಿಜೆಪಿ ವಿರುದ್ಧ ಟೀಕೆ ಮಾಡುವವರ ಬಗ್ಗೆ, ಪ್ರಭಾವಿಗಳ ಬಗ್ಗೆ ದ್ವೇಷದ ರಾಜಕೀಯ ಮಾಡಲಾಗುತ್ತಿದೆ. ಅಂತಹವರನ್ನು ಟಾರ್ಗೆಟ್ ಮಾಡಿ ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿಯವರ ಮೇಲೆ ಯಾಕೆ ಇಡಿ, ಸಿಬಿಐ ಕೇಸ್ ಗಳನ್ನು ಹಾಕುತ್ತಿಲ್ಲ? ಭ್ರಷ್ಟಾಚಾರ, ಸುಳ್ಳು ಹೇಳೋದೆ ಬಿಜೆಪಿ ಅಜೆಂಡಾ ಎಂದು ಅವರು ಆರೋಪಿಸಿದರು.
ಜನರ ಧಾರ್ಮಿಕ ಭಾವನೆಗಳ ಜೊತೆ ಆಟ ಆಡ್ತಾರೆ. ಭಾವನಾತ್ಮಕ ವಿಚಾರಗಳನ್ನು ಜನರ ಮೇಲೆ ಹೇರಿ, ಜನರನ್ನು ದಿಕ್ಕು ತಪ್ಪಿಸುವುದೇ ಬಿಜೆಪಿ ಅಜೆಂಡಾ. ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರಿಗೆ ಚಿಂತನೆ ಇಲ್ಲ ಎಂದರು.
ಯಾರ ಪೋಷಣೆ, ರಕ್ಷಣೆ ಮಾತೇ ಇಲ್ಲ
ಕಲ್ಲಡ್ಕ ಪ್ರಭಾಕರ್ ಬಂಧಿಸಲು ಸರ್ಕಾರ ವಿಫಲವಾಯ್ತಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಲ್ಲಡ್ಕ ಪ್ರಭಾಕರ್ ಮೇಲಿಂದ ಇಳಿದು ಬಂದಿಲ್ಲ, ಅವರ ಮೇಲೂ ಕ್ರಮ ತೆಗೆದುಕೊಳ್ಳುವ ಕೆಲಸ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾರನ್ನೂ ಪೋಷಣೆ, ರಕ್ಷಣೆ ಮಾಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.