ಸಚಿವ ವಿ.ಸೋಮಣ್ಣ ಅವರ ಕಾಂಗ್ರೆಸ್ ಸೇರ್ಪಡೆ ಕುರಿತು ಕೇಳಿಬರುತ್ತಿರುವ ಮಾತುಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದಿದ್ದಾರೆ.
ಯಾದಗಿರಿ (ಮಾ.09): ಸಚಿವ ವಿ.ಸೋಮಣ್ಣ ಅವರ ಕಾಂಗ್ರೆಸ್ ಸೇರ್ಪಡೆ ಕುರಿತು ಕೇಳಿಬರುತ್ತಿರುವ ಮಾತುಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದಿದ್ದಾರೆ. ವಿಜಯ ಸಂಕಲ್ಪ ರಥಯಾತ್ರೆ ನಿಮಿತ್ಯ, ಮಂಗಳವಾರ ಸಂಜೆ ಯಾದಗಿರಿಗೆ ಆಗಮಿಸಿದ್ದ ಅವರು ಇಲ್ಲಿಯೇ ವಾಸ್ತವ್ಯ ಹೂಡಿದ್ದರು. ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರೂ ನಮ್ಮ ಜೊತೆಯಲ್ಲೇ ಇದ್ದಾರೆ, ಇರುತ್ತಾರೆ. ಬೆಂಗಳೂರಿಗೆ ಹೋದ ಮೇಲೆ ಎಲ್ಲರನ್ನೂ ಭೇಟಿ ಮಾಡಿ ಮಾತನಾಡುವುದಾಗಿ ಹೇಳಿದ ಅವರು, ಸೋಮಣ್ಣ ಸೇರಿದಂತೆ ಯಾರೊಬ್ಬರೂ ಕೂಡ ಬಿಜೆಪಿ ಪಕ್ಷ ಬಿಡುವುದಿಲ್ಲ ಎಂದರು.
ಮಾಡ್ಯಾಳ ಮೆರವಣಿಗೆ ನೋ ಕಮೆಂಟ್ಸ್: ಮಾಡ್ಯಾಳ ವಿರುಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿ.ಎಸ್.ಯಡಿಯೂರಪ್ಪ, ಇದರ ಬಗ್ಗೆ ಮಾಹಿತಿ ಇಲ್ಲ. ಇದರಲ್ಲಿ ವಾಸ್ತವಿಕ ಸ್ಥಿತಿ ಏನು ಅನ್ನೋದು ನಿಮಗೆ ಗೊತ್ತಿದೆ ಎಂದರಲ್ಲದೆ, ಮಧ್ಯಂತರ ಬೇಲ್ ಪಡೆದ ನಂತರ ಅದ್ಧೂರಿ ಮೆರವಣಿಗೆ ಬಗ್ಗೆ ನೋ ಕಮೆಂಟ್ಸ್, ಒಟ್ಟಿನಲ್ಲಿ ಅವರಿಗೆ ರಿಲೀಫ್ ಸಿಕ್ಕಿದೆ ಎಂದು ಚುಟುಕಾಗಿ ಪ್ರತಿಕ್ರಿಯಿಸಿ, ಪಕ್ಷ ಏನು ಕ್ರಮ ಕೈಗೊಳ್ಳುತ್ತದೋ ಗೊತ್ತಿಲ್ಲ ಎಂದರು.
undefined
ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಎಂದಿಗೂ ಒಂದಾಗೋಲ್ಲ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಹೇಳಿಕೆಗೆ ಕಡವೆ ಕಾಸಿನ ಕಿಮ್ಮತ್ತಿಲ್ಲ: ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ರಾಜ್ಯಕ್ಕೆ ಎಷ್ಟುಬಾರಿ ಬಂದರೂ ಕಾಂಗ್ರೇಸ್ ಅಧಿಕಾರಕ್ಕೆ ಬರುತ್ತದೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಬಿಎಸ್ವೈ, ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ವಿರೋಧ ಪಕ್ಷದ ನಾಯಕರಾಗಿ ಮಾತನಾಡುವುದು ಅವರ ಸ್ವಭಾವ. ಅವರ ಹೇಳಿಕೆಗೆ ನಾನು ಟೀಕೆ ಮಾಡೊದಕ್ಕೆ ಇಷ್ಟಪಡುವುದಿಲ್ಲ ಎಂದರು.
ವಿಜಯ ಸಂಕಲ್ಪ ಯಾತ್ರೆಗೆ ಸ್ಪಂದನೆ: ರಾಜ್ಯಾದ್ಯಂತ ಬಿಜೆಪಿ ವಿಜಯ ಸಂಕಲ್ಪಯಾತ್ರೆಗೆ ಹೆಚ್ಚಿನ ಜನ ಸ್ಪಂದನೆ ಸಿಗುತ್ತಿದೆ ಎಂದು ಬಿಎಸ್ವೈ ಹೇಳಿದರು. ಒಂದು ರೀತಿ ಚುನಾವಣೆ ಗೆದ್ದ ನಂತರ ವಿಜಯೋತ್ಸವ ರೀತಿಯಲ್ಲಿ ಜನ ಬಂದು ಬೆಂಬಲ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ 140 ಸ್ಥಾನ ಗೆದ್ದು ಸ್ಪಷ್ಟಬಹುಮತದೊಂದಿಗೆ ಬಿಜೆಪಿ ಸರಕಾರ ರಚನೆ ಮಾಡುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಮತ್ತೆ ರಾಜ್ಯಕ್ಕೆ ಮೂರು ನಾಲ್ಕು ಬಾರಿ ಬರುತ್ತಾರೆ ಎಂದರು.
ಕಾಂಗ್ರೆಸ್‌ನ ‘ಗ್ಯಾರಂಟಿ ಕಾರ್ಡ್’ ಭರವಸೆಗಳಿಗೆ ಮರುಳಾಗಬೇಡಿ: ಸಿಎಂ ಬೊಮ್ಮಾಯಿ
ಕಾಂಗ್ರೆಸ್‌ನಲ್ಲಿ ನಾನೇ ಮುಖ್ಯಮಂತ್ರಿ ಎಂದು ಅನೇಕರು ಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗುವುದಿಲ್ಲ ಎಂದು ಟಾಂಗ್ ನೀಡಿದರು. ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಗೆ ಸೇರುವ ಜನ ಹಾಗೂ ಬಿಜೆಪಿ ವಿಜಯಸಂಕಲ್ಪ ಯಾತ್ರೆಗೆ ಸೇರುವ ಜನರ ಕಂಪೇರ್ ಮಾಡಿದರೆ ಯಾರತ್ತ ಜನರ ಒಲವು ಅನ್ನೋದು ತಿಳಿಯುತ್ತದೆ. ಅಧಿಕಾರಕ್ಕೆ ಬರುವುದಕ್ಕೆ ಕಾಂಗ್ರೆಸ್‌ನವರು ಏನೇನೂ ಭರವಸೇ ಕೊಡುತ್ತಾರೆ, ಅವರ ಭರವಸೆಗಳಿಗೆ ಕವಡೇ ಕಾಸಿನ ಕಿಮ್ಮತ್ತು ಇಲ್ಲ ಎಂದು ಟೀಕಿಸಿದರು.