
ಬೆಳಗಾವಿ, (ನ.21): ಸಂಪುಟ ಕಸರತ್ತು ಜೋರಾದ ಹಿನ್ನೆಲೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನ ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚೆರ್ಚೆಗೆ ಗ್ರಾಸವಾಗಿದೆ.
"
ಅದು ಸಂಪುಟ ವಿಸ್ತರಣೆ ಸಂದರ್ಭದಲ್ಲಿ ದಿಲ್ಲಿಯಲ್ಲಿ ಮೊಕ್ಕಾಂ ಹೂಡಿದ್ದು, ಭಾರೀ ಕುತೂಹಲ ಮೂಡಿಸಿದ್ದು, ಹಲವು ಗುಸು-ಗುಸು ಸುದ್ದಿಗಳು ಹರಿದಾಡುತ್ತಿವೆ.
ಸಿಎಂಗಿಂತ ಮೊದಲೇ ಹೋಗಿ ಕುಂತ ಸಾಹುಕಾರ: ದಿಲ್ಲಿಯಲ್ಲಿ ಜಾರಕಿಹೊಳಿ ನಡೆ ಕುತೂಹಲ
ಇನ್ನು ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದು, ಬಿ ಎಲ್ ಸಂತೋಷ್ ನಮ್ಮ ಪಕ್ಷದ ದೊಡ್ಡ ನಾಯಕರು. ಅವರನ್ನು ಸಚಿವ ರಮೇಶ ಜಾರಕಿಹೊಳಿ ಭೇಟಿ ಮಾಡುವುದು ಅಪರಾಧವಲ್ಲ ಎಂದು ಎಂದದರು.
ಸಚಿವ ರಮೇಶ ಜಾರಕಿಹೊಳಿ ದೆಹಲಿ ಭೇಟಿ ಸಾಮಾನ್ಯ. ನೀರಾವರಿ ಇಲಾಖೆ ಸಂಬಂಧ ಭೇಟಿ ಮಾಡಿದ್ದಾರೆ. ಇಲಾಖೆಗೆ ಸಂಬಂಧಿಸಿದಂತೆ ಕೋರ್ಟ್ ಕೆಲಸ ಇರುತ್ತೆ ಹೀಗಾಗಿ ಭೇಟಿ ಆಗಿರಬಹುದು. ಅದಕ್ಕೆ ಬೇರೆ ಅರ್ಥವನ್ನು ಕಲ್ಪಿಸಬಾರದು. ನಮ್ಮ ಪಕ್ಷದ ಸಂಘಟನಾ ಕಾರ್ಯದರ್ಶಿಯವರನ್ನು ಭೇಟಿ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದರು.
ಎಂ.ಟಿ.ಬಿ ನಾಗರಾಜ್, ಆರ್. ಶಂಕರ, ಮುನಿರತ್ನ, ವಿಶ್ವನಾಥ್ ಗೆ ಸಚಿವ ಸ್ಥಾನ ಸಿಗುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಮಂತ್ರಿಗಳು ಆಗುವ ವಿಶ್ವಾಸವಿದೆ. ಸಿಎಂ ಈ ಬಗ್ಗೆ ಹಲವು ಸಲ ಸ್ಪಷ್ಟವಾಗಿ ಹೇಳಿದ್ದಾರೆ.ಸಿ ಎಂ ಯಡಿಯೂರಪ್ಪ ಮೇಲೆ ವಿಶ್ವಾಸವಿದೆ. ಉಪಚುನಾವಣೆ ಸೋತವರು ಎಂಎಲ್ ಸಿ ಆಗಿದ್ದಾರೆ. ಮುಂದೆ ಮಂತ್ರಿಗಳು ಆಗುವ ವಿಶ್ವಾಸವಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.