ಸಚಿವ ಸೋಮಶೇಖರ್ ಕಾರ್ಯವೈಖರಿಗೆ ರಾಜಮಾತೆ ಪ್ರಮೋದಾ ದೇವಿ ಪ್ರಶಂಸೆ

By Suvarna NewsFirst Published Mar 3, 2021, 10:04 PM IST
Highlights

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್ ಅವರ ಕಾರ್ಯವೈಖರಿಗೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಮಾ.03): ಮೈಸೂರು ವಿಮಾನ ನಿಲ್ದಾಣಕ್ಕೆ ಶ್ರೀ ಜಯಚಾಮರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಸಚಿವ ಎಸ್‌.ಟಿ.ಸೋಮಶೇಖರ್ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇದಕ್ಕೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಶ್ರೀ ಜಯಚಾಮರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಶ್ರೀಯುತರ ಭಾವಚಿತ್ರವನ್ನು ಅಳವಡಿಸಿ ಗೌರವ ಸೂಚಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾಗೂ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಹಕಾರ ಹಾಗೂ ಮೈಸೂರು
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

ಸಾಂಸ್ಕೃತಿಕ, ಪಾರಂಪರಿಕ ನಗರಿ ಮೈಸೂರಿಗೆ ನಮ್ಮ ರಾಜಮನೆತನದ ಕೊಡುಗೆ ಅಪಾರ. ನಮ್ಮಆಗಿನ ಮೈಸೂರು ರಾಜ್ಯವನ್ನು ಒಂದು ಮಾದರಿಯನ್ನಾಗಿ ರೂಪಿಸುವಲ್ಲಿ ಆಳಿದಂತಹ ಅನೇಕ ರಾಜ ಮಹಾರಾಜರ ಕೊಡುಗೆಗಳಿವೆ. ಈ ಸಾಲಿನಲ್ಲಿ ನಮ್ಮ ಶ್ರೀ ಜಯಚಾಮರಾಜ ಒಡೆಯರ್ ಅವರ ಕಾಣಿಕೆ ಸಹ ಇದೆ. ಈ ಹಿನ್ನೆಲೆಯಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಶ್ರೀ ಜಯಚಾಮರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಬೇಕು ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಶ್ರೀಯುತರ ಭಾವಚಿತ್ರವನ್ನು ಅಳವಡಿಸಿ ಗೌರವ ಸೂಚಿಸುವಂತೆ ರಾಜಮಾತೆ ಶ್ರೀಮತಿ ಪ್ರಮೋದಾ ದೇವಿ ಒಡೆಯರ್ ಅವರು ಪತ್ರದ ಮೂಲಕ ಕೋರಿರುತ್ತಾರೆ.

ಪ್ರತ್ಯೇಕ ಪತ್ರ ಬರೆದ ಸಚಿವರು
ಇಂದು ಕರ್ನಾಟಕ ದೇಶ-ವಿದೇಶದಲ್ಲಿ ಹೆಸರುಗಳಿಸಲು ಮೈಸೂರು ಹಾಗೂ ಮಹಾರಾಜರ ಕೊಡುಗೆ ಅಪಾರವಾಗಿದೆ. ಜೊತೆಗೆ ಸ್ವತಃ ರಾಜಮಾತೆಯವರೇ ಪತ್ರ ಬರೆದು ಕೋರಿದ್ದು, ಅವರಿಗೆ ಗೌರವ ಸೂಚಿಸುವುದು ನಮ್ಮ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಶ್ರೀ ಜಯಚಾಮರಾಜ ಒಡೆಯರ್ ಭಾವಚಿತ್ರವನ್ನು ಅಳವಡಿಸುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಎಸ್.ಟಿ.ಸೋಮಶೇಖರ್ ಅವರು ಪತ್ರ ಬರೆದು ಕೋರಿದ್ದಾರೆ.

ಅಲ್ಲದೆ, ಮೈಸೂರು ವಿಮಾನ ನಿಲ್ದಾಣಕ್ಕೆ ಶ್ರೀ ಜಯಚಾಮರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಲು ಸೂಕ್ತ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಮೋದಾ ದೇವಿ ಒಡೆಯರ್ ಪ್ರಶಂಸೆ
ಈ ಹಿಂದೆ 10ನೇ ಚಾಮರಾಜ ಒಡೆಯರ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ವಿಧಾನಸಭೆಯಲ್ಲಿ ಅಳವಡಿಸುವಂತೆ ಈ ಹಿಂದೆ  ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಕೋರಿರುವುದು ಪ್ರಶಂಸನೀಯ ಕ್ರಮವಾಗಿದೆ. ಇಂತಹ ಕಾರ್ಯಕ್ಕೆ ಅವರು ಮುಂದಾಳತ್ವ ವಹಿಸಿರುವುದು ಸಹ ಹೆಮ್ಮೆಯ ವಿಷಯವಾಗಿದೆ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರು ಪತ್ರದಲ್ಲಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

click me!