Karnataka Politics: ಹಣ ಕೊಟ್ಟು ಸಚಿವರಾಗುವ ಸ್ಥಿತಿ ನಮ್ಮ ಪಕ್ಷದಲ್ಲಿಲ್ಲ: ಸಚಿವ ಸುನೀಲ್‌

Published : May 15, 2022, 07:54 AM IST
Karnataka Politics: ಹಣ ಕೊಟ್ಟು ಸಚಿವರಾಗುವ ಸ್ಥಿತಿ ನಮ್ಮ ಪಕ್ಷದಲ್ಲಿಲ್ಲ: ಸಚಿವ ಸುನೀಲ್‌

ಸಾರಾಂಶ

*   ರಾಜ್ಯಕ್ಕೆ ಒಳಿತಾಗುವ ನಿರ್ಧಾರವನ್ನೇ ಮುಖ್ಯಮಂತ್ರಿಗಳು ಕೈಗೊಳ್ಳುತ್ತಾರೆ *   ಪಕ್ಷವು ನಮಗೆ ಎಲ್ಲವನ್ನೂ ಕೊಟ್ಟಿದ್ದು, ನಾವು ಪಕ್ಷಕ್ಕೆ ಏನನ್ನೂ ಕೊಟ್ಟಿಲ್ಲ *  ಕಾಂಗ್ರೆಸ್‌ ಪಕ್ಷದವರು ನಾಯಕರೇ ಇಲ್ಲದೆ ಅನಾಥರಂತೆ ಕೋಣೆಯಲ್ಲಿದ್ದಾರೆ 

ದಾವಣಗೆರೆ(ಮೇ.15): ಹಣ ಕೊಟ್ಟು ಸಚಿವರಾಗುವ ಸ್ಥಿತಿ ನಮ್ಮ ಪಕ್ಷದಲ್ಲಿಲ್ಲ, ನಮ್ಮಲ್ಲಿ ವಿಚಾರಕ್ಕೆ ಆದ್ಯತೆಯೇ ಹೊರತು ಹಣಕ್ಕಲ್ಲ ಎಂದು ಸಚಿವ ಸುನೀಲ್‌ ಕುಮಾರ್‌ ಹೇಳಿದರು. ಸಚಿವ ಸಂಪುಟ(Cabinet Expansion) ವಿಸ್ತರಣೆಯೋ ಅಥವಾ ಪುನಾರಚನೆಯೋ ಅದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ರಾಜ್ಯಕ್ಕೆ ಒಳಿತಾಗುವ ನಿರ್ಧಾರವನ್ನೇ ಮುಖ್ಯಮಂತ್ರಿಗಳು ಕೈಗೊಳ್ಳುತ್ತಾರೆ. ನಮ್ಮ ವರಿಷ್ಠರಿಗೆ ದೂರದೃಷ್ಟಿಇದ್ದು, ಯಾವ ಸಮಯಕ್ಕೆ ಯಾವ ನಿರ್ಣಯ ಕೈಗೊಳ್ಳಬೇಕೆಂಬುದು ನಾಯಕರಿಗೆ ಗೊತ್ತಿದೆ ಎಂದರು.

ಪಕ್ಷವು ನಮಗೆ ಎಲ್ಲವನ್ನೂ ಕೊಟ್ಟಿದ್ದು, ನಾವು ಪಕ್ಷಕ್ಕೆ ಏನನ್ನೂ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ವಿಚಾರಕ್ಕೆ ಆದ್ಯತೆಯೇ ಹೊರತು, ಹಣಕ್ಕಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ನಾವು 2023ರ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ. ಕಾಂಗ್ರೆಸ್‌ ಪಕ್ಷದವರು ನಾಯಕರೇ ಇಲ್ಲದೆ ಅನಾಥರಂತೆ ಕೋಣೆಯಲ್ಲಿದ್ದಾರೆ ಎಂದರು.

ಜೂನ್ 30ರೊಳಗೆ ಕರ್ನಾಟಕದಲ್ಲಿ 1000 ರಿಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ

ರಾಜ್ಯದ ಜನತೆಗೆ ಭರವಸೆ ಇದ್ದರೆ ಅದು ಬಿಜೆಪಿ(BJP) ಮೇಲೆ ಹಾಗೂ ಪ್ರಧಾನಿ ಮೋದಿ(Narendra Modi) ನಾಯಕತ್ವದ ಮೇಲೆ ಮಾತ್ರ ಎಂದು ಅವರು ಹೇಳಿದರು.

ತುಳು ಲಿಪಿಯ ಯುನಿಕೋಡ್‌ ನಕಾಶೆಪಟ್ಟಿಗೆ ಅನುಮೋದನೆ ನೀಡಿ: ಸಚಿವ ಸುನಿಲ್‌ ಕುಮಾರ್‌

ಬೆಂಗಳೂರು: ಕರ್ನಾಟಕ ತುಳು ಅಕಾಡೆಮಿ(Karnataka Tulu Academy) ಸಲ್ಲಿಸಿರುವ ತುಳು ಲಿಪಿಯ ಯುನಿಕೋಡ್‌ ನಕಾಶೆಪಟ್ಟಿಗೆ ಆದಷ್ಟು ಶೀಘ್ರವೇ ಅನುಮೋದನೆ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌(V Sunil Kumar) ಅವರು ಯುನಿಕೋಡ್‌ ಕನ್ಸಾರ್ಟಿಯಂಗೆ ಕೋರಿದ್ದರು. 

ಸೋಮವಾರ ಈ ಕುರಿತು ವಿವರವಾದ ಪತ್ರ ಬರೆದಿರುವ ಅವರು, ಈ ನಕಾಶೆಪಟ್ಟಿಗೆ ಈಗಾಗಲೇ ಕರ್ನಾಟಕ ಸರ್ಕಾರವು(Government of Karnataka) ಅನುಮೋದನೆ ನೀಡಿದೆ. ಅಕಾಡೆಮಿ ಸಲ್ಲಿಸಿರುವ ತುಳು ಲಿಪಿಯ(Tulu Script) ಯೂನಿಕೋಡ್‌(Unicode) ನಕಾಶೆ ಪಟ್ಟಿಯನ್ನು ಅನುಮೋದನೆಗೆ ಪರಿಗಣಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ತುಳು ಅಕಾಡೆಮಿಯು ನಾನಾ ಹಂತಗಳಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ತುಳು ಲಿಪಿಯನ್ನು ಯೂನಿಕೋಡ್‌ ಶಿಷ್ಟತೆ ಅಳವಡಿಸಲು ಅಕಾಡೆಮಿ ತೆಗೆದುಕೊಂಡಿರುವ ಕ್ರಮಗಳನ್ನು ಸ್ವತಃ ಪರಿಶೀಲಿಸಿದ್ದೇನೆ. ತುಳು ಮುಂದಿನ ದಿನಗಳಲ್ಲಿ ಅನುಮೋದನೆ ನೀಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ವಿನಂತಿಸಿಕೊಂಡಿದ್ದರು.

Chikkamagaluru: ಶೃಂಗೇರಿ ಶಾರದಾ ಪೀಠಕ್ಕೆ ಇಂಧನ ಸಚಿವ ವಿ ಸುನೀಲ್ ಕುಮಾರ್ ಭೇಟಿ

ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ(Tulu Language) ಮತ್ತು ಲಿಪಿ ತಜ್ಞರು ಸರ್ವಾನುಮತದಿಂದ ರೂಪಿಸಿರುವ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯುನಿಕೋಡ್‌ ನಕಾಶೆಗೆ ಸೇರಿಸಲು ಅನುಮೋದನೆ ನೀಡಿದೆ. 

ಈ ಮೊದಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಅರವಿಂದ ಲಿಂಬಾವಳಿ ಅವರು 2021ರ ಜುಲೈ 17ರಂದು ತೆಗೆದುಕೊಂಡಿದ್ದ ನಿರ್ಧಾರವನ್ನು ಉಲ್ಲೇಖಿಸಲು ಇಚ್ಛಿಸುತ್ತೇನೆ. ಯುನಿಕೋಡ್‌ ಕನ್ಸಾರ್ಟಿಯಂ ಅನುಮೋದನೆ ಪಡೆದುಕೊಳ್ಳುವುದೂ ಸೇರಿದಂತೆ ತುಳು ಲಿಪಿಯನ್ನು ಯುನಿಕೋಡ್‌ ಶಿಷ್ಟತೆಗೆ ಅಳವಡಿಸುವ ಕುರಿತು ಅಗತ್ಯಕ್ರಮ ಕೈಗೊಳ್ಳುವಂತೆ ಅಂದು ಸೂಚಿಸಲಾಗಿತ್ತು. ಅದರಂತೆ ತುಳು ಅಕಾಡೆಮಿಯು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಕರ್ನಾಟಕದಲ್ಲಿ(Karnataka) ಬಹುದೊಡ್ಡ ಪ್ರದೇಶದಲ್ಲಿ ತುಳು ಭಾಷೆ ಜೀವಂತವಾಗಿದೆ. ತುಳು ಲಿಪಿಗೆ ಯುನಿಕೋಡ್‌ ಮಾನ್ಯತೆ ಪಡೆದುಕೊಳ್ಳುವುದು ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿ ನನ್ನ ಕರ್ತವ್ಯ ಎಂದು ಪತ್ರದಲ್ಲಿ ಹೇಳಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!