ಸಚಿವ ಸುಧಾಕರ್‌ಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ ನಡ್ಡಾ..!

Published : Nov 15, 2020, 08:48 PM IST
ಸಚಿವ ಸುಧಾಕರ್‌ಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ ನಡ್ಡಾ..!

ಸಾರಾಂಶ

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದು ಸಚಿವರಾಗಿರುವ ಡಾ. ಕೆ. ಸುಧಾಖರ್ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದೆ.

ಬೆಂಗಳೂರು, (ನ.15): ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಸಹ-ಉಸ್ತುವಾರಿಯಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರನ್ನ ನೇಮಕ ಮಾಡಲಾಗಿದೆ.

ಸಚಿವ ಸುಧಾಕರ್ ಅವರೊಂದಿಗೆ ಬೆಂಗಳೂರಿನ ಬೊಮ್ಮನಹಳ್ಳಿ ಬಿಜೆಕ ಶಾಸಕ ಸತೀಶ್ ರೆಡ್ಡಿ ಅವರನ್ನ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೇ  ಮಹಾರಾಷ್ಟ್ರ ಶಾಸಕ ಅಶೀಶ್, ಗುಜರಾತಿನ ಬಿಜೆಪಿ ಮುಖಂಡ ಪ್ರದೀಪ್ ಸಿಂಗ್ ವಾಘೇಲಾ ಅವರನ್ನ ಸಹ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇಂದು (ಭಾನುವಾರ) ಆದೇಶ ಹೊರಡಿಸಿದ್ದಾರೆ.

ಶ್ರೀರಾಮುಲು ಖಾತೆ ಬದಲಾವಣೆ: ಡಾ.ಸುಧಾಕರ್​ ಹೆಗಲಿಗೆ ಮತ್ತೊಂದು ಜವಾಬ್ದಾರಿ..!

ಈ ಸಂಬಂಧ ಟ್ವೀಟ್ ಮಾಡಿರುವ ಸುಧಾಕರ್, ಹೈದರಾಬಾದ್ ನ ಮಹಾನಗರ ಪಾಲಿಕೆ (GHMC) ಚುನಾವಣೆಗೆ ನನ್ನನ್ನು ಸಹ-ಉಸ್ತುವಾರಿಯಾಗಿ ನೇಮಿಸಿರುವ ಬಿಜೆಪಿ ನಾಯಕರಿಗೆ ಧನ್ಯವಾದಗಳು. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ನಿರ್ವಹಿಸಲು ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆ.ಎಸ್. ಈಶ್ವರಪ್ಪ ಬಿಜೆಪಿ ವಾಪಸಾತಿ, ನನ್ನ ಮನಸ್ಸಲ್ಲೂ ಇದೆ ಬಸನಗೌಡ ಯತ್ನಾಳ್ ಮನಸ್ಸಲ್ಲೂ ಇದೆ ಅಂದ್ರು!
ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ