
ಬೆಂಗಳೂರು, (ಸೆ.13): ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಎತ್ತಿನ ಬಂಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿದ್ದು, ಇದನ್ನು ಸಚಿವ ಡಾ. ಸುಧಾಕರ್ ವ್ಯಂಗ್ಯವಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್, ಎತ್ತಿನ ಬಂಡಿ ಏರಿ ಹಸುಗಳಿಗೆ ತೊಂದರೆ ಕೊಡೋ ಬದಲು ಸೈಕಲ್ ಏರಿ ಪ್ರತಿಭಟನೆ ಮಾಡಿದ್ದರೆ ಚೆನ್ನಾಗಿರ್ತಿತ್ತು ಎಂದು ಟಾಂಗ್ ಕೊಟ್ಟರು.
ಬೆಲೆ ಏರಿಕೆ ಖಂಡಿಸಿ ಸದನಕ್ಕೆ ಎತ್ತಿನಗಾಡಿ ಮೂಲಕ ಬರಲಿದ್ದಾರೆ ಡಿಕೆಶಿ, ಸಿದ್ದರಾಮಯ್ಯ
ಇವರ ಪ್ರತಿಭಟನೆಯಿಂದ ವಿಧಾನಸೌಧಕ್ಕೆ ಬರೋದಕ್ಕೆ ಮುಕ್ಕಾಲು ಗಂಟೆ ತಡ ಆಯ್ತು. ಯಾರು ಬೆಲೆ ಏರಿಕೆ ಮಾಡಿದ್ದಾರೆ , ಯಾರು ಸಾಲದ ಬಾಂಡ್ ಮಾಡಿದ್ದಾರೆ ಯಾರ ಅವಧಿಯಲ್ಲಿ ಎಷ್ಟು ಬೆಲೆ ಏರಿಕೆ ಆಗಿದೆ ಎಂದು ಎಂದು ಸದನದಲ್ಲಿ ಸುದೀರ್ಘವಾಗಿ ಚರ್ಚೆ ಮಾಡಬಹುದು. ಅದನ್ನ ಬಿಟ್ಟು ಸುಮ್ಮನೆ ಹೀಗೆ ಜನಸಾಮಾನ್ಯರಿಗೆ ತೊಂದರೆ ಕೊಡೋದು ಸರಿಯಲ್ಲ ಎಂದರು.
ಇಂದಿನಿಂದ 10 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯಲ್ಲಿ ತೆರಳುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿ ಮೂಲಕ ಆಗಮಿಸಿ ಗಮನಸೆಳೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.