‘ನಮ್ಮ ಕುಟುಂಬದಲ್ಲಿ ಮತ್ತೆ ಮಂತ್ರಿ’ ವಿಡಿಯೋ ವೈರಲ್‌: ಜಾರಕಿಹೊಳಿ ಕುಟುಂಬಕ್ಕೆ 2 ವರ್ಷದ ಬಳಿಕ ಮಂತ್ರಿಗಿರಿ

By Kannadaprabha News  |  First Published May 23, 2023, 2:00 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಲೇ ಇತ್ತ ‘ನಮ್ಮ ಕುಟುಂಬದಲ್ಲಿ ಮತ್ತೆ ರಾಜ್ಯದ ಮಂತ್ರಿ’ ಶೀರ್ಷಿಕೆಯ ವಿಡಿಯೋ ವೈರಲ್‌ ಆಗಿದೆ. 


ಬೆಳಗಾವಿ (ಮೇ.23): ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಲೇ ಇತ್ತ ‘ನಮ್ಮ ಕುಟುಂಬದಲ್ಲಿ ಮತ್ತೆ ರಾಜ್ಯದ ಮಂತ್ರಿ’ ಶೀರ್ಷಿಕೆಯ ವಿಡಿಯೋ ವೈರಲ್‌ ಆಗಿದೆ. ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ರಚನೆಯಾದರೂ ಸಾಹುಕಾರ್‌ ಜಾರಕಿಹೊಳಿ ಕುಟುಂಬದ ಹೆಸರು ಸಚಿವ ಸಂಪುಟ ಪ್ರಮಾಣ ವಚನ ಪಟ್ಟಿಯಲ್ಲಿ ಇದ್ದೇ ಇರುತ್ತದೆ. ದಟ್‌ ಈಸ್‌ ಕಿಂಗ್‌ ಮೇಕರ್‌ ಫ್ಯಾಮಿಲಿ’ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ವರ್‌ ಹಾಕುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಪಕ್ಷಾತೀತವಾಗಿ ಇರುವ ಜಾರಕಿಹೊಳಿ ಕುಟುಂಬದ ಅಭಿಮಾನಿಗಳು 2004ರಿಂದ ಯಾವುದೇ ಸರ್ಕಾರ ಇದ್ದರೂ ಜಾರಕಿಹೊಳಿ ಕುಟುಂಬಕ್ಕೆ ಸಚಿವ ಸ್ಥಾನ ಫಿಕ್ಸ್‌ ಎಂಬುದನ್ನು ವಿಡಿಯೋ ವೈರಲ್‌ ಮೂಲಕ ಬಿತ್ತರಿಸುತ್ತಿದ್ದಾರೆ. 2004ರಲ್ಲಿ ಪ್ರಥಮ ಬಾರಿಗೆ ಜಾರಕಿಹೊಳಿ ಕುಟುಂಬದಿಂದ ಸತೀಶ್‌ ಜಾರಕಿಹೊಳಿ ಸಚಿವರಾಗಿ ಆಯ್ಕೆಯಾಗಿದ್ದರು. ನಂತರ 17 ವರ್ಷಗಳ ಕಾಲ ಯಾವುದೇ ಸರ್ಕಾರ ಬಂದರೂ ಜಾರಕಿಹೊಳಿ ಸಹೋದರರ ಪೈಕಿ ಬ್ಬರಾದರೂ ಮಂತ್ರಿ ಪದವಿ ಕಾಯ್ದುಕೊಳ್ಳುವಲ್ಲಿ ಸಫಲರಾಗುತ್ತಿದ್ದಾರೆ.

Tap to resize

Latest Videos

ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಜಟಾಪಟಿ!

ಬಿಜೆಪಿ ಸರ್ಕಾರದಲ್ಲಿ ಸಿಡಿ ಸುಳಿಗೆ ಸಿಕ್ಕು ರಮೇಶ ಜಾರಕಿಹೊಳಿ 2021ರ ಮಾರ್ಚ್‌ 3ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ 2021ರಿಂದ ಜಾರಕಿಹೊಳಿ ಕುಟುಂಬದಲ್ಲಿ ಯಾರೂ ಸಚಿವರಿರಲಿಲ್ಲ. ಈಗ ಕಾಂಗ್ರೆಸ್‌ ಸರ್ಕಾರದಲ್ಲಿ ಸತೀಶ್‌ ಜಾರಕಿಹೊಳಿ ಮಂತ್ರಿಯಾಗುವ ಮೂಲಕ ಕುಟುಂಬಕ್ಕೆ ಮಂತ್ರಿಗಿರಿ ತಪ್ಪುವುದಿಲ್ಲ ಎಂಬ ಸಂದೇಶ ಸಾರಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಪ್ರಸಕ್ತ ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿ ಆಗುತ್ತಿದ್ದಂತೆ ಜಾರಕಿಹೊಳಿ ಕುಟುಂಬದ ಅಭಿಮಾನಿಗಳು ಖುಷ್‌ ಆಗಿದ್ದಾರೆ.

ಪ್ರಕೃತಿ ಯಾರ ಕೈಯಲ್ಲೂ ಇಲ್ಲ, ಎಚ್ಚರಿಕೆ ಇರಬೇಕು: ಡಿ.ಕೆ.ಶಿವಕುಮಾರ್‌

ನಾಲ್ವರು ಜಾರಕಿಹೊಳಿ ಸಹೋದರರು ಸಕ್ರಿಯ: ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬದ ನಾಲ್ವರೂ ಸಹೋದರರು ಬೇರೆ ಬೇರೆ ಪಕ್ಷಗಳಿಂದ ಸಕ್ರಿಯರಾಗಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿರುವ ಸತೀಶ ಜಾರಕಿಹೊಳಿ ಸಚಿವರಾಗಿದ್ದರೆ, ಬಿಜೆಪಿಯಲ್ಲಿರುವ ಶಾಸಕ ರಮೇಶ್‌ ಜಾರಕಿಹೊಳಿ, ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪಕ್ಷದಲ್ಲಿ ಪ್ರಭಾವಿಗಳಾಗಿದ್ದಾರೆ. ಇನ್ನು ಪಕ್ಷೇತರ ಎಂಎಲ್‌ಸಿ ಆಗಿರುವ ಮತ್ತೋರ್ವ ಸಹೋದರ ಲಖನ್‌ ಜಾರಕಿಹೊಳಿ ಸಹ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

click me!