
ಮೈಸೂರು, (ನ.04): ಸಂಪುಟ ವಿಸ್ತರಣೆ ಕುರಿತು ಮಾತನಾಡಿದರೆ, ನನ್ನ ಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರೆ ನನ್ನ ಮಂತ್ರಿ ಸ್ಥಾನವು ಹೋಗುತ್ತೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವುದಕ್ಕೆ ನನಗೆ ಅಧಿಕಾರ ಇಲ್ಲ, ಮಾಧ್ಯಮದವರು ನನಗೆ ಅಧಿಕಾರ ಕೊಡಿಸಿದರೆ ನಾನು ಮಾತನಾಡಬಹುದು. ನನಗೆ ಎಷ್ಟು ಅಧಿಕಾರ ಇದೆ ಅಷ್ಟಕ್ಕೆ ಮಾತ್ರ ಉತ್ತರಿಸುತ್ತೇನೆ ಹೇಳಿದರು.
ಮತ್ತೆ ಶುರುವಾಯ್ತು ಸಂಪುಟ ಕಸರತ್ತು, ಬೈ ಎಲೆಕ್ಷನ್ ನಂತ್ರ ಮಂತ್ರಿಯಾಗ್ತಿನಿ ಎಂದ MLC
ಪದೇ ಪದೇ ಮಂತ್ರಿಮಂಡಲದ ಪ್ರಶ್ನೆ ಕೇಳಿಬೇಡಿ. ಅದಕ್ಕೆ ನಾನು ಉತ್ತರ ಕೊಟ್ಟರೆ ಇರುವ ಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದರು.
ಇನ್ನು ಬೈ ಎಲೆಕ್ಷನ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರು ಗೆಲ್ಲುತ್ತಾರೆ. ಅಲ್ಲಿ ಶೇಕಡವಾರು ಕಡಿಮೆ ಆಗಿದೆ ಎಂದರೆ, ಮುಂಚೆ ಒಂದು ಜಮಾನ್ ಇತ್ತು. ಕಡಿಮೆ ಇದ್ದರೆ ಇನ್ನೊಂದು ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ.. ಆದರೆ ಕೊರೋನಾ ನಡುವೆಯೂ ಆರ್.ಆರ್ ನಗರದಲ್ಲಿ ಉತ್ತಮ ಮತ ಚಲಾವಣೆ ಆಗಿದೆ. ವಿದ್ಯಾವಂತರು ಬಂದು ಮತ ಹಾಕಿದ್ದಾರೆ. ಹಾಗಾಗಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಶಿರಾ ಉಪ ಚುನಾವಣೆಯ ಮತದಾನ ವಿಚಾರವಾಗಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಸೋಲು ಒಪ್ಪಿಕೊಂಡಿದ್ದಾರೆ. ಇವಿಎಂ ಮೇಲೆ ಅವರು ಆರೋಪ ಮಾಡಿದ್ದಾರೆ. ಅವರ ಸೋಲು ಮತ್ತು ಹತಾಶೆಯ ಸಂಕೇತವೆಂದರು. ಫಲಿತಾಂಶ ಬಂದ ಮೇಲೆ ಕಾರಣ ಕೊಡುವುದಕ್ಕಿಂತ, ಜಯಚಂದ್ರ ಅವರು ಮುಂಚೆಯೇ ಕಾರಣ ಹುಡುಕಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.