ಸಿದ್ದರಾಮಯ್ಯನವರ ಸಹಕಾರ, ಮಾರ್ಗದರ್ಶನ ಸದಾ ಸ್ಮರಿಸುತ್ತೇನೆ ಎನ್ನುತ್ತಲೇ ಟಾಂಗ್ ಕೊಟ್ಟ ಸುಧಾಕರ್

By Suvarna NewsFirst Published Jul 24, 2020, 5:54 PM IST
Highlights

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ  ಡಾ. ಕೆ. ಸುಧಾಕರ್ ನಡುವೆ ಜಟಾಪಟಿ ಶುರುವಾಗಿದೆ.

ಬೆಂಗಳೂರು(ಜು.24): ಉಪಕಾರ ಸ್ಮರಣೆ ಇರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಡಾ. ಕೆ. ಸುಧಾಕರ್ ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ಮಾನ್ಯ ಸಿದ್ದರಾಮಯ್ಯನವರು ನಾನು ಅಧಿಕಾರದ ಅಹಂನಿಂದ ಮಾತನಾಡಿದ್ದೇನೆ, ನನಗೆ ಉಪಕಾರ ಸ್ಮರಣೆ ಇರಬೇಕು ಎಂದಿದ್ದಾರೆ. ಅವರು ಈ ಹಿಂದೆ ನೀಡಿರುವ ಸಹಕಾರ ಮತ್ತು ಮಾರ್ಗದರ್ಶನವನ್ನು ಸದಾ ಸ್ಮರಿಸುತ್ತೇನೆ. ನನ್ನ ಅಳಿಲು ಸೇವೆಯನ್ನು ಅವರೂ ಸಹ ಮರೆತಿಲ್ಲ ಅಂತಾ ಭಾವಿಸಿದ್ದೇನೆ ಎಂದು ತಿರುಗೇಟು ನೀಡಿದ್ಧಾರೆ.

ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

ಮಾನ್ಯ ಸಿದ್ದರಾಮಯ್ಯನವರು ನಾನು ಅಧಿಕಾರದ ಅಹಂನಿಂದ ಮಾತನಾಡಿದ್ದೇನೆ ಮತ್ತು ನನಗೆ ಉಪಕಾರ ಸ್ಮರಣೆ ಇರಬೇಕು ಎಂದಿದ್ದಾರೆ. ಅವರು ಹಿಂದೆ ನೀಡಿರುವ ಸಹಕಾರ ಮತ್ತು ಮಾರ್ಗದರ್ಶನವನ್ನು ಸದಾ ಸ್ಮರಿಸುತ್ತೇನೆ ಮತ್ತು ನನ್ನ ಅಳಿಲು ಸೇವೆಯನ್ನು ಅವರೂ ಸಹ ಮರೆತಿಲ್ಲ ಎಂದು ಭಾವಿಸಿದ್ದೇನೆ. (1/2)

— Dr Sudhakar K (@mla_sudhakar)

ಳೆದ 5 ತಿಂಗಳಿನಿಂದ ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತು ಕಾರ್ಯ ಕ್ಷಮತೆಯಿಂದ ಅವಿರತವಾಗಿ ಶ್ರಮಿಸುತ್ತಿರುವ ಸನ್ನಿವೇಶದಲ್ಲಿ ನನ್ನ ಇಲಾಖೆಯ ವಿರುದ್ಧ ಸತ್ಯಕ್ಕೆ ದೂರವಾದ ಅರೋಪಗಳು ಬಂದಾಗ ಜವಾಬ್ದಾರಿಯುತವಾಗಿ ವಾಸ್ತವಾಂಶವನ್ನು ಜನರ ಮುಂದಿಟ್ಟದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ನಿಂದನೆ ಅಥವಾ ಅಪಹಾಸ್ಯದ ಉದ್ದೇಶವಿಲ್ಲ ಎಂದಿದ್ದಾರೆ.
 

ಕಳೆದ 5 ತಿಂಗಳಿನಿಂದ ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತು ಕಾರ್ಯ ಕ್ಷಮತೆಯಿಂದ ಅವಿರತವಾಗಿ ಶ್ರಮಿಸುತ್ತಿರುವ ಸನ್ನಿವೇಶದಲ್ಲಿ ನನ್ನ ಇಲಾಖೆಯ ವಿರುದ್ಧ ಸತ್ಯಕ್ಕೆ ದೂರವಾದ ಅರೋಪಗಳು ಬಂದಾಗ ಜವಾಬ್ದಾರಿಯುತವಾಗಿ ವಾಸ್ತವಾಂಶವನ್ನು ಜನರ ಮುಂದಿಟ್ಟದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ನಿಂದನೆ ಅಥವಾ ಅಪಹಾಸ್ಯದ ಉದ್ದೇಶವಿಲ್ಲ. (2/2)

— Dr Sudhakar K (@mla_sudhakar)
click me!