ಕೊರೋನಾ ಸೋಂಕಿನಿಂದ ಹೋಂ ಕ್ವಾರಂಟೈನ್‌ನಲ್ಲಿದ್ದ ಸಚಿವರು ದಿಢೀರ್ ಆಸ್ಪತ್ರೆಗೆ ಶಿಫ್ಟ್..!

By Suvarna News  |  First Published Oct 10, 2020, 5:56 PM IST

ಕೊರೋನಾ ಸೋಂಕಿನಿಂದಾಗಿ ಹೋಂ ಕ್ವಾರಂಟೈನ್‌ನಲ್ಲಿದ್ದ ಶಿಕ್ಷಣ ಸಚಿವ ಸುರೇಶ್ ಅವರನ್ನು ದಿಢೀರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.


ಬೆಂಗಳೂರು, (ಅ.10): ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೂ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಕುಮಾರ್ ಅವರು ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. 

Latest Videos

undefined

ಬಿಎಸ್‌ವೈ ಸಂಪುಟದ ಮತ್ತೋರ್ವ ಸಚಿವರೊಬ್ಬರಿಗೆ ಕೊರೋನಾ..!

ಆದ್ರೆ, ಇಂದು (ಶನಿವಾರ) ಸಂಜೆ  ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.  ವೈದ್ಯರ ಸಲಹೆ ಮೇರೆಗೆ ಜಯನಗರದ ಬಿಐಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. 

click me!