ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಸೂತ್ರ ಹರಿದ ಗಾಳಿಪಟದಂತೆ, ಒಂದು ವ್ಯರ್ಥ ಹಾರಾಟ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವ್ಯಂಗ್ಯ ಮಾಡಿದ್ದಾರೆ.
ಬೆಂಗಳೂರು (ಅ.5) : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಸೂತ್ರ ಹರಿದ ಗಾಳಿಪಟದಂತೆ, ಒಂದು ವ್ಯರ್ಥ ಹಾರಾಟ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವ್ಯಂಗ್ಯ ಮಾಡಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೊ ಪಾದಯಾತ್ರೆ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಕಾಂಗ್ರೆಸ್‌ನ ಈ ಪಾದಯಾತ್ರೆ ಗೊತ್ತು- ಗುರಿ ಎರಡೂ ಇಲ್ಲದ ನಡಿಗೆ. ಹೋದಲೆಲ್ಲ ರಾಷ್ಟ್ರೀಯ ಸ್ವಯಂ ಸೇವಕ ಸಂಘ ವನ್ನು ನಿಂದಿಸುವ ಏಕಮಾತ್ರ ಉದ್ದೇಶ ಹೊಂದಿರುವುದು ವಿಪರ್ಯಾಸ ಎಂದಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ
ಕಾಂಗ್ರೆಸ್ ಈ ದೇಶವನ್ನು ಅರ್ಧ ಶತಮಾನಗಳ ಕಾಲ ಆಳಿದೆ:
ದೇಶವನ್ನು ಒಗ್ಗೂಡಿಸುತ್ತೇವೆಂದು ಆರಂಭಿಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಹಾಸ್ಯಾಸ್ಪದ. ಈ ದೇಶವನ್ನು ಕಾಂಗ್ರೆಸ್ ಅರ್ಧಶತಮಾನಗಳ ಕಾಲ ಆಳಿದೆ. ಈ ಅವಧಿಯಲ್ಲಿ ರಾಹುಲ್ ಗಾಂಧಿಯವರ ಪೂರ್ವಜನರು ಎಲ್ಲೆಲ್ಲಿ ದೇಶವನ್ನು ಒಡೆದರೂ ಅವೆಲ್ಲವನ್ನೂ ಜತನದಿಂದ ಒಗ್ಗೂಡಿಸುವ ಕಾರ್ಯ ಮಾಡ್ತಿರೋದು ಆರೆಎಸ್ಸೆಸ್ ಹೊರತು ಕಾಂಗ್ರೆಸ್ ಅಲ್ಲ. ಈಗ ರಾಹುಲ್ ಗಾಂಧಿ ಮತ್ತೆ ಕೂಡಿಸಿದ್ದನ್ನು ಕಳೆಯಲು ಹೊರಟಿದ್ದಾರೆ ಎಂಬುದೇ ಕಾಂಗ್ರೆಸ್‌ನ ಈ ಯಾತ್ರೆಗೆ ಹೆಚ್ಚು ಸಮರ್ಪಕ ವ್ಯಾಖ್ಯಾನವಾದೀತು ಎಂದಿದ್ದಾರೆ.
ರಾಹುಲ್ ಗಾಂಧಿಯವರ ಪಾದಯಾತ್ರೆಯ ಸದುದ್ದೇಶವನ್ನು ಅರ್ಥ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇದೊಂದು ಶುದ್ಧ ರಾಜಕೀಯ ಅಜೆಂಡಾದ ವಿಭಜಕ ಮನಸುಗಳ ವಿಜೃಂಭಣೆಯ ನಡಿಗೆ. ಹೀಗಾಗಿ ಇದು ಭಾರತ್ ಜೋಡೋ ಯಾತ್ರೆ ಅಲ್ಲ, ಭಾರತ್ ತೋಡೋ ಯಾತ್ರೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಸುಧಾಕರ್, ದೇಶ ವಿಭಜನೆ, ಕಾಶ್ಮೀರ ವಿಭಜನೆ, ತುರ್ತು ಪರಿಸ್ಥಿತಿ ಹೇರಿಕೆ, ಬೊಫೋರ್ಸ್ ಹಗರಣ. 2 G ಹಗರಣ.. ಇದೆಲ್ಲವೂ ಕಾಂಗ್ರೆಸ್ ನಡೆಸಿದ ವಿಭಜಕ ಆಡಳಿತದ ಫಲಶೃತಿ. ಇದಲ್ಲದರ ಸಾಕ್ಷಿ ಪ್ರಜ್ಞೆಯೇ ರಾಹುಲ್ ಗಾಂಧಿ ಎಂದು ವಾಗ್ದಾಳಿ ನಡೆಸಿದ್ದಾರೆ
ಕಾಶ್ಮೀರದಲ್ಲಿ ಹಿಂದುಗಳ ಮಾರಣ ಹೋಮ ನಡೆದಾಗ ಭಾರತ್ ಜೋಡೋ ಯಾತ್ರೆ ನೆನಪಾಗಲಿಲ್ಲ, ಮುಂಬಯಿ ಮೇಲೆ ಉಗ್ರರ ದಾಳಿ, ಬೋಧ ಗಯಾದಲ್ಲಿ ಭಯೋತ್ಪಾದಕ ದಾಳಿ ನಡೆದಾಗ ಸಹಭಾಳ್ವೆಯ ನೆನಪಾಗಲಿಲ್ಲ, ಕರ್ನಾಟಕದಲ್ಲಿ ಹಿಂದು ಕಾರ್ಯಕರ್ತರ ಸರಣಿ ನಡೆದಾಗ ಶಾಂತಿ ಮಂತ್ರದ ಸ್ಮರಣೆ ಬರಲಿಲ್ಲ. ಈಗ ಮರಳಿ ಅಧಿಕಾರ ಗಳಿಸುವುದಕ್ಕಾಗಿ ಇಷ್ಟೊಂದು ನಾಟಕವೇ? ಇನ್ನೇನು ಉಳಿಸಿದ್ದೀರಿ ಜೋಡಿಸುವುದಕ್ಕೆ? ನಿಮ್ಮ ಯಾತ್ರೆಯ ಕಾಲದಲ್ಲಿ ಒಮ್ಮೆಯಾದರೂ ಆತ್ಮವಿಮರ್ಶೆ ಮಾಡಿಕೊಂಡು ಈ ಪ್ರಶ್ನೆಗಳಿಗೆ ಉತ್ತರಿಸುವಿರಾ ಎಂದು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿಯನ್ನು ಯಾರು ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸೂತ್ರ ಹರಿದ ಗಾಳಿಪಠದಂತ ಒಂದು ವ್ಯರ್ಥ ಹಾರಾಟ.
ಗೊತ್ತು- ಗುರಿ ಎರಡೂ ಇಲ್ಲದ ಈ ನಡಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ವನ್ನು ನಿಂದಿಸುವ ಏಕಮಾತ್ರ ಉದ್ದೇಶ ಹೊಂದಿರುವುದು ವಿಪರ್ಯಾಸ.
1/5